IPL 2025: ಅನ್‌ಕ್ಯಾಪ್ಡ್ ಕ್ಯಾಪ್ಟನ್; ಐಪಿಎಲ್‌ನಲ್ಲಿ ಹೀಗೊಂದು ದಾಖಲೆ ಬರೆದ ಧೋನಿ
MS Dhoni Uncapped IPL Captain: ಐಪಿಎಲ್ 2025ರಲ್ಲಿ ಎಂಎಸ್ ಧೋನಿ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅನ್‌ಕ್ಯಾಪ್ಡ್ ಆಟಗಾರನಾಗಿ ನಾಯಕತ್ವ ವಹಿಸಿಕೊಂಡ ಮೊದಲ ಆಟಗಾರ ಎಂಬ ದಾಖಲೆ ಧೋನಿ ಪಾಲಾಗಿದೆ. 43 ವರ್ಷ ವಯಸ್ಸಿನ ಧೋನಿ, ಐಪಿಎಲ್‌ನ ಅತ್ಯಂತ ಹಿರಿಯ ನಾಯಕರಾಗಿಯೂ ಹೊಸ ದಾಖಲೆ ನಿರ್ಮಿಸಿದ್ದಾರೆ.
Updated on: Apr 11, 2025 | 5:14 PM

ಐಪಿಎಲ್ 2025 ರಲ್ಲಿ, 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ನ ಸ್ಥಿತಿ ಇಷ್ಟೊಂದು ಕೆಟ್ಟದಾಗಿರುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಯಾರಾದರೂ ಇದನ್ನು ಊಹಿಸಿದ್ದರೂ ಸಹ, ಸೀಸನ್ನ ಮಧ್ಯದಲ್ಲಿ ಎಂಎಸ್ ಧೋನಿ ಮತ್ತೆ ತಂಡದ ನಾಯಕತ್ವ ವಹಿಸಿಕೊಳ್ಳುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಆದರೆ ಈಗ ಅದು ಸಂಭವಿಸಿದೆ.

ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ಎಂಎಸ್ ಧೋನಿ ಮತ್ತೊಮ್ಮೆ ಚೆನ್ನೈ ತಂಡದ ನಾಯಕರಾಗಿದ್ದಾರೆ. ಇದರೊಂದಿಗೆ, ಧೋನಿ ಐಪಿಎಲ್‌ನಲ್ಲಿ ಇದುವರೆಗೆ ಸಂಭವಿಸದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಈ ಮೂಲಕ ಧೋನಿ ಐಪಿಎಲ್ ಇತಿಹಾಸದಲ್ಲಿ ನಾಯಕತ್ವ ಪಡೆದ ಮೊದಲ ಅನ್‌ಕ್ಯಾಪ್ಡ್ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

ಹೌದು... ಐಪಿಎಲ್ ಇತಿಹಾಸದಲ್ಲಿ ತಂಡವೊಂದರ ನಾಯಕತ್ವ ವಹಿಸಿಕೊಂಡ ಮೊದಲ ಅನ್‌ಕ್ಯಾಪ್ಡ್ ಆಟಗಾರ ಎಂಎಸ್ ಧೋನಿ. ವಾಸ್ತವವಾಗಿ 5 ವರ್ಷಗಳ ಹಿಂದೆ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಅಥವಾ 5 ವರ್ಷಗಳ ಕಾಲ ಯಾವುದೇ ಅಂತರರಾಷ್ಟ್ರೀಯ ಪಂದ್ಯದ ಆಡುವ ಹನ್ನೊಂದರ ಬಳಗದ ಭಾಗವಾಗಿರದ ಆಟಗಾರರನ್ನು ಅನ್‌ಕ್ಯಾಪ್ಡ್ ಆಟಗಾರರೆಂದು ಪರಿಗಣಿಸಲಾಗುತ್ತದೆ.

ಟೀಮ್ ಇಂಡಿಯಾ ಪರ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸುಮಾರು 500 ಪಂದ್ಯಗಳನ್ನು ಆಡಿರುವ ಧೋನಿ, ಆಗಸ್ಟ್ 2020 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದರು. ಆದರೆ ಜುಲೈ 2019 ರಿಂದ ಅವರು ಯಾವುದೇ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಸಿಎಸ್‌ಕೆ ಅವರನ್ನು ಅನ್‌ಕ್ಯಾಪ್ಡ್ ಪ್ಲೇಯರ್ ಆಗಿ ತಂಡದಲ್ಲಿ ಉಳಿಸಿಕೊಂಡಿತ್ತು.

ಇದರೊಂದಿಗೆ, ಧೋನಿಗೆ ಐಪಿಎಲ್‌ನ ಅತ್ಯಂತ ಹಿರಿಯ ನಾಯಕ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಧೋನಿ ಪ್ರಸ್ತುತ 43 ವರ್ಷ 278 ದಿನಗಳ ವಯಸ್ಸಿನವರಾಗಿದ್ದು, ತಮ್ಮದೇ ಆದ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ಇದಕ್ಕೂ ಮೊದಲು, 2023 ರ ಐಪಿಎಲ್ ಫೈನಲ್‌ನಲ್ಲಿ ಅವರು ತಂಡದ ನಾಯಕತ್ವ ವಹಿಸಿದಾಗ, ಅವರ ವಯಸ್ಸು 41 ವರ್ಷ ಮತ್ತು 325 ದಿನಗಳಾಗಿದ್ದವು.



















