- Kannada News Photo gallery Cricket photos Kannada News | Narendra Modi Stadium has so far been batting friendly Here is the pitch report of GT vs MI Qualifier 2 Match
GT vs MI: ಕ್ವಾಲಿಫೈಯರ್-2 ಪಂದ್ಯ ನಡೆಯಲಿರುವ ಅತಿ ದೊಡ್ಡ ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ಹೇಗಿದೆ?
Narendra Modi Stadium Pitch: ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಕ್ವಾಲಿಫೈಯರ್-2 ಪಂದ್ಯ ನಡೆಯಲಿರುವ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ.
Updated on: May 26, 2023 | 9:25 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಇನ್ನು ಕೇವಲ ಎರಡು ಪಂದ್ಯಗಳು ಮಾತ್ರ ನಡೆಯಲಿದೆ. ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಕ್ವಾಲಿಫೈಯರ್ನಲ್ಲಿ ಗೆದ್ದು ಫೈನಲ್ಗೆ ಪ್ರವೇಶ ಪಡೆದಿದೆ.

ಇದೀಗ ಕ್ವಾಲಿಫೈಯರ್ 1 ರಲ್ಲಿ ಸೋತ ತಂಡ ಮತ್ತು ಎಲಿಮಿನೇಟರ್ನಲ್ಲಿ ಗೆದ್ದ ತಂಡಗಳ ನಡುವೆ ಕ್ವಾಲಿಫೈಯರ್-2 ಪಂದ್ಯ ನಡೆಯಲಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಮತ್ತು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ನಡುವೆ ಈ ಹೈವೋಲ್ಟೇಜ್ ಕದನ ಏರ್ಪಡಿಸಲಾಗಿದೆ.

ಈ ಪಂದ್ಯ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಸಿಎಸ್ಕೆ ವಿರುದ್ಧ ಐಪಿಎಲ್ 2023 ಫೈನಲ್ನಲ್ಲಿ ಟ್ರೋಫಿಗಾಗಿ ಸೆಣೆಸಾಡಲಿದೆ.

ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಸರು ಪಡೆದುಕೊಂಡಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ. ಪಂದ್ಯದ ಆರಂಭದಲ್ಲಿ ಬ್ಯಾಟಿಂಗ್‌ಗೆ ಯೋಗ್ಯವಾಗಿದ್ದರೆ, ಪಂದ್ಯ ಸಾಗುತ್ತಿದ್ದಂತೆ ಇಲ್ಲಿನ ವಿಕೆಟ್ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಲಿದ್ದಾರೆ.

ಈ ಮೈದಾನದಲ್ಲಿ 180 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಉತ್ತಮ ಸ್ಕೋರ್ ಆಗಲಿದ್ದು, ಟಾಸ್ ಗೆದ್ದ ನಾಯಕ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚು. ಸುಮಾರು 114,000 ಜನರ ಆಸನ ಸಾಮರ್ಥ್ಯವನ್ನು ಈ ಕ್ರೀಡಾಂಗಣ ಹೊಂದಿದೆ.

ದ್ವಿತೀಯ ಇನಿಂಗ್ಸ್ ವೇಳೆ ಬೌಲಿಂಗ್ ಮಾಡುವಾಗ ಹುಲ್ಲು ಹಾಸಿನ ಮೇಲೆ ಕಾಣಿಸಿಕೊಳ್ಳುವ ಇಬ್ಬನಿ ಪ್ರಮುಖ ಪಾತ್ರ ವಹಿಸಲಿದೆ. ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಈ ಮೈದಾನ 7 ಪಂದ್ಯಗಳಿಗೆ ಅತಿಥ್ಯ ವಹಿಸಿದ್ದು, 4 ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ್ದ ತಂಡ ಜಯಿಸಿದ್ದರೆ, 3 ಪಂದ್ಯಗಳಲ್ಲಿ ಚೇಸ್ ಮಾಡಿದ ತಂಡ ಗೆಲುವನ್ನು ಕಸಿದಿದೆ.

ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡೂ ತಂಡಗಳಲ್ಲಿಯೂ ಗುಣಮಟ್ಟದ ಬ್ಯಾಟ್ಸ್‌ಮನ್‌ಗಳಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರನ್ ಹೊಳೆ ಹರಿಯುವ ಸಾಧ್ಯತೆ ಇದೆ.









