Ranji Trophy 2024 Final: ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್..!
Ranji Trophy 2024 Final: ರಣಜಿ ಟ್ರೋಫಿಯಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿರುವ ಸರ್ಫರಾಜ್ ಖಾನ್ ಸಹೋದರ ಮುಶೀರ್ ಖಾನ್, ವಿದರ್ಭ ವಿರುದ್ಧದ ಫೈನಲ್ ಪಂದ್ಯದ 2ನೇ ಇನ್ನಿಂಗ್ಸ್ನಲ್ಲಿ 326 ಎಸೆತಗಳಲ್ಲಿ 10 ಬೌಂಡರಿ ಸಹಿತ 136 ರನ್ಗಳ ಅಮೋಘ ಇನ್ನಿಂಗ್ಸ್ ಆಡಿದರು. ಈ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದರು.
1 / 6
ಅಂಡರ್-19 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪರ ಅಮೋಘ ಪ್ರದರ್ಶನ ನೀಡಿದ್ದ ಯುವ ಆಲ್ರೌಂಡರ್ ಮುಶೀರ್ ಖಾನ್, ಇದೀಗ ರಣಜಿ ಟ್ರೋಫಿಯಲ್ಲೂ ತಮ್ಮ ಅದ್ಭುತ ಫಾರ್ಮ್ ಮುಂದುವರೆಸಿದ್ದಾರೆ. ಮುಂಬೈ ಮತ್ತು ವಿದರ್ಭ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿರುವ ಮುಶೀರ್ ಖಾನ್, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ 29 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.
2 / 6
ರಣಜಿ ಟ್ರೋಫಿಯಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿರುವ ಸರ್ಫರಾಜ್ ಖಾನ್ ಸಹೋದರ ಮುಶೀರ್ ಖಾನ್, ವಿದರ್ಭ ವಿರುದ್ಧದ ಫೈನಲ್ ಪಂದ್ಯದ 2ನೇ ಇನ್ನಿಂಗ್ಸ್ನಲ್ಲಿ 326 ಎಸೆತಗಳಲ್ಲಿ 10 ಬೌಂಡರಿ ಸಹಿತ 136 ರನ್ಗಳ ಅಮೋಘ ಇನ್ನಿಂಗ್ಸ್ ಆಡಿದರು. ಈ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದರು.
3 / 6
ಫೈನಲ್ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದ ಮುಶೀರ್ ಖಾನ್ಗೆ ಪ್ರಸಕ್ತ ರಣಜಿಯಲ್ಲಿ ಇದು ಎರಡನೇ ಶತಕವಾಗಿದೆ. ಇದಕ್ಕೂ ಮುನ್ನ ಬರೋಡಾ ವಿರುದ್ಧದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮುಶೀರ್ ದ್ವಿಶತಕದ ಇನ್ನಿಂಗ್ಸ್ ಆಡಿದ್ದರು.
4 / 6
ಈ ಮೂಲಕ ಮುಶೀರ್ ಅತಿ ಕಡಿಮೆ ವಯಸ್ಸಿನಲ್ಲಿ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. 1994-95 ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ 21ನೇ ವಯಸ್ಸಿನಲ್ಲಿ ಪಂಜಾಬ್ ವಿರುದ್ಧ 140 ರನ್ಗಳ ಇನ್ನಿಂಗ್ಸ್ ಆಡಿದ್ದರು.
5 / 6
ಇದೀಗ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿರುವ ಮುಶೀರ್ 19 ವರ್ಷ 14 ದಿನಗಳಲ್ಲಿ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿ, ರಣಜಿ ಫೈನಲ್ನಲ್ಲಿ ಶತಕ ಬಾರಿಸಿದ ಅತೀ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.
6 / 6
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಪಂದ್ಯದಲ್ಲಿ ಇಲ್ಲಿಯವರೆಗೆ ಮುಂಬೈ ಮೇಲುಗೈ ಸಾಧಿಸಿದೆ. ವಿದರ್ಭ ಗೆಲುವಿಗೆ ಮುಂಬೈ 538 ರನ್ಗಳ ಗುರಿ ನೀಡಿದ್ದು, ಈ ಗುರಿ ಬೆನ್ನಟ್ಟಿರುವ ವಿದರ್ಭ ತಂಡ 4ನೇ ದಿನದಾಟದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 248 ರನ್ ಕಲೆಹಾಕಿದೆ. ಕೊನೆಯ ದಿನದಲ್ಲಿ ವಿದರ್ಭ ತಂಡ 90 ಓವರ್ಗಳಲ್ಲಿ 290 ರನ್ ಕಲೆಹಾಕಬೇಕಿದೆ.