MS Dhoni: ಐಪಿಎಲ್ ಸಿಕ್ಸರ್ ಕಿಂಗ್ಗಳ ಪಟ್ಟಿಗೆ ಎಂಎಸ್ ಧೋನಿ ಎಂಟ್ರಿ..!
TV9 Web | Updated By: ಝಾಹಿರ್ ಯೂಸುಫ್
Updated on:
Mar 31, 2023 | 11:40 PM
IPL 2023 Kannada: ಐಪಿಎಲ್ನಲ್ಲಿ ಒಂದೇ ತಂಡದ ಪರ 200 ಹಾಗೂ ಅದಕ್ಕಿಂತ ಹೆಚ್ಚಿನ ಸಿಕ್ಸ್ ಸಿಡಿಸಿದ 5ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ನಾಲ್ವರು ಆಟಗಾರರು ಮಾತ್ರ ಒಂದೇ ತಂಡದ ಅತ್ಯಧಿಕ ಸಿಕ್ಸ್ ಬಾರಿಸಿದ್ದರು. ಅವರೆಂದರೆ...
1 / 8
IPL 2023: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್ನಲ್ಲಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೆ ಈ ದಾಖಲೆ ಬರೆದ ಸಿಎಸ್ಕೆ ತಂಡದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.
2 / 8
ಹೌದು, ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ 20ನೇ ಓವರ್ನಲ್ಲಿ ಮಹೇಂದ್ರ ಸಿಂಗ್ ಧೋನಿ ಲೆಗ್ ಸೈಡ್ನತ್ತ ರಾಕೆಟ್ ಸಿಕ್ಸ್ ಸಿಡಿಸಿದ್ದರು. ಈ ಸಿಕ್ಸ್ನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಪರ 200 ಸಿಕ್ಸ್ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ದಾಖಲೆ ಧೋನಿ ಪಾಲಾಗಿದೆ.
3 / 8
ಅಲ್ಲದೆ ಐಪಿಎಲ್ನಲ್ಲಿ ಒಂದೇ ತಂಡದ ಪರ 200 ಹಾಗೂ ಅದಕ್ಕಿಂತ ಹೆಚ್ಚಿನ ಸಿಕ್ಸ್ ಸಿಡಿಸಿದ 5ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ನಾಲ್ವರು ಆಟಗಾರರು ಮಾತ್ರ ಒಂದೇ ತಂಡದ ಅತ್ಯಧಿಕ ಸಿಕ್ಸ್ ಬಾರಿಸಿದ್ದರು. ಅವರೆಂದರೆ...
4 / 8
1- ಕ್ರಿಸ್ ಗೇಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದ ಕ್ರಿಸ್ ಗೇಲ್ ಒಟ್ಟು 239 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಆರ್ಸಿಬಿ ಪರ ಹಾಗೂ ಒಂದೇ ತಂಡದ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಗೇಲ್ ನಿರ್ಮಿಸಿದ್ದಾರೆ.
5 / 8
2- ಎಬಿ ಡಿವಿಲಿಯರ್ಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿವಲಿಯರ್ಸ್ ಕೂಡ ಆರ್ಸಿಬಿ ಪರ ಒಟ್ಟು 238 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಒಂದೇ ತಂಡದ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.
6 / 8
3- ಕೀರನ್ ಪೊಲಾರ್ಡ್: ಮುಂಬೈ ಇಂಡಿಯನ್ಸ್ ಪರ 223 ಸಿಕ್ಸ್ಗಳನ್ನು ಸಿಡಿಸಿರುವ ಕೀರನ್ ಪೊಲಾರ್ಡ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
7 / 8
4- ವಿರಾಟ್ ಕೊಹ್ಲಿ: ಐಪಿಎಲ್ ಆರಂಭದಿಂದಲೂ ಆರ್ಸಿಬಿ ಪರ ಆಡುತ್ತಿರುವ ವಿರಾಟ್ ಕೊಹ್ಲಿ ಇದುವರೆಗೆ 218 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಸಿಕ್ಸರ್ ಸರದಾರರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.
8 / 8
5- ಮಹೇಂದ್ರ ಸಿಂಗ್ ಧೋನಿ: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ಸಿಎಸ್ಕೆ ಪರ 200 ಸಿಕ್ಸ್ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.