ಐಪಿಎಲ್ನಿಂದ ಹೊರಬಿದ್ದ ಬೆನ್ನಲ್ಲೇ ಮುಸ್ತಫಿಝುರ್ ರೆಹಮಾನ್ಗೆ ಬಿಗ್ ಆಫರ್..!
Mustafizur Rahman: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ನ ಮಿನಿ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್ಬರಿ 9.2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಇದೀಗ ಬಾಂಗ್ಲಾ ವೇಗಿಯನ್ನು ಕೆಕೆಆರ್ ಫ್ರಾಂಚೈಸಿ ತಂಡದಿಂದ ಕೈ ಬಿಟ್ಟಿದೆ.
Updated on: Jan 07, 2026 | 9:53 AM

ಬಾಂಗ್ಲಾದೇಶ್ ತಂಡದ ಪ್ರಮುಖ ವೇಗಿ ಮುಸ್ತಫಿಝುರ್ ರೆಹಮಾನ್ (Mustafizur Rahman) ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಕೈ ಬಿಡಲಾಗಿದೆ. ಈ ಬಾರಿಯ ಐಪಿಎಲ್ಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಸ್ಥಾನ ಪಡೆದಿದ್ದ ಎಡಗೈ ವೇಗಿಯನ್ನು ರಿಲೀಸ್ ಮಾಡುವಂತೆ ಬಿಸಿಸಿಐ ಸೂಚಿಸಿತ್ತು.

ಈ ಸೂಚನೆಗೆ ಮುಖ್ಯ ಕಾರಣ ಬಾಂಗ್ಲಾದೇಶ್ ಆಟಗಾರನ ವಿರುದ್ಧ ಭಾರತದಲ್ಲಿ ಮೂಡಿಬಂದ ಪ್ರತಿಭಟನೆಗಳು. ಬಾಂಗ್ಲಾದಲ್ಲಿನ ಹಿಂದೂಗಳ ಹತ್ಯೆ. ದೌರ್ಜನ್ಯವನ್ನು ಖಂಡಿಸಿ ಭಾರತದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಈ ವೇಳೆ ಕೆಕೆಆರ್ ಪರ ಬಾಂಗ್ಲಾದೇಶ್ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಕಣಕ್ಕಿಳಿಯಲು ಬಿಡುವುದಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು.

ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಸಿಸಿಐ ಮುಸ್ತಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈ ಬಿಡುವಂತೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗೆ ಸೂಚಿಸಿದ್ದರು. ಈ ಸೂಚನೆ ಬೆನ್ನಲ್ಲೇ ಕೆಕೆಆರ್ ತಂಡದಿಂದ ಬಾಂಗ್ಲಾದೇಶ್ ಆಟಗಾರನನ್ನು ಕೈ ಬಿಡಲಾಯಿತು.

ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಹೊರಬಿದ್ದ ಬೆನ್ನಲ್ಲೇ ಮುಸ್ತಫಿಝುರ್ ರೆಹಮಾನ್ಗೆ ಪಾಕಿಸ್ತಾನ್ ಸೂಪರ್ ಲೀಗ್ನಿಂದ ಬಿಗ್ ಆಫರ್ ಬಂದಿದೆ. ಅದರಂತೆ ಇದೀಗ ಪಿಎಸ್ಎಲ್ನಲ್ಲಿ ಕಣಕ್ಕಿಳಿಯಲು ಮುಸ್ತಫಿಝುರ್ ರೆಹಮಾನ್ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಪಾಕಿಸ್ತಾನ್ ಸೂಪರ್ ಲೀಗ್ನ ಮುಂದಿನ ಸೀಸನ್ಗಾಗಿ ಆಟಗಾರರ ಆಯ್ಕೆ ಪ್ರಕ್ರಿಯೆಯು ಜನವರಿ 8 ರಂದು ನಡೆಯಲಿದೆ. ಅದಕ್ಕೂ ಮುನ್ನ ಪಿಎಸ್ಎಲ್ನ ಕೆಲ ಫ್ರಾಂಚೈಸಿಗಳು ಮುಸ್ತಫಿಝುರ್ ರೆಹಮಾನ್ ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಇದೀಗ ಬಾಂಗ್ಲಾದೇಶ್ ವೇಗಿ ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
