AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಹೀಗಾದ್ರೆ ಮಾತ್ರ ಮುಂಬೈ ಇಂಡಿಯನ್ಸ್​ ಪ್ಲೇಆಫ್ ಪ್ರವೇಶಿಸುತ್ತೆ!

Mumbai Indians Playoffs Scenario: ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 9 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ 2 ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ 7 ಪಂದ್ಯಗಳಲ್ಲಿ ಸೋತಿರುವ ಹಾರ್ದಿಕ್ ಪಾಂಡ್ಯ ಪಡೆ ಇದೀಗ -0.803 ನೆಟ್​ ರನ್​ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

ಝಾಹಿರ್ ಯೂಸುಫ್
|

Updated on: May 03, 2026 | 7:31 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ (MI) ತಂಡಕ್ಕೆ ಇನ್ನುಳಿದಿರುವುದು ಕೇವಲ 5 ಪಂದ್ಯಗಳು ಮಾತ್ರ. ಈ ಐದು ಮ್ಯಾಚ್​ಗಳಲ್ಲಿ ಗೆಲ್ಲುವ ಮೂಲಕ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು. ಆದರೆ ಇಲ್ಲಿ ತನ್ನ ಗೆಲುವಿನೊಂದಿಗೆ ಇತರೆ ತಂಡಗಳ ಫಲಿತಾಂಶ ಕೂಡ ಮುಖ್ಯವಾಗುತ್ತದೆ. ಅದರಂತೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಉಳಿದಿರುವ ಹಾದಿಗಳಾವುವು ಎಂದು ನೋಡುವುದಾದರೆ...

1 / 5
ಎಲ್ಲಾ ಪಂದ್ಯಗಳ ಗೆಲುವು: ಮುಂಬೈ ಇಂಡಿಯನ್ಸ್​​ ತಂಡಕ್ಕೆ ಇನ್ನು 5 ಪಂದ್ಯಗಳು ಬಾಕಿ ಇವೆ. ಈ ಎಲ್ಲಾ ಪಂದ್ಯಗಳನ್ನು ಗೆದ್ದರೆ ತಂಡವು ಗರಿಷ್ಠ 14 ಅಂಕಗಳನ್ನು ಗಳಿಸಬಹುದು. ಒಂದು ವೇಳೆ ಅಂಕ ಪಟ್ಟಿಯಲ್ಲಿರುವ ಟಾಪ್-4 ತಂಡಗಳಲ್ಲಿ ಯಾವುದಾದರೂ ತಂಡ 14 ಅಂಕಗಳಲ್ಲಿ ಉಳಿದರೆ ಮುಂಬೈ ಇಂಡಿಯನ್ಸ್​​​ಗೆ ಪ್ಲೇಆಫ್ ಆಡುವ ಅವಕಾಶ ದೊರೆಯಲಿದೆ. ಇದಕ್ಕಾಗಿ ಮುಂಬೈ ಇಂಡಿಯನ್ಸ್​ ಪಡೆ ನೆಟ್​ ರನ್ ರೇಟ್ ಅನ್ನು ಸಹ ಸುಧಾರಿಸಿಕೊಳ್ಳಬೇಕು.

2 / 5
ರನ್ ರೇಟ್ ಸುಧಾರಣೆ: ಮೇಲೆ ಹೇಳಿದಂತೆ ಮುಂಬೈ ಇಂಡಿಯನ್ಸ್ ತಂಡವು ತನ್ನ ಮುಂದಿನ 5 ಪಂದ್ಯಗಳಲ್ಲಿ ಕೇವಲ ಗೆದ್ದರೆ ಸಾಲದು. ಇದರ ಜೊತೆ ತನ್ನ ನೆಟ್ ರನ್ ರೇಟ್ ಅನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳಬೇಕು. ಇದು ಇತರ ತಂಡಗಳೊಂದಿಗೆ ಸ್ಪರ್ಧಿಸಲು ನೆರವಾಗುತ್ತದೆ. ಅಂದರೆ ಲೀಗ್​ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ 3ನೇ ಅಥವಾ ನಾಲ್ಕನೇ ಸ್ಥಾನಗಳಲ್ಲಿರುವ ತಂಡಗಳು 14 ಅಂಕಗಳಲ್ಲೇ ಉಳಿದರೆ, ಮುಂಬೈ ಇಂಡಿಯನ್ಸ್ ತಂಡವು 14 ಪಾಯಿಂಟ್ಸ್ ಜೊತೆ ಉತ್ತಮ ನೆಟ್ ರನ್ ರೇಟ್ ಪಡೆಯುವ ಮೂಲಕ ಇತರೆ ತಂಡಗಳನ್ನು ಹಿಂದಿಕ್ಕಿ ಟಾಪ್-4 ನಲ್ಲಿ ಕಾಣಿಸಿಕೊಳ್ಳಬಹುದು.

3 / 5
ಇತರೆ ತಂಡಗಳ ಫಲಿತಾಂಶದ ಮೇಲೆ ಅವಲಂಬನೆ: ಇಲ್ಲಿ ಮುಂಬೈ ಇಂಡಿಯನ್ಸ್ ತನ್ನೆಲ್ಲಾ ಪಂದ್ಯಗಳನ್ನು ಗೆದ್ದರೂ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡಗಳಾದ ಪಂಜಾಬ್ ಕಿಂಗ್ಸ್​ ಆರ್‌ಸಿಬಿ, ಎಸ್‌ಆರ್‌ಎಚ್ ಅಥವಾ ರಾಜಸ್ಥಾನ್ ರಾಯಲ್ಸ್ ತಂಡಗಳು ತಮ್ಮ ಮುಂದಿನ ಪಂದ್ಯಗಳಲ್ಲಿ ಸೋಲುವುದನ್ನು ಎದುರು ನೋಡಬೇಕು. ಒಂದು ವೇಳೆ ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿ ಟಾಪ್-4 ತಂಡಗಳು ಮುಂದಿನ 2 ಮ್ಯಾಚ್​ಗಳಲ್ಲಿ ಗೆದ್ದರೆ ಮುಂಬೈ ಇಂಡಿಯನ್ಸ್ ಪ್ಲೇಆಫ್ ರೇಸ್​​ನಿಂದ ಹೊರಬೀಳಲಿದೆ.

4 / 5
ಸದ್ಯ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ (ಮೇ 4), ರಾಯಲ್ ಚಾಲೆಂಜರ್ಸ್​ ಬೆಂಗಳೂರು (ಮೇ 10), ಪಂಜಾಬ್ ಕಿಂಗ್ಸ್​ (ಮೇ 14), ಕೊಲ್ಕತ್ತಾ ನೈಟ್ ರೈಡರ್ಸ್ (ಮೇ 20) ಹಾಗೂ ರಾಜಸ್ಥಾನ್ ರಾಯಲ್ಸ್ (ಮೇ 24) ತಂಡಗಳನ್ನು ಎದುರಿಸಲಿದೆ.

5 / 5
Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ

ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ

ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ