AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namibia vs Karnataka: ನಮೀಬಿಯಾ ವಿರುದ್ಧ 5 ಪಂದ್ಯಗಳ ಏಕದಿನ ಸರಣಿ ಗೆದ್ದ ಕರ್ನಾಟಕ..!

Namibia vs Karnataka: ಐದು ಪಂದ್ಯಗಳ ಏಕದಿನ ಸರಣಿಗಾಗಿ ನಮೀಬಿಯಾ ಪ್ರವಾಸ ಮಾಡಿರುವ ಕರ್ನಾಟಕ ಕ್ರಿಕೆಟ್ ತಂಡ 4ನೇ ಏಕದಿನ ಪಂದ್ಯವನ್ನು 5 ವಿಕೆಟ್​ಗಳಿಂದ ಗೆದ್ದು ಏಕದಿನ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಂಡಿದೆ.

ಪೃಥ್ವಿಶಂಕರ
|

Updated on: Jun 09, 2023 | 11:14 PM

Share
ಐದು ಪಂದ್ಯಗಳ ಏಕದಿನ ಸರಣಿಗಾಗಿ ನಮೀಬಿಯಾ ಪ್ರವಾಸ ಮಾಡಿರುವ ಕರ್ನಾಟಕ ಕ್ರಿಕೆಟ್ ತಂಡ ವಿಂಡ್‌ಹೋಕ್‌ನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ 4ನೇ ಏಕದಿನ ಪಂದ್ಯವನ್ನು 5 ವಿಕೆಟ್​ಗಳಿಂದ ಗೆದ್ದು ಏಕದಿನ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಂಡಿದೆ.

1 / 6
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆತಿಥೇಯ ನಮೀಬಿಯಾ ತಂಡ ನಿಗದಿತ 50 ಓವರ್‌ಗಳಲ್ಲಿ ಏಳು ವಿಕೆಟ್‌ಗಳ ನಷ್ಟಕ್ಕೆ 254 ರನ್‌ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಕರ್ನಾಟಕ ತಂಡ ಇನ್ನು 17 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್​ಗಳಿಂದ ಗೆದ್ದು ಬೀಗಿತು.

2 / 6
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನಮೀಬಿಯಾದ ಆರಂಭ ಅತ್ಯಂತ ಕಳಪೆಯಾಗಿತ್ತು. ತಂಡದ ಮೊದಲ 3 ವಿಕೆಟ್​ಗಳು ಕೇವಲ 17 ರನ್​ಗಳಿಗೆ ಉರುಳಿದವು. ಆದರೆ ನಾಯಕ ಜಾನ್ ಫ್ರಿಲಿಂಕ್ 124 ಎಸೆತಗಳಲ್ಲಿ 109 ರನ್​ಗಳ ಶತಕದ ಇನ್ನಿಂಗ್ಸ್ ಆಡಿದರು. ಇವರ ಇನ್ನಿಂಗ್ಸ್‌ನ ಸಹಾಯದಿಂದ ನಮೀಬಿಯಾ 254 ರನ್‌ಗಳ ಗುರಿ ಸೆಟ್ ಮಾಡುವಲ್ಲಿ ಯಶಸ್ವಿಯಾಯಿತು.

3 / 6
ಕರ್ನಾಟಕದ ಪರ ನಿಖಿನ್ ಜೋಶಿ ಎರಡು ವಿಕೆಟ್ ಪಡೆದರು. ವಿಧ್ವತ್ ಕಾವೇರಪ್ಪ, ವಿಜಯ್‌ಕುಮಾರ್ ವೈಶಾಖ್ ಮತ್ತು ಶುಭಾಂಗ್ ಹೆಗ್ಡೆ ತಲಾ ಒಂದು ವಿಕೆಟ್ ಪಡೆದರು.

4 / 6
254 ರನ್​ಗಳ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ 46.1 ಓವರ್‌ಗಳಲ್ಲಿ 256 ರನ್ ಬಾರಿಸುವುದರೊಂದಿಗೆ ಸುಲಭ ಜಯ ಸಾಧಿಸಿತು. ತಂಡದ ಪರ ಆರಂಭಿಕ ಎಲ್‌ಆರ್ ಚೇತನ್ 58 ಎಸೆತಗಳಲ್ಲಿ 47 ರನ್ ಸಿಡಿಸಿದರೆ, ನಿಖಿನ್ ಜೋಶಿ 56 ರನ್ ಗಳಿಸಿ ರನೌಟ್ ಆದರು.

5 / 6
ಇನ್ನು ಸಿದ್ಧಾರ್ಥ್ 26 ರನ್​ಗಳ ಇನ್ನಿಂಗ್ಸ್ ಆಡಿದರೆ, ಕೃತಿಕ್ ಕೃಷ್ಣ 32 ರನ್ ಬಾರಿಸಿದರು. ರವಿಕುಮಾರ್ ಸಮರ್ಥ್ 56 ರನ್ ಮತ್ತು ಶುಭಾಂಗ್ ಹೆಗ್ಡೆ ಅಜೇಯ 30 ರನ್ ಬಾರಿಸುವುದರೊಂದಿಗೆ ತಂಡಕ್ಕೆ ಸುಲಭ ಜಯ ತಂದುಕೊಟ್ಟರು. ನಮೀಬಿಯಾ ಪರ ಬೆನ್ ಶಿಕೊಂಗೊ ಎರಡು ವಿಕೆಟ್ ಪಡೆದರೆ, ಹಾಂಡ್ರಾ ಕ್ಲಾಜಿಂಜಾ ಮತ್ತು ಜಾನ್ ಫ್ರಿಲಿಂಕ್ ತಲಾ ಒಂದು ವಿಕೆಟ್ ಪಡೆದರು.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ