
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ತಂಡದ ಈ ಗೆಲುವಿನಲ್ಲಿ ಚೊಚ್ಚಲ ಅಂತರರಾಷ್ಟ್ರೀಯ ಪಂದ್ಯವನ್ನಾಡಿದ ಯುವ ಆಲ್‌ರೌಂಡರ್ ನಮನ್ ಧೀರ್ ಅದ್ಭುತ ಪ್ರದರ್ಶನ ನೀಡಿದರು. ತಮ್ಮ ಚೊಚ್ಚಲ ಪಂದ್ಯದಲ್ಲೇ 3 ವಿಕೆಟ್‌ಗಳನ್ನು ಪಡೆಯುವ ಮೂಲಕ ನಮನ್ ಇತಿಹಾಸ ನಿರ್ಮಿಸಿದರು(PC-PTI).
ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ನಮನ್ ಧೀರ್ ಚೊಚ್ಚಲ ಟಿ20 ಪಂದ್ಯದಲ್ಲೇ 3 ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಆಫ್-ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು(PC-PTI).
ಈ ಪಂದ್ಯದಲ್ಲಿ ನಮನ್ಗೆ ಬಲಿಯಾದ ವಿಂಡೀಸ್ ಬ್ಯಾಟರ್ಗಳ ಪಟ್ಟಿಯಲ್ಲಿ ನಾಯಕ ಶಾಯ್ ಹೋಪ್, ಸ್ಫೋಟಕ ಆಲ್‌ರೌಂಡರ್ ರೊಮಾರಿಯೊ ಶೆಫರ್ಡ್ ಹಾಗೂ ಶಮರ್ ಸ್ಪ್ರಿಂಗರ್ ಸೇರಿದ್ದರು. ಅದರಲ್ಲೂ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ದೊಡ್ಡ ಮೊತ್ತ ಕಲೆಹಾಕುವ ಸೂಚನೆ ನೀಡಿದ್ದ ಶಾಯ್ ಹೋಪ್ ಅವರ ವಿಕೆಟ್ ಪಡೆದಿದ್ದು, ನಮನ್ಗೆ ಸ್ಮರಣೀಯವಾಗಿತ್ತು(PC-PTI).
ನಮನ್ ತಮ್ಮ 4 ಓವರ್‌ಗಳ ಕೋಟಾದಲ್ಲಿ 31 ರನ್ಗಳನ್ನು ನೀಡಿ 3 ನಿರ್ಣಾಯಕ ವಿಕೆಟ್‌ಗಳನ್ನು ಪಡೆದರು. ಈ ಮೂಲಕ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಟಿ20 ಚೊಚ್ಚಲ ಪಂದ್ಯದಲ್ಲೇ 3 ವಿಕೆಟ್ ಪಡೆದ ಮೊದಲ ಆಫ್-ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಹಾಗೆಯೇ ತವರು ನೆಲದಲ್ಲಿ ಚೊಚ್ಚಲ ಪಂದ್ಯದಲ್ಲೇ 3 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಏಕೈಕ ಭಾರತೀಯ ಸ್ಪಿನ್ನರ್ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾದರು(PC-PTI).
ತಮ್ಮ ಚೊಚ್ಚಲ ಅಂತರರಾಷ್ಟ್ರೀಯ ಟಿ20 ಪಂದ್ಯದಲ್ಲಿ 3 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತೀಯ ಸ್ಪಿನ್ನರ್‌ಗಳ ಪಟ್ಟಿಯಲ್ಲಿ ಪ್ರಗ್ಯಾನ್ ಓಜಾ ಅಗ್ರಸ್ಥಾನದಲ್ಲಿದ್ದಾರೆ. 2009 ರಲ್ಲಿ ನಾಟಿಂಗ್ಹ್ಯಾಮ್ನಲ್ಲಿ ನಡೆದ ಪಂದ್ಯದಲ್ಲಿ ಅವರು 21 ರನ್ ನೀಡಿ 4 ವಿಕೆಟ್ ಉರುಳಿಸಿದ್ದರು. 2ನೇ ಸ್ಥಾನದಲ್ಲಿರುವ ಅಕ್ಷರ್ ಪಟೇಲ್ 2015 ರಲ್ಲಿ ಹರಾರೆಯಲ್ಲಿ ನಡೆದ ಪಂದ್ಯದಲ್ಲಿ 17 ರನ್ ನೀಡಿ 3 ವಿಕೆಟ್ ಪಡೆದಿದ್ದರು. ಆದರೆ ಇವರಿಬ್ಬರು ವಿದೇಶಿ ನೆಲ್ಲದಲ್ಲಿ ಈ ಸಾಧನೆ ಮಾಡದ್ದರು(PC-PTI).