ವಿಶ್ವ ದಾಖಲೆ… ಮುಂಬೈ ಇಂಡಿಯನ್ಸ್​ ಮುಡಿಗೆ 13ನೇ ಟ್ರೋಫಿ

Updated on: Jul 14, 2025 | 12:30 PM

MUMBAI INDIANS: ಮುಂಬೈ ಇಂಡಿಯನ್ಸ್​ ಫ್ರಾಂಚೈಸಿಯು ಐಪಿಎಲ್​, ಡಬ್ಲ್ಯೂಪಿಎಲ್, ಎಸ್​ಎ20, ಐಎಲ್​ಟಿ20, ಎಂಎಲ್​ಸಿ ಹಾಗೂ ಸಿಎಲ್​ಟಿ20 ಲೀಗ್​ಗಳಲ್ಲಿ ತಂಡಗಳನ್ನು ಕಣಕ್ಕಿಳಿಸಿದೆ. ಈ ಆರು ಲೀಗ್​​ಗಳ ಮೂಲಕ ಮುಂಬೈ ಇಂಡಿಯನ್ಸ್ ಮುಡಿಗೇರಿಸಿಕೊಂಡಿರುವುದು ಬರೋಬ್ಬರಿ 13 ಟ್ರೋಫಿಗಳನ್ನು. ಈ ಮೂಲಕ ಟಿ20 ಇತಿಹಾಸದಲ್ಲೇ ಅತ್ಯಧಿಕ ಟ್ರೋಫಿ ಗೆದ್ದ ಫ್ರಾಂಚೈಸಿ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

1 / 9
ಟಿ20 ಕ್ರಿಕೆಟ್ ಲೀಗ್​ ಇತಿಹಾಸದ ಅತ್ಯಂತ ಯಶಸ್ವಿ ಫ್ರಾಂಚೈಸಿ ಎಂದರೆ ಅದು ಮುಂಬೈ ಇಂಡಿಯನ್ಸ್ (MI). ಏಕೆಂದರೆ ಈ ಫ್ರಾಂಚೈಸಿ ಕಣಕ್ಕಿಳಿದ ಪ್ರತಿಯೊಂದು ಲೀಗ್​ನಲ್ಲೂ ಪ್ರಶಸ್ತಿ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ವಿಶ್ವದ ಪ್ರಮುಖ ಲೀಗ್​ಗಳಲ್ಲಿ ಟ್ರೋಫಿ ಗೆದ್ದ ವಿಶ್ವದ ಏಕೈಕ ಫ್ರಾಂಚೈಸಿ ಎಂಬ ಹೆಗ್ಗಳಿಕೆಯನ್ನು ಸಹ ಮುಂಬೈ ಇಂಡಿಯನ್ಸ್ ತನ್ನದಾಗಿಸಿಕೊಂಡಿದೆ.

2 / 9
2008 ರಿಂದ ಐಪಿಎಲ್​ನಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ಚೊಚ್ಚಲ ಟ್ರೋಫಿ ಗೆದ್ದಿರುವುದು ಚಾಂಪಿಯನ್ಸ್ ಲೀಗ್ ಟಿ20 ಟೂರ್ನಿಯಲ್ಲಿ. 2011 ರಲ್ಲಿ ನಡೆದ ಈ ಟೂರ್ನಿಯಲ್ಲಿ ಮುಂಬೈ ಪಡೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದಾದ ಬಳಿಕ 2013 ರಲ್ಲೂ ಚಾಂಪಿಯನ್ಸ್ ಲೀಗ್​ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಯಿತು.

3 / 9
ಇನ್ನು ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಟ್ರೋಫಿ ಗೆದ್ದಿದ್ದು 2013 ರಲ್ಲಿ. ಆ ಬಳಿಕ 2015, 2017, 2019 ಮತ್ತು 2020 ರಲ್ಲಿ ಟ್ರೋಫಿ ಎತ್ತಿ ಹಿಡಿಯುವಲ್ಲಿ ಮುಂಬೈ ಇಂಡಿಯನ್ಸ್ ಯಶಸ್ವಿಯಾಗಿದೆ. ಈ ಮೂಲಕ ಐಪಿಎಲ್​ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದೆನಿಸಿಕೊಂಡಿದೆ.

4 / 9
ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಮುಂಬೈ ಇಂಡಿಯನ್ಸ್ ತಂಡ ಟ್ರೋಫಿ ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. 2023 ರಲ್ಲಿ ನಡೆದ ಈ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡವನ್ನು ಸೋಲಿಸಿ ಮುಂಬೈ ಇಂಡಿಯನ್ಸ್ ವನಿತಾ ಪಡೆ ಚೊಚ್ಚಲ ಕಿರೀಟ ಮುಡಿಗೇರಿಸಿಕೊಂಡಿದೆ.

5 / 9
ಇನ್ನು ಅಮೆರಿಕದಲ್ಲಿ ನಡೆಯುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಒಡೆತನದ ಎಂಐ ನ್ಯೂಯಾರ್ಕ್ ತಂಡ ಕಣಕ್ಕಿಳಿಯುತ್ತಿದೆ. ಈ ತಂಡವು 2023 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಟ್ರೋಫಿ ಸಂಖ್ಯೆಯನ್ನು ಒಂಬತ್ತೇಕೆರಿಸಿತು.

6 / 9
ಯುಎಇನಲ್ಲಿ ನಡೆಯುವ ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಎಂಐ ಎಮಿರೇಟ್ಸ್ ಹೆಸರಿನ ತಂಡವನ್ನು ಕಣಕ್ಕಿಳಿಸುತ್ತಿದೆ. ಈ ತಂಡವು 2024 ರಲ್ಲಿ ಟ್ರೋಫಿ ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.

7 / 9
ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲೂ ಮುಂಬೈ ಇಂಡಿಯನ್ಸ್ ಟ್ರೋಫಿ ಖಾತೆಯನ್ನು ತೆರೆದಿದೆ. ಕಳೆದ ಬಾರಿಯ ಎಸ್​ಎ20 ಲೀಗ್​ನ​ ಫೈನಲ್​ ಪಂದ್ಯದಲ್ಲಿ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡವನ್ನು ಮಣಿಸಿ ಎಂಐ ಕೇಪ್​ಟೌನ್ ತಂಡವು ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

8 / 9
ಇನ್ನು ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2025) ಮೂರನೇ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ WPL ನಲ್ಲಿ ಎರಡು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಏಕೈಕ ತಂಡವಾಗಿ ಮುಂಬೈ ಇಂಡಿಯನ್ಸ್ ಹೊರಹೊಮ್ಮಿದೆ.

9 / 9
ಇದೀಗ ಅಮೆರಿಕದಲ್ಲಿ ನಡೆದ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ 3ನೇ ಸೀಸನ್​ನಲ್ಲೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಎಂಐ ನ್ಯೂಯಾರ್ಕ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಫೈನಲ್ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ತಂಡವನ್ನು 5 ರನ್​ಗಳಿಂದ ಮಣಿಸಿ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಎಂಐ ನ್ಯೂಯಾರ್ಕ್ ತಂಡ ಯಶಸ್ವಿಯಾಗಿದೆ.  ಈ ಮೂಲಕ ವಿಶ್ವದ 6 ಲೀಗ್​​ಗಳಲ್ಲಿ ಒಟ್ಟು 13 ಟ್ರೋಫಿ ಗೆದ್ದು ಮುಂಬೈ ಇಂಡಿಯನ್ಸ್ ಹೊಸ ಇತಿಹಾಸ ನಿರ್ಮಿಸಿದೆ.