AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಪರ ಹೊಸ ಇತಿಹಾಸ ನಿರ್ಮಿಸಿದ ನಾಡಿನ್ ಡಿ ಕ್ಲರ್ಕ್

Nadine de Klerk Record: ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸೌತ್ ಆಫ್ರಿಕಾ ಆಲ್​ರೌಂಡರ್ ನಾಡಿನ್ ಡಿ ಕ್ಲರ್ಕ್ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಶ್ರೇಯಾಂಕಾ ಪಾಟೀಲ್ ಹೆಸರಿನಲ್ಲಿದ್ದ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Jan 31, 2026 | 8:32 AM

Share
ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಂದೇ ಸೀಸನ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ನಾಡಿನ್ ಡಿ ಕ್ಲರ್ಕ್ (Nadine de Klerk) ಪಾಲಾಗಿದೆ. ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಸಂಘಟಿಸುವ ಮೂಲಕ ನಾಡಿಕ್ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ 18ನೇ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ನಾಡಿನ್ ಡಿ ಕರ್ಕ್​ ಕೇವಲ 22 ರನ್ ಮಾತ್ರ ನೀಡಿದ್ದರು. ಅಷ್ಟೇ ಅಲ್ಲದೆ ಯುಪಿ ವಾರಿಯರ್ಸ್ ತಂಡದ ನಾಲ್ವರು ಬ್ಯಾಟರ್​ಗಳನ್ನು ಔಟ್ ಮಾಡಿದ್ದರು.

2 / 5
ಈ ನಾಲ್ಕು ವಿಕೆಟ್​ಗಳೊಂದಿಗೆ ನಾಡಿನ್ ಡಿ ಕ್ಲರ್ಕ್​ ಈ ಬಾರಿಯ ಸೀಸನ್​ನಲ್ಲಿ ಒಟ್ಟು 15 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಂದೇ ಸೀಸನ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 5
ಇದಕ್ಕೂ ಮುನ್ನ ಈ ದಾಖಲೆ ಕನ್ನಡತಿ ಶ್ರೇಯಾಂಕಾ ಪಾಟೀಲ್ ಹೆಸರಿನಲ್ಲಿತ್ತು. 2024 ರಲ್ಲಿ ಶ್ರೇಯಾಂಕಾ 8 ಪಂದ್ಯಗಳ ಮೂಲಕ 13 ವಿಕೆಟ್ ಕಬಳಿಸಿದ್ದರು. ಈ ಹದಿಮೂರು ವಿಕೆಟ್​ಗಳೊಂದಿಗೆ ಆರ್​ಸಿಬಿ ಪರ ಸೀಸನ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಸೌತ್ ಆಫ್ರಿಕಾ ಆಟಗಾರ್ತಿ ಯಶಸ್ವಿಯಾಗಿದ್ದಾರೆ. ಈ ಬಾರಿ ಆರ್​ಸಿಬಿ ಪರ 8 ಪಂದ್ಯಗಳನ್ನಾಡಿರುವ ನಾಡಿನ್ ಡಿ ಕ್ಲರ್ಕ್ ಒಟ್ಟು 15 ವಿಕೆಟ್ ಕಬಳಿಸುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ. 

5 / 5