- Kannada News Photo gallery Cricket photos Mumbai Indians: Most successful 200 chases in an IPL season
IPL 2023: RCB ಗೆ ಸೋಲುಣಿಸಿ ಹೊಸ ಇತಿಹಾಸ ಬರೆದ ಮುಂಬೈ ಇಂಡಿಯನ್ಸ್
IPL 2023 Kannada: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು ಫಾಫ್ ಡುಪ್ಲೆಸಿಸ್ (65) ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ (68) ಅವರ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 199 ರನ್ ಕಲೆಹಾಕಿತು.
Updated on: May 10, 2023 | 7:23 PM

IPL 2023: 200 ರನ್ಗಳು...ಚೇಸಿಂಗ್ ವೇಳೆ ಕಠಿಣ ಗುರಿ...ಬೃಹತ್ ಟಾರ್ಗೆಟ್ ಎನ್ನಲಾಗುತ್ತಿದ್ದ ಇನ್ನೂರು ರನ್ಗಳನ್ನು ಮುಂಬೈ ಇಂಡಿಯನ್ಸ್ ತಂಡವು ಲೀಲಾಜಾಲವಾಗಿ ಬೆನ್ನತ್ತುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಆರ್ಸಿಬಿ ವಿರುದ್ಧದ ಭರ್ಜರಿ ಜಯ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು ಫಾಫ್ ಡುಪ್ಲೆಸಿಸ್ (65) ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ (68) ಅವರ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 199 ರನ್ ಕಲೆಹಾಕಿತು.

ಆದರೆ 200 ರನ್ಗಳ ಕಠಿಣ ಗುರಿಯನ್ನು ಕೇವಲ 16.3 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ವಿಶೇಷ ಎಂದರೆ ಈ ಬಾರಿಯ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ 3ನೇ ಬಾರಿ 200 ಅಥವಾ ಅದಕ್ಕಿಂತ ಹೆಚ್ಚಿನ ರನ್ಗಳನ್ನು ಚೇಸ್ ಮಾಡಿ ಗೆದ್ದಿದೆ. ಇದು ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ.

ಅಂದರೆ ಐಪಿಎಲ್ ಸೀಸನ್ವೊಂದರಲ್ಲಿ ಅತೀ ಹೆಚ್ಚು ಬಾರಿ 200+ ರನ್ಗಳನ್ನು ಚೇಸ್ ಮಾಡಿದ ಗೆದ್ದ ತಂಡ ಎಂಬ ದಾಖಲೆ ಇದೀಗ ಮುಂಬೈ ಇಂಡಿಯನ್ಸ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಪಂಜಾಬ್ ಕಿಂಗ್ಸ್ ಹಾಗೂ ಸಿಎಸ್ಕೆ ತಂಡದ ಹೆಸರಿನಲ್ಲಿತ್ತು.

ಪಂಜಾಬ್ ಕಿಂಗ್ಸ್ 2014 ರಲ್ಲಿ 2 ಬಾರಿ 200+ ಸ್ಕೋರ್ ಚೇಸ್ ಮಾಡಿ ಗೆದ್ದಿತ್ತು. ಹಾಗೆಯೇ ಸಿಎಸ್ಕೆ ತಂಡವು 2018 ರಲ್ಲಿ 2 ಬಾರಿ ಈ ಸಾಧನೆ ಮಾಡಿತ್ತು. ಇದೀಗ ಈ ಎರಡು ತಂಡಗಳ ದಾಖಲೆಯನ್ನು ಮುಂಬೈ ಇಂಡಿಯನ್ಸ್ ಮುರಿದಿದೆ.

ಈ ಬಾರಿಯ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ 215, ರಾಜಸ್ಥಾನ್ ರಾಯಲ್ಸ್ ವಿರುದ್ಧ 213 ಹಾಗೂ ಆರ್ಸಿಬಿ ವಿರುದ್ಧ 200 ರನ್ಗಳನ್ನು ಚೇಸ್ ಮಾಡಿ ಗೆದ್ದಿದೆ.

ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಒಂದೇ ಸೀಸನ್ನಲ್ಲಿ 3 ಬಾರಿ 200+ ರನ್ಗಳನ್ನು ಚೇಸ್ ಮಾಡಿ ಗೆದ್ದ ಹೊಸ ದಾಖಲೆಯನ್ನು ಮುಂಬೈ ಇಂಡಿಯನ್ಸ್ ಬರೆದಿದೆ.
