ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್ ನೀಡಲು ಸಜ್ಜಾದ ಮುಂಬೈ ಇಂಡಿಯನ್ಸ್
IPL 2026, Mumbai Indians:ಈ ಬಾರಿಯ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವು 14 ಪಂದ್ಯಗಳನ್ನಾಡಿದೆ. ಈ ಹದಿನಾಲ್ಕು ಮ್ಯಾಚ್ಗಳಲ್ಲಿ ಮುಂಬೈ ಇಂಡಿಯನ್ಸ್ ಗೆದ್ದಿರುವುದು ಕೇವಲ 4 ಪಂದ್ಯಗಳಲ್ಲಿ ಮಾತ್ರ. ಈ ನಾಲ್ಕು ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ 9ನೇ ಸ್ಥಾನ ಅಲಂಕರಿಸುವ ಮೂಲಕ ಮುಂಬೈ ಪಡೆ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದೆ.
Updated on:May 29, 2026 | 8:02 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ಎಂಐ ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಅದರ ಮೊದಲ ಹೆಜ್ಜೆಯಾಗಿ ಮುಂಬೈ ಇಂಡಿಯನ್ಸ್ ತಂಡದ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ (Hardik Pandya) ಅವರ ತಲೆದಂಡವಾಗಲಿದೆ. (PC: IPL)

ಎಕ್ಸ್ಪ್ರೆಸ್ ಸ್ಪೋರ್ಟ್ಸ್ ವರದಿ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ಕೆಳಗಿಳಿಸಲು ನಿರ್ಧರಿಸಲಾಗಿದೆ. ಕಳೆದ ಮೂರು ಸೀಸನ್ಗಳಲ್ಲಿ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿದಿರುವ ಮುಂಬೈ ಇಂಡಿಯನ್ಸ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. (PC: IPL)

ಈ ಮೂರು ವರ್ಷಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪಾಂಡ್ಯ 38 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಎಂಐ ಪಡೆ ಗೆದ್ದಿರುವುದು ಕೇವಲ 15 ಮ್ಯಾಚ್ಗಳಲ್ಲಿ ಮಾತ್ರ. ಅಂದರೆ ಬರೋಬ್ಬರಿ 23 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸೋಲನುಭವಿಸಿದೆ. (PC: IPL)

ಈ ಸೋಲುಗಳೊಂದಿಗೆ ಹಾರ್ದಿಕ್ ಪಾಂಡ್ಯ ಹೊಂದಿರುವ ಗೆಲುವಿನ ಶೇಕಡಾವಾರು ಕೇವಲ 39.4 ಪರ್ಸೆಂಟ್ ಮಾತ್ರ. ಅತ್ತ 158 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ 55.06% ಹೊಂದಿದ್ದರು. ಅಂದರೆ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತನ್ನ ಹಳೆಯ ಖದರ್ ಕಳೆದುಕೊಂಡಿದೆ. (PC: IPL)

ಹೀಗಾಗಿಯೇ ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್ ಇದೀಗ ಹಾರ್ದಿಕ್ ಪಾಂಡ್ಯರನ್ನು ಕ್ಯಾಪ್ಟನ್ ಪಟ್ಟದಿಂದ ಕೆಳಗಿಳಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಇದಾಗ್ಯೂ ಹೊಸ ನಾಯಕ ಯಾರಾಗಲಿದ್ದಾರೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಹೀಗಾಗಿ ಐಪಿಎಲ್ 2027 ರಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುವವರು ಯಾರು ಎಂಬುದನ್ನು ತಿಳಿಯಲು ಮುಂದಿನ ಹರಾಜಿನವರೆಗೆಕಾಯಲೇಬೇಕು. (PC: IPL)
Published On - 8:02 am, Fri, 29 May 26

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




