MS Dhoni: ಸ್ವಾತಂತ್ರ್ಯ ದಿನದಂದೇ ಎಂ. ಎಸ್ ಧೋನಿ ನಿವೃತ್ತಿ ಘೋಷಿಸಲು ಕಾರಣವೇನು ಗೊತ್ತೇ?

MS Dhoni retirement: ಇಷ್ಟೆಲ್ಲ ಸಾಧನೆ ಮಾಡಿರುವ ಧೋನಿ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದೇ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದರು. ಅದು ಯಾಕೆ?

TV9 Web
| Updated By: Vinay Bhat

Updated on: Aug 15, 2021 | 8:06 AM

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಕಳೆದ ವರ್ಷ ಆಗಸ್ಟ್ 15 ರಂದು ವಿದಾಯ ಘೋಷಿಸಿದ್ದರು. ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು ಸ್ವಾತಂತ್ರ್ಯ ದಿನಾಚರಣೆಯಂದೇ ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದರು.

1 / 7
ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಭಾರತ ತಂಡ 2007 ಐಸಿಸಿ ಟಿ20 ವಿಶ್ವಕಪ್ ಗೆದ್ದಿತ್ತು. ನಂತರ, 2011ರಲ್ಲಿ ತವರಿನಲ್ಲಿ ನಡೆದಿದ್ದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಭಾರತಕ್ಕೆ ಎರಡನೇ ವಿಶ್ವಕಪ್ ತಂದುಕೊಟ್ಟಿದ್ದರು.

2 / 7
ಅಷ್ಟೇ ಅಲ್ಲದೆ 2013ರಲ್ಲಿ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ ತಂದುಕೊಟ್ಟಿದ್ದರು. ಆ ಮೂಲಕ ಐಸಿಸಿ ಹೆಚ್ಚು ಟ್ರೋಫಿಗಳನ್ನು ಗೆದ್ದ ಭಾರತದ ಏಕೈಕ ನಾಯಕ ಎಂಬ ಖ್ಯಾತಿಗೆ ಧೋನಿ ಬಾಜನರಾಗಿದ್ದರು.

3 / 7
ಇಷ್ಟೆಲ್ಲ ಸಾಧನೆ ಮಾಡಿರುವ ಧೋನಿ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದೇ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದರು. ಅದು ಯಾಕೆ?

4 / 7
ಮಹೇಂದ್ರ ಸಿಂಗ್ ಧೋನಿಯವರು ಓರ್ವ ನಿಜವಾದ ದೇಶಭಕ್ತ. ನಮ್ಮ ದೇಶದ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿದ್ದಾರೆ. ಸ್ವಾತಂತ್ರ್ಯ ಬಂದ ದಿನದಷ್ಟು ಮಹತ್ವದ ದಿನ ಇನ್ನೊಂದಿಲ್ಲ ಎಂಬುದು ಅವರ ಭಾವನೆ. ಅದೇ ಕಾರಣಕ್ಕೆ ಆಗಸ್ಟ್ 15ರಂದು ತಮ್ಮ ನಿವೃತ್ತಿ ಘೋಷಣೆ ಮಾಡಿದ್ದರಂತೆ.

5 / 7
2004ರ ಡಿಸೆಂಬರ್ 24 ರಂದು ಬಾಂಗ್ಲಾದೇಶ ವಿರುದ್ಧ ಎಂಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಆ ಸರಣಿಯಲ್ಲಿ ವಿಫಲರಾದ ಧೋನಿ, 2005ರ ಪಾಕಿಸ್ತಾನ ವಿರುದ್ಧದ ಓಡಿಐ ಸರಣಿಯಲ್ಲಿ ಸಫಲರಾದರು. ವಿಶಾಖಪಟ್ಟಣಂನಲ್ಲಿ ನಡೆದಿದ್ದ 5ನೇ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿದ್ದರು.

6 / 7
ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್​ನಲ್ಲಿ ಸಾಧನೆ ಪರಿಗಣಿಸಿ ಭಾರತ ಸರ್ಕಾರ ರಾಜೀವ್ ಗಾಂಧಿ ಖೇಲ್ ರತ್ನ (2007), ಪದ್ಮ ಶ್ರೀ (2009) ಹಾಗೂ ಪದ್ಮ ಭೂಷಣ್ (2018) ನೀಡಿ ಗೌರವಿಸಿದೆ.

7 / 7
Follow us