MS Dhoni Net Worth: 42ನೇ ವಸಂತಕ್ಕೆ ಕಾಲಿಟ್ಟ ಕ್ಯಾಪ್ಟನ್ ಕೂಲ್ ಧೋನಿ ಎಷ್ಟು ಸಾವಿರ ಕೋಟಿ ಒಡೆಯ ಗೊತ್ತಾ?

MS Dhoni Net Worth: .ಪ್ರಸ್ತುತ ಧೋನಿ ಅವರ ಆಸ್ತಿಯ ಮೌಲ್ಯ 1040 ಕೋಟಿ ರೂ. ಎಂದು ಹೇಳಲಾಗುತ್ತಿದೆ. ಇದರೊಂದಿಗೆ ರಾಂಚಿಯಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವವರಲ್ಲಿ ಧೋನಿ ಕೂಡ ಒಬ್ಬರು ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Jul 07, 2023 | 10:55 AM

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಂದು ತಮ್ಮ 42ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಧೋನಿ ವಿದಾಯ ಹೇಳಿ ವರ್ಷಗಳೇ ಕಳೆದಿದ್ದರೂ ಅವರ ಬ್ರ್ಯಾಂಡ್ ಮೌಲ್ಯ ಕೊಂಚವೂ ಕಡಿಮೆಯಾಗಿಲ್ಲ. ಹೀಗಾಗಿ ಧೋನಿ ಆದಾಯ ಕೂಡ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಸಾಗುತ್ತಿದೆ.

1 / 9
ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಮಹೇಂದ್ರ ಸಿಂಗ್ ಧೋನಿ ನಿವೃತ್ತರಾದ ಬಳಿಕವೂ ಅವರ ನಿವ್ವಳ ಮೌಲ್ಯ ವಿರಾಟ್ ಮತ್ತು ಅಮಿತಾಬ್ ಬಚ್ಚನ್‌ಗಿಂತ ಹೆಚ್ಚಾಗಿದೆ ಎಂದು ವರದಿ ಹೇಳುತ್ತಿದೆ. ಪ್ರಸ್ತುತ ಧೋನಿ ಅವರ ಆಸ್ತಿಯ ಮೌಲ್ಯ 1040 ಕೋಟಿ ರೂ. ಎಂದು ಹೇಳಲಾಗುತ್ತಿದೆ. ಇದರೊಂದಿಗೆ ರಾಂಚಿಯಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವವರಲ್ಲಿ ಧೋನಿ ಕೂಡ ಒಬ್ಬರು ಎಂದು ವರದಿಯಾಗಿದೆ.

2 / 9
ಪ್ರಸ್ತುತ ಧೋನಿ ತಿಂಗಳಿಗೆ 4 ಕೋಟಿಗೂ ಹೆಚ್ಚು ಆದಾಯ ಗಳಿಸುತ್ತಿದ್ದು, ಇನ್ನು ವಾರ್ಷಿಕವಾಗಿ 50 ಕೋಟಿಗೂ ಹೆಚ್ಚು ಆದಾಯ ಧೋನಿ ಅಕೌಂಟ್ ಸೇರುತ್ತಿದೆ.

3 / 9
ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಧೋನಿ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಹೀಗಾಗಿ ಧೋನಿ ಒಂದು ಆವೃತ್ತಿಗೆ ಚೆನ್ನೈ ಫ್ರಾಂಚೈಸಿಯಿಂದ 12 ಕೋಟಿ ರೂ. ಸಂಬಳ ಪಡೆಯುತ್ತಾರೆ.

4 / 9
ಧೋನಿ ತಮ್ಮದೇ ಚಿತ್ರ 'ಎಂಎಸ್ ಧೋನಿ: ದಿ ಅನ್‌ಟೋಲ್ಡ್ ಸ್ಟೋರಿ' ಮೂಲಕ ಸುಮಾರು 30 ಕೋಟಿ ರೂ. ಗಳಿಸಿದ್ದಾರೆ. ವರದಿಗಳ ಪ್ರಕಾರ, ಧೋನಿ ರಿತಿ ಸ್ಪೋರ್ಟ್ಸ್ ಎಂಬ ಮ್ಯಾನೇಜ್‌ಮೆಂಟ್ ಕಂಪನಿಯಲ್ಲಿ ಷೇರುಗಳನ್ನು ಸಹ ಹೊಂದಿದ್ದಾರೆ ಇದಲ್ಲದೆ, ಧೋನಿ ಬಟ್ಟೆ ಮತ್ತು ಪಾದರಕ್ಷೆಗಳ ಬ್ರಾಂಡ್ ಕಂಪನಿಯನ್ನು ಸಹ ಹೊಂದಿದ್ದಾರೆ.

5 / 9
ಧೋನಿ 30 ಬ್ರಾಂಡ್‌ಗಳಿಗೆ ಬ್ರಾಂಡ್ ಅಂಬಾಸೀಡರ್ ಆಗಿದ್ದು, ಮಾಸ್ಟರ್‌ಕಾರ್ಡ್, ಓರಿಯೊ, ಜಿಯೋ ಸಿನಿಮಾ, ಸ್ಕಿಪ್ಪರ್ ಪೈಪ್, ಫೈರ್-ಬೋಲ್ಟ್ ಮತ್ತು ಗಲ್ಫ್ ಆಯಿಲ್‌ನಂತಹ ಪ್ರಮುಖ ಬ್ರಾಂಡ್‌ಗಳಿಗೆ ಧೋನಿ ಜಾಹೀರಾತು ನೀಡಿದ್ದಾರೆ. ಇದರ ಜೊತೆಗೆ, ಅನಾಕಾಡೆಮಿ, ಭಾರತ್ ಮ್ಯಾಟ್ರಿಮೋನಿ, ನೆಟ್‌ಮೆಡ್ಸ್ ಮತ್ತು ಡ್ರೀಮ್11 ಸೇರಿದಂತೆ ಹಲವಾರು ಬ್ರ್ಯಾಂಡ್‌ಗಳಿಗೂ ಧೋನಿ ಬ್ರಾಂಡ್ ಅಂಬಾಸೀಡರ್ ಆಗಿದ್ದಾರೆ.

6 / 9
ಇನ್‌ಸ್ಟಾಗ್ರಾಮ್‌ನಲ್ಲಿ 43 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್ ಹೊಂದಿರುವ ಧೋನಿ ಸೋಶಿಯಲ್ ಮೀಡಿಯಾದಲ್ಲೂ ಸಾಕಷ್ಟು ಆದಾಯ ಗಳಿಸುತ್ತಾರೆ. ಇದೆಲ್ಲದರ ಹೊರತಾಗಿ ಧೋನಿ ಸ್ಟಾರ್ಟ್ಅಪ್ ಕಂಪನಿಗಳಲ್ಲೂ ಹೂಡಿಕೆ ಮಾಡಿದ್ದಾರೆ.

7 / 9
ಹಾಗೆಯೇ ಧೋನಿ ಸ್ಪೋರ್ಟ್ಸ್‌ಫಿಟ್ ವರ್ಲ್ಡ್ ಪ್ರೈವೇಟ್ ಲಿಮಿಟೆಡ್‌ನ ಪ್ರತಿಷ್ಠಿತ ಬ್ಯಾನರ್ ಅಡಿಯಲ್ಲಿ ದೇಶಾದ್ಯಂತ 200 ಕ್ಕೂ ಹೆಚ್ಚು ಜಿಮ್‌ಗಳನ್ನು ಹೊಂದಿದ್ದಾರೆ. ಅಲ್ಲದೆ ಮಹೀ ತಮ್ಮ ಫಾರ್ಮ್​ ಹೌಸ್​ನಲ್ಲಿ ದುಬಾರಿ ಬೆಲೆಯ ಕಾರು ಹಾಗೂ ಬೈಕ್​ಗಳಿಗಾಗಿ ಪ್ರತ್ಯೇಕ ಕಟ್ಟಡವನ್ನೇ ಕಟ್ಟಿದ್ದಾರೆ.

8 / 9
ಕ್ರಿಕೆಟ್ ಹೊರತಾಗಿ ಇತರ ಕ್ರೀಡೆಗಳ ಬಗ್ಗೆಯೂ ಆಸಕ್ತಿ ಹೊಂದಿರುವ ಧೋನಿ, ಫುಟ್‌ಬಾಲ್ ತಂಡ ಚೆನ್ನೈ ಎಫ್‌ಸಿ, ಮಾಹಿ ರೇಸಿಂಗ್ ಟೀಮ್ ಇಂಡಿಯಾ ಮತ್ತು ಫೀಲ್ಡ್ ಹಾಕಿ ತಂಡ ರಾಂಚಿ ರೇಸ್​ನ ಸಹ-ಮಾಲೀಕರಾಗಿದ್ದಾರೆ.

9 / 9
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ