AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮನ್ ಧೀರ್ ಅಬ್ಬರ! 17 ವರ್ಷಗಳ ದಾಖಲೆ ಪುಡಿಪುಡಿ

ನಮನ್ ಧೀರ್ ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ 15 ಎಸೆತಗಳಲ್ಲಿ 42 ರನ್ ಸಿಡಿಸಿ ಭಾರತಕ್ಕೆ ಗೆಲುವು ತಂದುಕೊಟ್ಟರು. ಈ ಪ್ರದರ್ಶನದಿಂದ ಅವರು 17 ವರ್ಷಗಳ ಹಳೆಯ ಟಿ20 ದಾಖಲೆಯನ್ನು ಮುರಿದರು. ಏಳನೇ ಕ್ರಮಾಂಕದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಇರ್ಫಾನ್ ಪಠಾಣ್ ಅವರ ದಾಖಲೆ ಈಗ ನಮನ್ ಪಾಲಾಗಿದೆ. ಅವರ ಸ್ಫೋಟಕ ಬ್ಯಾಟಿಂಗ್ ಕೊನೆಯ ಓವರ್‌ಗಳಲ್ಲಿ ನಿರ್ಣಾಯಕವಾಗಿದ್ದು, ತಂಡಕ್ಕೆ ಭರವಸೆ ಮೂಡಿಸಿದೆ.

ಪೃಥ್ವಿಶಂಕರ
|

Updated on: Oct 22, 2026 | 9:31 PM

Share
ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 4 ವಿಕೆಟ್​ಗಳಿಂದ ಗೆದ್ದುಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಯುವ ಆಲ್‌ರೌಂಡರ್ ನಮನ್ ಧೀರ್. ಪ್ರಮುಖ ಬ್ಯಾಟರ್​​ಗಳು ಬೇಗನೇ ಪೆವಿಲಿಯನ್ ಸೇರಿಕೊಂಡಾಗ ನಾಯಕ ಶ್ರೇಯಸ್ ಅಯ್ಯರ್ ಜೊತೆ ತಂಡದ ಇನ್ನಿಂಗ್ಸ್ ಕಟ್ಟಿದ ನಮನ್ ಧೀರ್ 15 ಎಸೆತಗಳಲ್ಲಿ 42 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು(PC-PTI).

1 / 5
ತನ್ನ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟಿದ್ದು ಮಾತ್ರವಲ್ಲದೆ, ನಮನ್ ಧೀರ್ ಬರೋಬ್ಬರಿ 17 ವರ್ಷಗಳ ಹಳೆಯ ದಾಖಲೆಯನ್ನೂ ಮುರಿದರು. ವಾಸ್ತವವಾಗಿ ಏಳನೇ ಕ್ರಮಾಂಕ ಅಥವಾ ಅದಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದು ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಭಾರತ ಪರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆ ಈಗ ನಮನ್ ಧೀರ್ ಪಾಲಾಗಿದೆ(PC-PTI).

2 / 5
ಇದಕ್ಕೂ ಮೊದಲು ಈ ದಾಖಲೆ ಇರ್ಫಾನ್ ಪಠಾಣ್ ಹೆಸರಿನಲ್ಲಿತ್ತು. 2009ರಲ್ಲಿ ಶ್ರೀಲಂಕಾ ವಿರುದ್ಧ ಅವರು ಏಳನೇ ಕ್ರಮಾಂಕ ಅಥವಾ ಅದಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಅಜೇಯ 33 ರನ್ ಗಳಿಸಿದ್ದರು. ಇದೀಗ ನಮನ್ ಧೀರ್ ಕೇವಲ 15 ಎಸೆತಗಳಲ್ಲಿ ಅಜೇಯ 42 ರನ್ ಸಿಡಿಸುವ ಮೂಲಕ ಆ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ(PC-PTI).

3 / 5
ನಮನ್ ಧೀರ್ ಅವರ ಸ್ಫೋಟಕ ಬ್ಯಾಟಿಂಗ್ ಸಾಮರ್ಥ್ಯಕ್ಕೆ ಅವರ ಅಂಕಿಅಂಶಗಳೇ ಸಾಕ್ಷಿ. ಪಂದ್ಯದ ಕೊನೆಯ ಐದು ಓವರ್‌ಗಳಲ್ಲಿ ಅವರು ಎದುರಾಳಿ ಬೌಲರ್‌ಗಳಿಗೆ ಸಿಂಹಸ್ವಪ್ನವಾಗಿದ್ದಾರೆ. ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 16ರಿಂದ 20ನೇ ಓವರ್‌ಗಳ ನಡುವೆ ನಮನ್ ಧೀರ್ 167 ಎಸೆತಗಳನ್ನು ಎದುರಿಸಿ 341 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ 19 ಸಿಕ್ಸರ್‌ಗಳು ಮತ್ತು 34 ಬೌಂಡರಿಗಳನ್ನು ಬಾರಿಸಿದ್ದಾರೆ(PC-PTI).

4 / 5
ದೊಡ್ಡ ಹೊಡೆತಗಳನ್ನು ಬಾರಿಸುವುದರ ಜೊತೆಗೆ ಸಿಂಗಲ್ಸ್ ಮತ್ತು ಡಬಲ್ಸ್ ಮೂಲಕವೂ ರನ್ ಗಳಿಸುವ ಸಾಮರ್ಥ್ಯ ನಮನ್ ಅವರಲ್ಲಿದೆ. ಕ್ರೀಸ್‌ಗೆ ಬಂದ ತಕ್ಷಣವೇ ಬೌಲರ್‌ಗಳ ಮೇಲೆ ಒತ್ತಡ ಹೇರುವ ಅವರ ಆಟದ ಶೈಲಿ ತಂಡದ ಆಡಳಿತ ಮಂಡಳಿಯ ವಿಶ್ವಾಸ ಹೆಚ್ಚಿಸಿದೆ(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ

ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?

ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ

ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ

ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!

ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ

‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ

'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!

ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ

ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ