AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ನಲ್ಲಿ ಹೊಸ ಇತಿಹಾಸ ರಚಿಸಿದ ಮುಂಬೈ ಇಂಡಿಯನ್ಸ್

IPL 2025 MI vs LSG: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 45ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 215 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 161 ರನ್​ಗಳಿಗೆ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: Apr 28, 2025 | 10:24 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​​ನ 45ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಮುಂಬೈ ಇಂಡಿಯನ್ಸ್ (MI) ತಂಡ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 7
ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ಆರಂಭಿಕ ದಾಂಡಿಗ ರಯಾನ್ ರಿಕೆಲ್ಟನ್ (58) ಅರ್ಧಶತಕ ಬಾರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 54 ರನ್​ ಚಚ್ಚಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 20 ಓವರ್​ಗಳಲ್ಲಿ 215 ರನ್ ಕಲೆಹಾಕಿತು.

2 / 7
ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಎಲ್​ಎಸ್​ಜಿ ಪಡೆ 10 ಓವರ್​ಗಳಲ್ಲಿ 100 ರನ್​ಗಳ ಗಡಿ ತಲುಪಿತ್ತು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಲಕ್ನೋ ಸೂಪರ್ ಜೈಂಟ್ಸ್ ತಂಡವು 161 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 54 ರನ್​ಗಳ ಜಯ ಸಾಧಿಸಿದೆ.

3 / 7
ಈ ಗೆಲುವಿನೊಂದಿಗೆ ಐಪಿಎಲ್​​ ಇತಿಹಾಸದಲ್ಲಿ 150 ಪಂದ್ಯಗಳಲ್ಲಿ ಜಯ ಸಾಧಿಸಿದ ಮೊದಲ ತಂಡವೆಂಬ ಕೀರ್ತಿಯನ್ನು ಮುಂಬೈ ಇಂಡಿಯನ್ಸ್ ತನ್ನದಾಗಿಸಿಕೊಂಡಿದೆ. ಮುಂಬೈ ಪಡೆ ಐಪಿಎಲ್​ನಲ್ಲಿ ಈವರೆಗೆ 271 ಪಂದ್ಯಗಳನ್ನಾಡಿದ್ದು, ಈ ವೇಳೆ 150 ಪಂದ್ಯಗಳಲ್ಲಿ ಗೆಲುವು ಹಾಗೂ 119 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ.

4 / 7
ಇನ್ನು ಐಪಿಎಲ್​ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್. ಸಿಎಸ್​ಕೆ ತಂಡವು ಈವರೆಗೆ 248 ಪಂದ್ಯಗಳನ್ನಾಡಿದ್ದು, ಈ ವೇಳೆ 140 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 105 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ.

5 / 7
ಹಾಗೆಯೇ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ. ಕೆಕೆಆರ್ ತಂಡವು ಈವರೆಗೆ 261 ಪಂದ್ಯಗಳನ್ನಾಡಿದ್ದು, ಈ ವೇಳೆ 134 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 122 ಪಂದ್ಯಗಳಲ್ಲಿ ಸೋಲನುಭವಿಸಿದೆ. 

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿದೆ. ಆರ್​ಸಿಬಿ ತಂಡ ಈವರೆಗೆ 266 ಪಂದ್ಯಗಳನ್ನಾಡಿದ್ದು, ಈ ವೇಳೆ 129 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 131 ಮ್ಯಾಚ್​ಗಳಲ್ಲಿ ಪರಾಜಯಗೊಂಡಿದೆ.

7 / 7
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ

ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ

ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ

ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ

ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ

ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ