AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೊಚ್ಚಲ ಪಂದ್ಯದಲ್ಲಿ 3 ವಿಕೆಟ್ ಪಡೆದು ಇತಿಹಾಸ ಸೃಷ್ಟಿಸಿದ ನಮನ್ ಧೀರ್

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ T20 ಯಲ್ಲಿ ಟೀಂ ಇಂಡಿಯಾ ಗೆದ್ದಿತು. ಚೊಚ್ಚಲ ಅಂತರರಾಷ್ಟ್ರೀಯ ಪಂದ್ಯವಾಡಿದ ಯುವ ಆಲ್‌ರೌಂಡರ್ ನಮನ್ ಧೀರ್, 3 ವಿಕೆಟ್‌ಗಳನ್ನು ಪಡೆದು ಇತಿಹಾಸ ನಿರ್ಮಿಸಿದರು. ತವರು ನೆಲದಲ್ಲಿ ಚೊಚ್ಚಲ T20 ಪಂದ್ಯದಲ್ಲೇ 3 ವಿಕೆಟ್ ಪಡೆದ ಮೊದಲ ಭಾರತೀಯ ಆಫ್-ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಶಾಯ್ ಹೋಪ್ ಸೇರಿದಂತೆ ಪ್ರಮುಖ ಬ್ಯಾಟರ್‌ಗಳನ್ನು ಔಟ್ ಮಾಡಿ, ಭಾರತದ ಗೆಲುವಿಗೆ ಪ್ರಮುಖ ಕಾರಣರಾದರು.

ಪೃಥ್ವಿಶಂಕರ
|

Updated on: Oct 07, 2026 | 3:53 PM

Share
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ತಂಡದ ಈ ಗೆಲುವಿನಲ್ಲಿ ಚೊಚ್ಚಲ ಅಂತರರಾಷ್ಟ್ರೀಯ ಪಂದ್ಯವನ್ನಾಡಿದ ಯುವ ಆಲ್‌ರೌಂಡರ್ ನಮನ್ ಧೀರ್ ಅದ್ಭುತ ಪ್ರದರ್ಶನ ನೀಡಿದರು. ತಮ್ಮ ಚೊಚ್ಚಲ ಪಂದ್ಯದಲ್ಲೇ 3 ವಿಕೆಟ್‌ಗಳನ್ನು ಪಡೆಯುವ ಮೂಲಕ ನಮನ್ ಇತಿಹಾಸ ನಿರ್ಮಿಸಿದರು(PC-PTI).

1 / 5
ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ನಮನ್ ಧೀರ್ ಚೊಚ್ಚಲ ಟಿ20 ಪಂದ್ಯದಲ್ಲೇ 3 ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಆಫ್-ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು(PC-PTI).

2 / 5
ಈ ಪಂದ್ಯದಲ್ಲಿ ನಮನ್​ಗೆ ಬಲಿಯಾದ ವಿಂಡೀಸ್ ಬ್ಯಾಟರ್​ಗಳ ಪಟ್ಟಿಯಲ್ಲಿ ನಾಯಕ ಶಾಯ್ ಹೋಪ್, ಸ್ಫೋಟಕ ಆಲ್‌ರೌಂಡರ್ ರೊಮಾರಿಯೊ ಶೆಫರ್ಡ್ ಹಾಗೂ ಶಮರ್ ಸ್ಪ್ರಿಂಗರ್ ಸೇರಿದ್ದರು. ಅದರಲ್ಲೂ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ದೊಡ್ಡ ಮೊತ್ತ ಕಲೆಹಾಕುವ ಸೂಚನೆ ನೀಡಿದ್ದ ಶಾಯ್ ಹೋಪ್ ಅವರ ವಿಕೆಟ್ ಪಡೆದಿದ್ದು, ನಮನ್​​ಗೆ ಸ್ಮರಣೀಯವಾಗಿತ್ತು(PC-PTI).

3 / 5
ನಮನ್ ತಮ್ಮ 4 ಓವರ್‌ಗಳ ಕೋಟಾದಲ್ಲಿ 31 ರನ್​ಗಳನ್ನು ನೀಡಿ 3 ನಿರ್ಣಾಯಕ ವಿಕೆಟ್‌ಗಳನ್ನು ಪಡೆದರು. ಈ ಮೂಲಕ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಟಿ20 ಚೊಚ್ಚಲ ಪಂದ್ಯದಲ್ಲೇ 3 ವಿಕೆಟ್ ಪಡೆದ ಮೊದಲ ಆಫ್-ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಹಾಗೆಯೇ ತವರು ನೆಲದಲ್ಲಿ ಚೊಚ್ಚಲ ಪಂದ್ಯದಲ್ಲೇ 3 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಏಕೈಕ ಭಾರತೀಯ ಸ್ಪಿನ್ನರ್ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾದರು(PC-PTI).

4 / 5
ತಮ್ಮ ಚೊಚ್ಚಲ ಅಂತರರಾಷ್ಟ್ರೀಯ ಟಿ20 ಪಂದ್ಯದಲ್ಲಿ 3 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತೀಯ ಸ್ಪಿನ್ನರ್‌ಗಳ ಪಟ್ಟಿಯಲ್ಲಿ ಪ್ರಗ್ಯಾನ್ ಓಜಾ ಅಗ್ರಸ್ಥಾನದಲ್ಲಿದ್ದಾರೆ. 2009 ರಲ್ಲಿ ನಾಟಿಂಗ್‌ಹ್ಯಾಮ್​ನಲ್ಲಿ ನಡೆದ ಪಂದ್ಯದಲ್ಲಿ ಅವರು 21 ರನ್ ನೀಡಿ 4  ವಿಕೆಟ್ ಉರುಳಿಸಿದ್ದರು. 2ನೇ ಸ್ಥಾನದಲ್ಲಿರುವ ಅಕ್ಷರ್ ಪಟೇಲ್ 2015 ರಲ್ಲಿ ಹರಾರೆಯಲ್ಲಿ ನಡೆದ ಪಂದ್ಯದಲ್ಲಿ 17 ರನ್ ನೀಡಿ 3 ವಿಕೆಟ್ ಪಡೆದಿದ್ದರು. ಆದರೆ ಇವರಿಬ್ಬರು ವಿದೇಶಿ ನೆಲ್ಲದಲ್ಲಿ ಈ ಸಾಧನೆ ಮಾಡದ್ದರು(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ

'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'

ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು

ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ

ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್

ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ

ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್

ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ

ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು

ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!