AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ವಿರುದ್ಧದ ಪಂದ್ಯಕ್ಕೆ ಇಬ್ಬರು ಸ್ಟಾರ್ ಆಟಗಾರರು ಡೌಟ್..!

IPL 2026: ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ಹತ್ತು ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3 ಮ್ಯಾಚ್​ಗಳಲ್ಲಿ ಮಾತ್ರ. ಇದೀಗ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು ತನ್ನ ಮುಂದಿನ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಆಡಲಿದೆ. ಈ ಪಂದ್ಯಕ್ಕೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: May 07, 2026 | 10:56 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಮೇ 10 ರಂದು ರಾಯ್​ಪುರ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ. ಅವರೆಂದರೆ...

(PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಮೇ 10 ರಂದು ರಾಯ್​ಪುರ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ. ಅವರೆಂದರೆ... (PC: IPL)

1 / 5
ಹಾರ್ದಿಕ್ ಪಾಂಡ್ಯ: ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿಯೇ ಅವರು ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಅಲ್ಲದೆ ಬೆನ್ನು ನೋವಿನ ಕಾರಣ ಹಾರ್ದಿಕ್ ಪಾಂಡ್ಯ ಅವರಿಗೆ ವೈದ್ಯರು ಒಂದು ವಾರಗಳ ಕಾಲ ಕಡ್ಡಾಯ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ. (PC: IPL)

2 / 5
ಸೂರ್ಯಕುಮಾರ್ ಯಾದವ್: ಹಾರ್ದಿಕ್ ಪಾಂಡ್ಯ ಅಲಭ್ಯತೆಯಲ್ಲಿ ಮುಂಬೈ ಇಂಡಿಯನ್ಸ್​ ತಂಡವನ್ನು ಮುನ್ನಡೆಸಿದ್ದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಈಗ ವೈಯಕ್ತಿಕ ಕಾರಣಗಳಿಂದಾಗಿ ಮುಂದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ದಟ್ಟವಾಗಿದೆ. ಕೆಲ ಮೂಲಗಳ ಪ್ರಕಾರ, ಸೂರ್ಯಕುಮಾರ್ ಯಾದವ್ ಅವರು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಹೀಗಾಗಿ ಮೇ 10 ರಂದು ನಡೆಯುವ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. (PC: IPL)

3 / 5
ಇನ್ನು ಮುಂಬೈ ಇಂಡಿಯನ್ಸ್ ತಂಡವು ಈಗಾಗಲೇ ರಾಯ್​ಪುರಕ್ಕೆ ಪ್ರಯಾಣ ಬೆಳೆಸಿದ್ದು, ಈ ಬಳಗದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿಲ್ಲ. ಅಂದರೆ ಬುಧವಾರದವರೆಗೆ ಪಾಂಡ್ಯ ಮುಂಬೈನಲ್ಲೇ ಇದ್ದರು. ಮತ್ತೊಂದೆಡೆ ಸೂರ್ಯಕುಮಾರ್ ಯಾದವ್ ಕೂಡ ಮುಂಬೈನಲ್ಲೇ ಉಳಿದುಕೊಂಡಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಈ ಇಬ್ಬರು ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. (PC: IPL)

4 / 5
ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಯಾನ್ ರಿಕಲ್ಟನ್, ರಾಬಿನ್ ಮಿಂಝ್, ರಾಜ್ ಬಾವಾ, ರಘು ಶರ್ಮಾ, ಮಿಚೆಲ್ ಸ್ಯಾಂಟ್ನರ್, ಕಾರ್ಬಿನ್ ಬಾಷ್, ನಮನ್ ಧೀರ್, ಜಸ್​ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಅಲ್ಲಾ ಗಫನ್ಝರ್, ಅಶ್ವನಿ ಕುಮಾರ್, ದೀಪಕ್ ಚಹರ್‌, ವಿಲ್ ಜ್ಯಾಕ್ಸ್, ಶೆರ್ಫೇನ್ ರದರ್​ಫೋರ್ಡ್​,​  ಮಯಾಂಕ್ ಮಾರ್ಕಂಡೆ, ಶಾರ್ದೂಲ್ ಠಾಕೂರ್, ಕ್ವಿಂಟನ್ ಡಿ ಕಾಕ್, ಡ್ಯಾನಿಶ್ ಮಾಲೆವಾರ್, ಮೊಹಮ್ಮದ್ ಇಝಾರ್, ಅಥರ್ವ ಅಂಕೋಲೆಕರ್, ಮಯಾಂಕ್ ರಾವತ್. (PC: IPL)

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ