ಸತತ 3 ಪಂದ್ಯಗಳಲ್ಲಿ ಸೋಲು, ಆದರೂ 2ನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್​

Updated on: Jan 21, 2026 | 9:53 AM

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ 13 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಅಷ್ಟೇ ಅಲ್ಲದೆ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಇನ್ನುಳಿದ 2 ಸ್ಥಾನಗಳಿಗಾಗಿ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್ ಹಾಗೂ ಗುಜರಾತ್ ಜೈಂಟ್ಸ್ ನಡುವೆ ಪೈಪೋಟಿ ಮುಂದುವರೆದಿದೆ.

1 / 6
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್‌ ಸೀಸನ್ 4 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ಮುಂಬೈ ಇಂಡಿಯನ್ಸ್ ಇದೀಗ ಹ್ಯಾಟ್ರಿಕ್ ಸೋಲುಂಡಿದೆ. ಈ ಸೋಲುಗಳ ಹೊರತಾಗಿಯೂ ಹರ್ಮನ್ ಪ್ರೀತ್ ಕೌರ್ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲೇ ಉಳಿದುಕೊಂಡಿದೆ.

2 / 6
ಈ ಬಾರಿಯ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಪರಾಜಯಗೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ಪರ ಭರ್ಜರಿ ಜಯ ಸಾಧಿಸಿ ಒಟ್ಟು ನಾಲ್ಕು ಅಂಕಗಳನ್ನು ಪಡೆದುಕೊಂಡಿದ್ದರು.

3 / 6
ಈ ಎರಡು ಗೆಲುವುಗಳ ಬಳಿಕ ಮುಂಬೈ ಇಂಡಿಯನ್ಸ್ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಯುಪಿ ವಾರಿಯರ್ಸ್ ವಿರುದ್ಧ ಎರಡೂ ಪಂದ್ಯಗಳಲ್ಲೂ ಸೋತಿದ್ದ ಮುಂಬೈ ಇಂಡಿಯನ್ಸ್ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಮುಗ್ಗರಿಸಿದೆ.

4 / 6
ಅಂದರೆ ಮುಂಬೈ ಇಂಡಿಯನ್ಸ್ ಆಡಿದ 6 ಪಂದ್ಯಗಳಲ್ಲಿ 4ರಲ್ಲಿ ಸೋಲನುಭವಿಸಿದೆ. ಈ ಸೋಲಿನ ಹೊರತಾಗಿಯೂ ಮುಂಬೈ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಇದಕ್ಕೆ ಮುಖ್ಯ ಕಾರಣ ಉಳಿದ ಮೂರು ತಂಡಗಳ ನೆಟ್​ ರನ್​ ರೇಟ್ ಮೈನಸ್​ನಲ್ಲಿರುವುದು.

5 / 6
ಅಂದರೆ ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್, ಗುಜರಾತ್ ಜೈಂಟ್ಸ್ ತಲಾ 2 ಮ್ಯಾಚ್ ಗಳಲ್ಲಿ ಮಾತ್ರ ಜಯ ಸಾಧಿಸಿದೆ. ಈ ಎರಡು ಗೆಲುವುಗಳ ಹೊರತಾಗಿಯೂ ಈ ತಂಡಗಳ ನೆಟ್ ರನ್ ರೇಟ್ ಮೈನಸ್ ನಲ್ಲಿದೆ. ಇಲ್ಲಿ ಯುಪಿ ವಾರಿಯರ್ಸ್ -0.483 ನೆಟ್ ರನ್ ರೇಟ್ ಹೊಂದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ -0.586 ನೆಟ್​ನಲ್ಲೇ ಉಳಿದಿದೆ. ಇನ್ನು ಗುಜರಾತ್ ಜೈಂಟ್ಸ್ ಹೊಂದಿರುವ ನೆಟ್ ರನ್ ರೇಟ್ -0.864.

6 / 6
ಆದರೆ ಇತ್ತ ಎರಡು ಪಂದ್ಯಗಳಲ್ಲಿ ಮಾತ್ರ ಗೆದ್ದಿರುವ ಮುಂಬೈ ಇಂಡಿಯನ್ಸ್ +0.046 ನೆಟ್ ರನ್ ರೇಟ್ ಹೊಂದಿದೆ. ಇದೇ ಕಾರಣದಿಂದಾಗಿ ಹ್ಯಾಟ್ರಿಕ್ ಸೋಲುಗಳ ಹೊರತಾಗಿಯೂ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಕಾಯ್ದುಕೊಳ್ಳುವಲ್ಲಿ ಹರ್ಮನ್​ಪ್ರೀತ್ ಕೌರ್ ಪಡೆ ಯಶಸ್ವಿಯಾಗಿದೆ.