Updated on: May 10, 2023 | 10:52 PM
IPL 2023: ಐಪಿಎಲ್ನ 54ನೇ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಬಗ್ಗು ಬಡಿಯುವ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಅದು ಅಂತಿಂಥ ಗೆಲುವಲ್ಲ, ಬದಲಾಗಿ ದಾಖಲೆಯ ಜಯ ಎಂಬುದೇ ವಿಶೇಷ.
ಹೌದು, ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿತ್ತು.
200 ರನ್ಗಳ ಬೃಹತ್ ಗುರಿ ಪಡೆದ ಮುಂಬೈ ಇಂಡಿಯನ್ಸ್ ತಂಡದ ಪರ ಇಶಾನ್ ಕಿಶನ್ (42), ಸೂರ್ಯಕುಮಾರ್ ಯಾದವ್ (83) ಹಾಗೂ ನೆಹಾಲ್ (52) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಕೇವಲ 16.3 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.
ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾಲ್ ಉಳಿಸಿ 200+ ಸ್ಕೋರ್ ಅನ್ನು ಚೇಸ್ ಮಾಡಿ ಗೆದ್ದ ತಂಡ ಎಂಬ ದಾಖಲೆ ಮುಂಬೈ ಇಂಡಿಯನ್ಸ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಡೆಲ್ಲಿ ಕ್ಯಾಪಿಟಲ್ಸ್ ಹೆಸರಿನಲ್ಲಿತ್ತು.
2017 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಲಯನ್ಸ್ ವಿರುದ್ಧ 15 ಎಸೆತಗಳನ್ನು ಬಾಕಿಯಿರಿಸಿ 208 ರನ್ಗಳನ್ನು ಚೇಸ್ ಮಾಡಿ ಜಯ ಸಾಧಿಸಿತ್ತು. ಇದೀಗ ಈ ದಾಖಲೆಯನ್ನು ಮುಂಬೈ ಇಂಡಿಯನ್ಸ್ ಮುರಿದಿದೆ.
ಆರ್ಸಿಬಿ ಬೌಲರ್ಗಳನ್ನು ಬೆಂಡೆತ್ತಿದ ಮುಂಬೈ ಇಂಡಿಯನ್ಸ್ ಬ್ಯಾಟರ್ಗಳು 21 ಎಸೆತಗಳು ಬಾಕಿ ಇರುವಾಗಲೇ 200 ರನ್ಗಳಿಸಿ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಕಡಿಮೆ ಎಸೆತಗಳಲ್ಲಿ 200 ರನ್ಗಳನ್ನು ಚೇಸ್ ಮಾಡಿದ ದಾಖಲೆಯು ಮುಂಬೈ ಇಂಡಿಯನ್ಸ್ ಪಾಲಾಗಿದೆ.