AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naseem Shah: ಶಮಿ ಬಳಿಕ ಪಾಕ್ ಬೌಲರ್​ಗೂ ತಗುಲಿದ ಕೊರೊನಾ..! ಟಿ20 ಸರಣಿಯಿಂದ ಔಟ್

Naseem Shah: ಕೋವಿಡ್ ವರದಿಯಲ್ಲಿ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯಿಂದ ನಸೀಮ್ ಶಾ ಹೊರಗುಳಿದಿದ್ದಾರೆ.

TV9 Web
| Edited By: |

Updated on: Sep 29, 2022 | 6:45 PM

Share
ಇತ್ತೀಚಿನ ದಿನಗಳಲ್ಲಿ ವೇಗದ ಬೌಲರ್​ಗಳು ಸಾಕಷ್ಟು ಇಂಜುರಿ ಸಮಸ್ಯೆಯನ್ನು ಎದುರಿಸುತ್ತಿದ್ದು, ಅದರಲ್ಲೂ ವಿಶೇಷವಾಗಿ ಭಾರತ ಮತ್ತು ಪಾಕಿಸ್ತಾನ ತಂಡಗಳು ತಮ್ಮ ವೇಗಿಗಳ ಫಿಟ್ನೆಸ್ ಸಮಸ್ಯೆಯಿಂದ ಹೆಚ್ಚು ತೊಂದರೆಗೊಳಗಾಗಿವೆ. ಜಸ್ಪ್ರೀತ್ ಬುಮ್ರಾ ಮತ್ತು ಶಾಹೀನ್ ಶಾ ಆಫ್ರಿದಿ ಅವರಂತಹ ಸ್ಟಾರ್ ವೇಗಿಗಳು ಇಂಜುರಿಯಿಂದ ಬಳಲುತ್ತಿದ್ದರೆ, ಈಗ ಈ ಪಟ್ಟಿಗೆ ಪಾಕಿಸ್ತಾನದ ಯುವ ವೇಗಿ ನಸೀಮ್ ಶಾ ಹೆಸರು ಕೂಡ ಸೇರ್ಪಡೆಯಾಗಿದೆ.

1 / 5
ನಸೀಮ್ ಶಾ (ಪಾಕಿಸ್ತಾನ, 19 ವರ್ಷ).. ಪಾಕಿಸ್ತಾನದ ವೇಗದ ಬೌಲರ್ ನಸೀಮ್ ಶಾಗೆ ಈಗ ಕೇವಲ 19 ವರ್ಷ. ಇತ್ತೀಚೆಗೆ ನಡೆದ ಏಷ್ಯಾಕಪ್​ನಲ್ಲಿ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದರು. ನಸೀಮ್ ಪಾಕಿಸ್ತಾನದ ಪರವಾಗಿ ಒಟ್ಟು 13 ಟೆಸ್ಟ್ ಪಂದ್ಯಗಳು, 3 ಏಕದಿನ ಮತ್ತು 6 T20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.

2 / 5
ಎದೆನೋವಿನಿಂದ ಬಳಲುತ್ತಿದ್ದ ನಸೀಮ್ ಅವರನ್ನು ಈ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಅವರು ನ್ಯುಮೋನಿಯಾ ಸೋಂಕಿಗೆ ಒಳಗಾಗಿದ್ದರು. ಇದಾದ ನಂತರ ಅವರ ಕೋವಿಡ್ ವರದಿ ಕೂಡ ಪಾಸಿಟಿವ್ ಎಂದು ಕಂಡುಬಂದಿದೆ.

3 / 5
ನಸೀಮ್ ತಂಡದ ಹೋಟೆಲ್‌ಗೆ ಮರಳಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿದ್ದು, ಅಲ್ಲಿ ಅವರು ಕೋವಿಡ್ -19 ಗೆ ಸಂಬಂಧಿಸಿದ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಾರೆ ಎಂದು ಮಂಡಳಿ ಹೇಳಿಕೆ ನೀಡಿದೆ.

4 / 5
ಆದರೆ, ಮುಂದಿನ ವಾರ ಆರಂಭವಾಗಲಿರುವ ನ್ಯೂಜಿಲೆಂಡ್ ಪ್ರವಾಸದಲ್ಲಿ ನಸೀಮ್ ಶಾ ತಂಡದೊಂದಿಗೆ ಇರುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ಪಿಸಿಬಿ ಸ್ಪಷ್ಟಪಡಿಸಿಲ್ಲ. ತ್ರಿಕೋನ ಸರಣಿಯಲ್ಲಿ ಪಾಲ್ಗೊಳ್ಳಲಿರುವ ಪಾಕಿಸ್ತಾನ ತಂಡ ಸೋಮವಾರ ನ್ಯೂಜಿಲೆಂಡ್ ಪ್ರವಾಸಕ್ಕೆ ತೆರಳಲಿದೆ. ಈ ಸರಣಿಯಲ್ಲಿ ಬಾಂಗ್ಲಾದೇಶ ಮೂರನೇ ತಂಡವಾಗಿದೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ