AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ಮಾತ್ರವಲ್ಲ: ಇವರು ಕೂಡ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಆಟಗಾರರು: ಇಲ್ಲಿದೆ ಪಟ್ಟಿ

2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಭಾರತದ ಶೂಟರ್ ಅಭಿನವ್ ಬಿಂದ್ರಾ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು. 2011 ರಲ್ಲಿ, ಅಭಿನವ್ ಬಿಂದ್ರಾ ಅವರಿಗೆ ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಯನ್ನು ನೀಡಲಾಯಿತು. ಇವರ ಜೊತೆ ರಾಜ್ಯವರ್ಧನ್ ಸಿಂಗ್, ಕಪಿಲ್ ದೇವ್ ಕೂಡ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

Vinay Bhat
| Updated By: Digi Tech Desk|

Updated on:Feb 14, 2024 | 3:07 PM

Share
ಭಾರತದ ಹಲವು ಆಟಗಾರರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಇದರಲ್ಲಿ ವಿಶೇಷವಾಗಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಯನ್ನು ಪಡೆದಿದ್ದಾರೆ. ಆದರೆ ಸಚಿನ್ ತೆಂಡೂಲ್ಕರ್ ಮತ್ತು ಕಪಿಲ್ ದೇವ್ ಅವರಂತಹ ಕ್ರಿಕೆಟಿಗರು ಸಹ ಭಾರತೀಯ ಸೇನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದು ನಿಮಗೆ ತಿಳಿದಿದೆಯೇ?.

1 / 6
ಭಾರತದ ಮಾಜಿ ದಂತಕಥೆ ಸಚಿನ್ ತೆಂಡೂಲ್ಕರ್ ಅವರು ಭಾರತೀಯ ವಾಯುಪಡೆಯೊಂದಿಗೆ ಸಂಬಂಧ ಹೊಂದಿದ್ದಾರೆ. ಭಾರತೀಯ ವಾಯುಪಡೆಯು 2010 ರಲ್ಲಿ ಸಚಿನ್ ತೆಂಡೂಲ್ಕರ್ ಅವರಿಗೆ ಗ್ರೂಪ್ ಕ್ಯಾಪ್ಟನ್ ಶ್ರೇಣಿಯನ್ನು ನೀಡಿತು.

2 / 6
ಭಾರತ ತಂಡ 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿತ್ತು. ಆಗ ಮಹೇಂದ್ರ ಸಿಂಗ್ ಧೋನಿ ಭಾರತ ತಂಡದ ನಾಯಕ ಆಗಿದ್ದರು. ಅದೇ ಸಮಯದಲ್ಲಿ ಧೋನಿಗೆ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಯನ್ನು ನೀಡಲಾಯಿತು. ಭಾರತದ ಮಾಜಿ ನಾಯಕ 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

3 / 6
2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಭಾರತದ ಶೂಟರ್ ಅಭಿನವ್ ಬಿಂದ್ರಾ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು. 10 ಮೀಟರ್ ರೈಫಲ್ ಶೂಟಿಂಗ್‌ನಲ್ಲಿ ಅವರು ಈ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ನಂತರ, 2011 ರಲ್ಲಿ, ಅಭಿನವ್ ಬಿಂದ್ರಾ ಅವರಿಗೆ ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಯನ್ನು ನೀಡಲಾಯಿತು.

4 / 6
ರಾಜ್ಯವರ್ಧನ್ ಸಿಂಗ್ ರಾಥೋಡ್ 2004 ರ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದರು. ಒಲಿಂಪಿಕ್ಸ್‌ನಲ್ಲಿ ವೈಯಕ್ತಿಕ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ರಾಜ್ಯವರ್ಧನ್ ಅವರು 1990 ರಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಿಂದ ಪದವಿ ಪಡೆದರು. ಅವರು 2013 ರವರೆಗೂ ಭಾರತೀಯ ಸೇನೆಯೊಂದಿಗೆ ಸಂಬಂಧ ಹೊಂದಿದ್ದರು. ಆ ನಂತರ ರಾಜಕೀಯದತ್ತ ಮುಖ ಮಾಡಿದರು.

5 / 6
1983ರಲ್ಲಿ ಭಾರತ ತಂಡ ಮೊದಲ ಬಾರಿಗೆ ವಿಶ್ವಕಪ್ ಗೆದ್ದಿತ್ತು. ಆಗ ಕಪಿಲ್ ದೇವ್ ಭಾರತ ತಂಡದ ನಾಯಕ ಆಗಿದ್ದರು. ಬಳಿಕ 2008 ರಲ್ಲಿ ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ಬಡ್ತಿ ಪಡೆದರು. ಕಪಿಲ್ ಪಂಜಾಬ್ ರೆಜಿಮೆಂಟ್ ಗೆ ಸೇರಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು.

6 / 6

Published On - 9:27 am, Fri, 9 February 24