Naseem Shah: 11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ

Updated on: Apr 02, 2025 | 1:54 PM

New Zealand vs Pakistan: ಪಾಕಿಸ್ತಾನ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ನ್ಯೂಝಿಲೆಂಡ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 50 ಓವರ್​ಗಳಲ್ಲಿ 292 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 208 ರನ್​ಗಳಿಗೆ ಆಲೌಟ್ ಆಯಿತು. ಈ ಸೋಲಿನ ಹೊರತಾಗಿಯೂ ಪಾಕ್ ಆಟಗಾರ ನಸೀಮ್ ಶಾ ಭರ್ಜರಿ ಅರ್ಧಶತಕ ಬಾರಿಸಿ ದಾಖಲೆ ಬರೆದಿದ್ದು ವಿಶೇಷ.

1 / 5
ಏಕದಿನ ಕ್ರಿಕೆಟ್​ನಲ್ಲಿ ನಸೀಮ್ ಶಾ (Naseem Shah) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಭರ್ಜರಿ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ. ಹ್ಯಾಮಿಲ್ಟನ್​ನ ಸೆಡೆನ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು.

ಏಕದಿನ ಕ್ರಿಕೆಟ್​ನಲ್ಲಿ ನಸೀಮ್ ಶಾ (Naseem Shah) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಭರ್ಜರಿ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ. ಹ್ಯಾಮಿಲ್ಟನ್​ನ ಸೆಡೆನ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು.

2 / 5

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 292 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಪರ ಅಗ್ರ ಕ್ರಮಾಂಕದ ಬ್ಯಾಟರ್​ಗಳು ವಿಫಲರಾಗಿದ್ದರು. ಆದರೆ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಸೀಮ್ ಶಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

3 / 5

ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ನಸೀಮ್ ಶಾ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 51 ರನ್ ಬಾರಿಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಹಾಫ್ ಸೆಂಚುರಿ ಸಿಡಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡರು.

4 / 5

ಇದಕ್ಕೂ ಮುನ್ನ ಇಂತಹದೊಂದು ಸಾಧನೆ ಮಾಡಿದ್ದು ಪಾಕಿಸ್ತಾನದ ಎಡಗೈ ವೇಗಿ ಮೊಹಮ್ಮದ್ ಅಮೀರ್. 2016 ರಲ್ಲಿ ಟ್ರೆಂಟ್​ ಬ್ರಿಡ್ಜ್​ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ 11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಮೊಹಮ್ಮದ್ ಅಮೀರ್ ಕೇವಲ 28 ಎಸೆತಗಳಲ್ಲಿ 58 ರನ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

5 / 5

ಇದೀಗ ನ್ಯೂಝಿಲೆಂಡ್ ವಿರುದ್ಧ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ನಸೀಮ್ ಶಾ 44 ಎಸೆತಗಳಲ್ಲಿ ಹಾಫ್ ಸೆಂಚುರಿಸಿ ಸಿಡಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಕೊನೆಯ ಕ್ರಮಾಂಕದಲ್ಲಿ ಕಣಕ್ಕಿಳಿದು ಹಾಫ್ ಸೆಂಚುರಿಸಿದ ವಿಶ್ವದ 2ನೇ ಆಟಗಾರ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Loading...
Unable to load recommendations.
Follow Us