Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ವಿರುದ್ಧ ವಿಶ್ವ ದಾಖಲೆ ಬರೆದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಪುತ್ರ..!

Muhammad Abbas Record: ಪಾಕಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 344 ರನ್ ಕಲೆಹಾಕಿದರೆ, ಪಾಕಿಸ್ತಾನ್ 271 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಕಿವೀಸ್ ಪಡೆ 73 ರನ್​ಗಳ ಗೆಲುವು ದಾಖಲಿಸಿದೆ. ಇನ್ನು ಈ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿದ ಮುಹಮ್ಮದ್ ಅಬ್ಬಾಸ್ ಭರ್ಜರಿ ದಾಖಲೆಯನ್ನು ನಿರ್ಮಿಸಿ ಮಿಂಚಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 29, 2025 | 1:54 PM

ನೇಪಿಯರ್​ನ ಮೆಕ್​ಲೀನ್ ಪಾರ್ಕ್ ಮೈದಾನದಲ್ಲಿ ನಡೆದ ಪಾಕಿಸ್ತಾನ್ (Pakistan) ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಬಾರಿಸಿ ಮುಹಮ್ಮದ್ ಅಬ್ಬಾಸ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಪಾದಾರ್ಪಣೆ ಪಂದ್ಯದಲ್ಲಿ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಎಂಬುದು ವಿಶೇಷ.

1 / 5
ಪಾಕಿಸ್ತಾನ್ ವಿರುದ್ಧದ ಈ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಮುಹಮ್ಮದ್ ಅಬ್ಬಾಸ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಚೊಚ್ಚಲ ಏಕದಿನ ಪಂದ್ಯದಲ್ಲೇ ಅತೀ ಕಡಿಮೆ ಎಸೆತದಲ್ಲಿ ಅರ್ಧಶತಕ ಬಾರಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

2 / 5
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಕೃನಾಲ್ ಪಾಂಡ್ಯ ಹೆಸರಿನಲ್ಲಿತ್ತು. 2021 ರಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಪಾಂಡ್ಯ ಕೇವಲ 26 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಮುಹಮ್ಮದ್ ಅಬ್ಬಾಸ್ ಈ ದಾಖಲೆ ಮುರಿದಿದ್ದಾರೆ.

3 / 5
ಪಾಕಿಸ್ತಾನ್ ವಿರುದ್ಧ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಚೊಚ್ಚಲ ಏಕದಿನ ಪಂದ್ಯದಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಮುಹಮ್ಮದ್ ಅಬ್ಬಾಸ್ ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ 26 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 52 ರನ್ ಬಾರಿಸಿ ಮಿಂಚಿದರು.

Abbasಪಾಕಿಸ್ತಾನ್ ವಿರುದ್ಧ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಚೊಚ್ಚಲ ಏಕದಿನ ಪಂದ್ಯದಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಮುಹಮ್ಮದ್ ಅಬ್ಬಾಸ್ ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ 26 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 52 ರನ್ ಬಾರಿಸಿ ಮಿಂಚಿದರು.

4 / 5
ವಿಶೇಷ ಎಂದರೆ ಮುಹಮ್ಮದ್ ಅಬ್ಬಾಸ್ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಝರ್ ಅಬ್ಬಾಸ್ ಅವರ ಸುಪುತ್ರ. 90ರ ದಶಕದಲ್ಲಿ ಪಾಕ್​ನಲ್ಲಿ ಆಡಿದ್ದ ಅಝರ್ ಆ ಬಳಿಕ ನ್ಯೂಝಿಲೆಂಡ್​ಗೆ ವಲಸೆ ಹೋಗಿದ್ದರು. ಅಲ್ಲಿನ ಪೌರತ್ವವನ್ನು ಪಡೆದಿದ್ದರು. ಇದೀಗ ಅಝರ್ ಅಬ್ಬಾಸ್ ಅವರ ಪುತ್ರ ಮುಹಮ್ಮದ್ ಅಬ್ಬಾಸ್ ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ನ್ಯೂಝಿಲೆಂಡ್ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದಾರೆ. ಅದು ಕೂಡ ವಿಶ್ವ ದಾಖಲೆಯೊಂದಿಗೆ ಎಂಬುದು ವಿಶೇಷ.

5 / 5
Follow us