GT vs MI: ಕ್ವಾಲಿಫೈಯರ್-2 ಪಂದ್ಯ ನಡೆಯಲಿರುವ ಅತಿ ದೊಡ್ಡ ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ಹೇಗಿದೆ?

Vinay Bhat

|

Updated on: May 26, 2023 | 9:25 AM

Narendra Modi Stadium Pitch: ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಕ್ವಾಲಿಫೈಯರ್-2 ಪಂದ್ಯ ನಡೆಯಲಿರುವ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ಬ್ಯಾಟಿಂಗ್‌ ಸ್ನೇಹಿಯಾಗಿದೆ.

May 26, 2023 | 9:25 AM
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಇನ್ನು ಕೇವಲ ಎರಡು ಪಂದ್ಯಗಳು ಮಾತ್ರ ನಡೆಯಲಿದೆ. ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದು ಫೈನಲ್​ಗೆ ಪ್ರವೇಶ ಪಡೆದಿದೆ.

1 / 7
ಇದೀಗ ಕ್ವಾಲಿಫೈಯರ್ 1 ರಲ್ಲಿ ಸೋತ ತಂಡ ಮತ್ತು ಎಲಿಮಿನೇಟರ್​ನಲ್ಲಿ ಗೆದ್ದ ತಂಡಗಳ ನಡುವೆ ಕ್ವಾಲಿಫೈಯರ್-2 ಪಂದ್ಯ ನಡೆಯಲಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಮತ್ತು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ನಡುವೆ ಈ ಹೈವೋಲ್ಟೇಜ್ ಕದನ ಏರ್ಪಡಿಸಲಾಗಿದೆ.

2 / 7
ಈ ಪಂದ್ಯ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಸಿಎಸ್​ಕೆ ವಿರುದ್ಧ ಐಪಿಎಲ್ 2023 ಫೈನಲ್​ನಲ್ಲಿ ಟ್ರೋಫಿಗಾಗಿ ಸೆಣೆಸಾಡಲಿದೆ.

3 / 7
ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಸರು ಪಡೆದುಕೊಂಡಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಸ್ಟೇಡಿಯಂ ಪಿಚ್‌ ಬ್ಯಾಟಿಂಗ್‌ ಸ್ನೇಹಿಯಾಗಿದೆ. ಪಂದ್ಯದ ಆರಂಭದಲ್ಲಿ ಬ್ಯಾಟಿಂಗ್‌ಗೆ ಯೋಗ್ಯವಾಗಿದ್ದರೆ, ಪಂದ್ಯ ಸಾಗುತ್ತಿದ್ದಂತೆ ಇಲ್ಲಿನ ವಿಕೆಟ್‌ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಲಿದ್ದಾರೆ.

4 / 7
ಈ ಮೈದಾನದಲ್ಲಿ 180 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಉತ್ತಮ ಸ್ಕೋರ್ ಆಗಲಿದ್ದು, ಟಾಸ್ ಗೆದ್ದ ನಾಯಕ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚು. ಸುಮಾರು 114,000 ಜನರ ಆಸನ ಸಾಮರ್ಥ್ಯವನ್ನು ಈ ಕ್ರೀಡಾಂಗಣ ಹೊಂದಿದೆ.

5 / 7
ದ್ವಿತೀಯ ಇನಿಂಗ್ಸ್ ವೇಳೆ ಬೌಲಿಂಗ್‌ ಮಾಡುವಾಗ ಹುಲ್ಲು ಹಾಸಿನ ಮೇಲೆ ಕಾಣಿಸಿಕೊಳ್ಳುವ ಇಬ್ಬನಿ ಪ್ರಮುಖ ಪಾತ್ರ ವಹಿಸಲಿದೆ. ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಈ ಮೈದಾನ 7 ಪಂದ್ಯಗಳಿಗೆ ಅತಿಥ್ಯ ವಹಿಸಿದ್ದು, 4 ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ್ದ ತಂಡ ಜಯಿಸಿದ್ದರೆ, 3 ಪಂದ್ಯಗಳಲ್ಲಿ ಚೇಸ್ ಮಾಡಿದ ತಂಡ ಗೆಲುವನ್ನು ಕಸಿದಿದೆ.

6 / 7
ಗುಜರಾತ್‌ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡೂ ತಂಡಗಳಲ್ಲಿಯೂ ಗುಣಮಟ್ಟದ ಬ್ಯಾಟ್ಸ್‌ಮನ್‌ಗಳಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರನ್‌ ಹೊಳೆ ಹರಿಯುವ ಸಾಧ್ಯತೆ ಇದೆ.

7 / 7

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada