AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂಬೈ ಇಂಡಿಯನ್ಸ್ ಆಟಗಾರನ ಬ್ಯಾನ್ ಮಾಡಿದ ಪಾಕಿಸ್ತಾನ್

IPL 2025 vs PSL 2025: IPL 2025: ಸೌತ್ ಆಫ್ರಿಕಾ ವೇಗಿ ಕಾರ್ಬಿನ್ ಬಾಷ್ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಕೂಡ ಬದಲಿ ಆಟಗಾರನಾಗಿ ಎಂಬುದು ವಿಶೇಷ. ಆದರೆ ಇದಕ್ಕೂ ಮುನ್ನ ಪಾಕಿಸ್ತಾನ್ ಸೂಪರ್ ಲೀಗ್ ಆಡಲು ಸಹಿ ಮಾಡಿಕೊಂಡಿದ್ದಾರೆ. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚಾನ್ಸ್ ಸಿಗುತ್ತಿದ್ದಂತೆ ಕಾರ್ಬಿನ್ ಬಾಷ್ ಪಿಎಸ್​ಎಲ್​ಗೆ ಕೈ ಕೊಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on:Apr 12, 2025 | 9:06 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿರುವ ಕಾರ್ಬಿನ್ ಬಾಷ್ (Corbin Bosch) ಅವರನ್ನು ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಒಂದು ವರ್ಷ ಬ್ಯಾನ್ ಮಾಡಲಾಗಿದೆ. ಇದಕ್ಕೆ ಮುಖ್ಯ ಕಾರಣ ಬಾಷ್ PSL 2025 ಕ್ಕೆ ಕೈ ಕೊಟ್ಟಿರುವುದು.

1 / 5
ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬಾಷ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಹೀಗಾಗಿ ಬಾಷ್ ಪಾಕಿಸ್ತಾನ್ ಸೂಪರ್ ಲೀಗ್​ಗೆ ಹೆಸರು ನೀಡಿದ್ದರು. ಅದರಂತೆ ಪಿಎಸ್​ಎಲ್​ನ ಪೇಶಾವರ್ ಝಲ್ಮಿ ಫ್ರಾಂಚೈಸಿಯು ಬಾಷ್ ಅವರನ್ನು ಮುಂಬರುವ ಟೂರ್ನಿಗೆ ಆಯ್ಕೆ ಮಾಡಿಕೊಂಡಿದ್ದರು.

2 / 5
ಇದರ ನಡುವೆ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಸೌತ್ ಆಫ್ರಿಕಾ ವೇಗಿ ಲಿಝಾಡ್ ವಿಲಿಯಮ್ಸ್ ಮೊಣಕಾಲಿನ ಗಾಯದ ಕಾರಣ ಈ ಬಾರಿಯ ಐಪಿಎಲ್​ನಿಂದ ಹಿಂದೆ ಸರಿದಿದ್ದರು. ಹೀಗಾಗಿ ಅವರ ಬದಲಿಯಾಗಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕಾರ್ಬಿನ್ ಬಾಷ್ ಅವರನ್ನು ಆಯ್ಕೆ ಮಾಡಿಕೊಂಡಿತು.

3 / 5
ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚಾನ್ಸ್ ಸಿಕ್ಕಿದ್ದೇ ತಡ, ಕಾರ್ಬಿನ್ ಬಾಷ್ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ. ಹೀಗೆ ಪಿಎಸ್​ಎಲ್​ ಒಪ್ಪಂದ ನಿಯಮವನ್ನು ಉಲ್ಲಂಘಿಸಿದಕ್ಕಾಗಿ ಇದೀಗ ಕಾರ್ಬಿನ್ ಬಾಷ್ ವಿರುದ್ಧ ಒಂದು ವರ್ಷದ ಅವಧಿಗೆ ನಿಷೇಧ ಹೇರಲಾಗಿದೆ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತಿಳಿಸಿದೆ.

4 / 5
ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್ 2026 ರಲ್ಲಿ ಕಾರ್ಬಿನ್ ಬಾಷ್​ಗೆ ಅವಕಾಶ ದೊರೆಯುವುದಿಲ್ಲ. ಇತ್ತ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿರುವ ಕಾರ್ಬಿನ್ ಬಾಷ್, ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಒಡೆತನದ ಎಂಐ ಕೇಪ್​ಟೌನ್ ಪರ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಪಿಎಸ್​ಎಲ್​ನ ಬ್ಯಾನ್​ ಸೌತ್ ಆಫ್ರಿಕಾ ವೇಗಿಯ ಮೇಲೆ ದೊಡ್ಡ ಪರಿಣಾಮ ಬೀರುವುದಿಲ್ಲ ಎಂದೇ ಹೇಳಬಹುದು.

5 / 5

Published On - 9:04 am, Sat, 12 April 25

Follow Us
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!

ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ

ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್

ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ

ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ

ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?

ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?

ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?

ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ