Rohit Sharma Fit: ಖುಷಿಯಲ್ಲಿದ್ದ ಆರ್ಸಿಬಿಗೆ ಶಾಕ್: ಮುಂಬೈ ಇಂಡಿಯನ್ಸ್ ಸ್ಫೋಟಕ ಬ್ಯಾಟರ್ ಸಂಪೂರ್ಣ ಫಿಟ್
RCB vs MI, IPL 2023: ಭಾನುವಾರ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿ ಆಗಲಿದೆ. ಇದೀಗ ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ತಂಡಕ್ಕೆ ಶುಭ ಸುದ್ದಿಯೊಂದು ಸಿಕ್ಕಿದೆ.
1 / 7
16ನೇ ಅವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಚಾಲನೆ ಸಿಕ್ಕಿದ್ದು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ಗೆ ಸೋಲುಣಿಸಿ ಶುಭಾರಂಭ ಮಾಡಿದೆ. ಇಂದು ಶನಿವಾರ ಎರಡು ಪಂದ್ಯಗಳು ನಡೆಯಲಿದೆ. ನಾಳೆ ಕೂಡ ಭಾನುವಾರ ಎರಡು ಪಂದ್ಯಗಳನ್ನು ಆಯೋಜಿಸಲಾಗಿದೆ.
2 / 7
ಭಾನುವಾರ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಫಾಪ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದಾಖಲೆಯ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿ ಆಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ಏರ್ಪಡಿಸಲಾಗಿದೆ.
3 / 7
ಇದೀಗ ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ತಂಡಕ್ಕೆ ಶುಭ ಸುದ್ದಿಯೊಂದು ಸಿಕ್ಕಿದೆ. ಇತ್ತ ಆರ್ಸಿಬಿಗೆ ಶಾಕ್ ಆಗಿದೆ. ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎನ್ನಲಾಗಿದ್ದ ನಾಯಕ ರೋಹಿತ್ ಶರ್ಮಾ ಸಂಪೂರ್ಣ ಫಿಟ್ ಆಗಿದ್ದು, ಆರ್ಸಿಬಿ ವಿರುದ್ಧ ಕಣಕ್ಕಿಳಿಯಲಿದ್ದಾರಂತೆ.
4 / 7
ಆರೋಗ್ಯ ಸರಿ ಇಲ್ಲದ ಕಾರಣ ರೋಹಿತ್ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಸೂರ್ಯಕುಮಾರ್ ಯಾದವ್ ನಾಯಕನ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಈ ಹಿಂದೆ ವರದಿ ಅಗಿತ್ತು. ಅಲ್ಲದೆ ಹಿಟ್ಮ್ಯಾನ್ ಐಪಿಎಲ್ ನಾಯಕರುಗಳ ಫೋಟೋಶೂಟ್ಗೆ ಆಗಮಿಸಲಿಲ್ಲ. ಇದೀಗ ರೋಹಿತ್ ಸಂಪೂರ್ಣ ಫಿಟ್ ಆಗಿದ್ದಾರಂತೆ.
5 / 7
ಈ ಬಗ್ಗೆ ಮಾಹಿತಿ ನೀಡಿರುವ ಮುಂಬೈ ಇಂಡಿಯನ್ಸ್ ಮೂಲಗಳು, ಆರೋಗ್ಯ ಸರಿಯಿಲ್ಲದ ಕಾರಣ ರೋಹಿತ್ ಅಹ್ಮದಾಬಾದ್ಗೆ ನಾಯಕರ ಫೋಟೋಶೂಟ್ಗೆ ಪ್ರಯಾಣ ಬೆಳೆಸಿಲ್ಲ. ಆದರೆ, ಏಪ್ರಿಲ್ 2 ರಂದು ನಡೆಯಲಿರುವ ಆರ್ಸಿಬಿ ವಿರುದ್ಧದ ಮೊದಲ ಪಂದ್ಯಕ್ಕೆ ಲಭ್ಯರಿದ್ದಾರೆ ಎಂದು ಹೇಳಿದೆ.
6 / 7
ಇದರ ಜೊತೆಗೆ ಮುಂಬೈಗೆ ಬೌಲಿಂಗ್ನಲ್ಲಿ ಆನೆಬಲ ಬಂದಿದೆ. ಇಂಜುರಿಯಿಂದಾಗಿ ಐಪಿಎಲ್ 2022 ರಿಂದ ಸಂಪೂರ್ಣ ಹೊರಬಿದ್ದಿದ್ದ ಜೋಫ್ರಾ ಆರ್ಚರ್ ಇದೀಗ ಎಂಐ ಪರ ಕಣಕ್ಕಿಳಿಯಲು ತಯಾರಾಗಿದ್ದಾರೆ. ಬುಮ್ರಾ ಅಲಭ್ಯತೆಯಲ್ಲಿ ಇವರು ಪ್ರಮುಖ ಪಾತ್ರ ವಹಿಸಲಿದ್ದಾರೆ.
7 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಏಪ್ರಿಲ್ 2 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಸಂಜೆ 7:30 ಕ್ಕೆ ಪಂದ್ಯ ಶುರುವಾಗಲಿದ್ದು ಹೈವೋಲ್ಟೇಜ್ ಮ್ಯಾಚ್ ಆಗುವ ನಿರೀಕ್ಷೆ ಇದೆ. ಈಗಾಗಲೇ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್ ಆಗಿದೆ.