Mushfiqur Rahim: ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ಮುಶ್ಫಿಕರ್ ರಹೀಮ್
Pakistan vs Bangladesh, 1st Test: ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ನಡುವಣ ಮೊದಲ ಟೆಸ್ಟ್ ಪಂದ್ಯವು ಡ್ರಾನತ್ತ ಸಾಗಿದೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಪಾಕಿಸ್ತಾನ್ ತಂಡವು 448 ರನ್ ಕಲೆಹಾಕಿದರೆ, ಬಾಂಗ್ಲಾದೇಶ್ ತಂಡವು 425 ರನ್ಗಳೊಂದಿಗೆ ಬ್ಯಾಟಿಂಗ್ ಮುಂದುವರೆಸಿದೆ. ಇದೀಗ ನಾಲ್ಕನೇ ದಿನದಾಟ ಮುಂದುವರೆದಿದ್ದು, ಹೀಗಾಗಿ ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಳ್ಳುವ ಸಾಧ್ಯತೆ ಹೆಚ್ಚಿದೆ.
1 / 6
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಬಾಂಗ್ಲಾದೇಶ್ ಬ್ಯಾಟರ್ ಮುಶ್ಫಿಕರ್ ರಹೀಮ್ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಬಾಂಗ್ಲಾ ತಂಡದ ತಮೀಮ್ ಇಕ್ಬಾಲ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
2 / 6
ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮುಶ್ಫಿಕರ್ ರಹೀಮ್ 200 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಬಾಂಗ್ಲಾದೇಶ್ ಪರ ಟೆಸ್ಟ್ನಲ್ಲಿ ಅತ್ಯಧಿಕ ಶತಕ ಸಿಡಿಸಿದ ವಿಕೆಟ್ ಕೀಪರ್ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು.
3 / 6
ಅಷ್ಟೇ ಅಲ್ಲದೆ ಟೆಸ್ಟ್ ಕ್ರಿಕೆಟ್ನಲ್ಲಿ ಬಾಂಗ್ಲಾದೇಶ್ ಪರ ಅತೀ ಹೆಚ್ಚು ಶತಕ ಬಾರಿಸಿದ 2ನೇ ಆಟಗಾರ ಎನಿಸಿಕೊಂಡರು. ಇದಕ್ಕೂ 10 ಸೆಂಚುರಿ ಸಿಡಿಸಿದ್ದ ತಮೀಮ್ ಇಕ್ಬಾಲ್ ದ್ವಿತೀಯ ಸ್ಥಾನದಲ್ಲಿದ್ದರು. ಇದೀಗ 11ನೇ ಶತಕದೊಂದಿಗೆ ಮುಶ್ಫಿಕರ್ ರಹೀಮ್ 2ನೇ ಸ್ಥಾನಕ್ಕೇರಿದ್ದಾರೆ.
4 / 6
ಈ ಪಟ್ಟಿಯಲ್ಲಿ ಮೊಮಿನುಲ್ ಹಕ್ ಅಗ್ರಸ್ಥಾನದಲ್ಲಿದ್ದಾರೆ. ಬಾಂಗ್ಲಾದೇಶ್ ಪರ 62 ಟೆಸ್ಟ್ ಪಂದ್ಯಗಳಲ್ಲಿ 115 ಇನಿಂಗ್ಸ್ ಆಡಿರುವ ಮೊಮಿನುಲ್ 12 ಶತಕಗಳೊಂದಿಗೆ 4108 ರನ್ ಕಲೆಹಾಕಿದ್ದಾರೆ.
5 / 6
ಇದೀಗ 89ನೇ ಟೆಸ್ಟ್ ಪಂದ್ಯದ ಮೂಲಕ ಮುಶ್ಫಿಕರ್ ರಹೀಮ್ ಒಟ್ಟು 11 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಬಾಂಗ್ಲಾದೇಶ್ ಪರ ಅತ್ಯಧಿಕ ಸೆಂಚುರಿ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
6 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ಪರ ಉಪನಾಯಕ ಸೌದ್ ಶಕೀಲ್ (144) ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ (171) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕಗಳ ನೆರವಿನಿಂದ ಪಾಕಿಸ್ತಾನ್ ತಂಡವು 6 ವಿಕೆಟ್ ಕಳೆದುಕೊಂಡು 448 ರನ್ಗಳಿಸಿ ಡಿಕ್ಲೇರ್ ಘೋಷಿಸಿತು. ಇದಕ್ಕೆ ಪ್ರತ್ಯುತ್ತರವಾಗಿ ಬಾಂಗ್ಲಾದೇಶ್ ತಂಡವು 128 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 425 ರನ್ ಕಲೆಹಾಕಿದೆ.