Updated on: Sep 29, 2022 | 6:45 PM
ಇತ್ತೀಚಿನ ದಿನಗಳಲ್ಲಿ ವೇಗದ ಬೌಲರ್ಗಳು ಸಾಕಷ್ಟು ಇಂಜುರಿ ಸಮಸ್ಯೆಯನ್ನು ಎದುರಿಸುತ್ತಿದ್ದು, ಅದರಲ್ಲೂ ವಿಶೇಷವಾಗಿ ಭಾರತ ಮತ್ತು ಪಾಕಿಸ್ತಾನ ತಂಡಗಳು ತಮ್ಮ ವೇಗಿಗಳ ಫಿಟ್ನೆಸ್ ಸಮಸ್ಯೆಯಿಂದ ಹೆಚ್ಚು ತೊಂದರೆಗೊಳಗಾಗಿವೆ. ಜಸ್ಪ್ರೀತ್ ಬುಮ್ರಾ ಮತ್ತು ಶಾಹೀನ್ ಶಾ ಆಫ್ರಿದಿ ಅವರಂತಹ ಸ್ಟಾರ್ ವೇಗಿಗಳು ಇಂಜುರಿಯಿಂದ ಬಳಲುತ್ತಿದ್ದರೆ, ಈಗ ಈ ಪಟ್ಟಿಗೆ ಪಾಕಿಸ್ತಾನದ ಯುವ ವೇಗಿ ನಸೀಮ್ ಶಾ ಹೆಸರು ಕೂಡ ಸೇರ್ಪಡೆಯಾಗಿದೆ.
ನಸೀಮ್ ಶಾ (ಪಾಕಿಸ್ತಾನ, 19 ವರ್ಷ).. ಪಾಕಿಸ್ತಾನದ ವೇಗದ ಬೌಲರ್ ನಸೀಮ್ ಶಾಗೆ ಈಗ ಕೇವಲ 19 ವರ್ಷ. ಇತ್ತೀಚೆಗೆ ನಡೆದ ಏಷ್ಯಾಕಪ್ನಲ್ಲಿ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದರು. ನಸೀಮ್ ಪಾಕಿಸ್ತಾನದ ಪರವಾಗಿ ಒಟ್ಟು 13 ಟೆಸ್ಟ್ ಪಂದ್ಯಗಳು, 3 ಏಕದಿನ ಮತ್ತು 6 T20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.
ಎದೆನೋವಿನಿಂದ ಬಳಲುತ್ತಿದ್ದ ನಸೀಮ್ ಅವರನ್ನು ಈ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಅವರು ನ್ಯುಮೋನಿಯಾ ಸೋಂಕಿಗೆ ಒಳಗಾಗಿದ್ದರು. ಇದಾದ ನಂತರ ಅವರ ಕೋವಿಡ್ ವರದಿ ಕೂಡ ಪಾಸಿಟಿವ್ ಎಂದು ಕಂಡುಬಂದಿದೆ.
ನಸೀಮ್ ತಂಡದ ಹೋಟೆಲ್‌ಗೆ ಮರಳಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿದ್ದು, ಅಲ್ಲಿ ಅವರು ಕೋವಿಡ್ -19 ಗೆ ಸಂಬಂಧಿಸಿದ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಾರೆ ಎಂದು ಮಂಡಳಿ ಹೇಳಿಕೆ ನೀಡಿದೆ.
ಆದರೆ, ಮುಂದಿನ ವಾರ ಆರಂಭವಾಗಲಿರುವ ನ್ಯೂಜಿಲೆಂಡ್ ಪ್ರವಾಸದಲ್ಲಿ ನಸೀಮ್ ಶಾ ತಂಡದೊಂದಿಗೆ ಇರುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ಪಿಸಿಬಿ ಸ್ಪಷ್ಟಪಡಿಸಿಲ್ಲ. ತ್ರಿಕೋನ ಸರಣಿಯಲ್ಲಿ ಪಾಲ್ಗೊಳ್ಳಲಿರುವ ಪಾಕಿಸ್ತಾನ ತಂಡ ಸೋಮವಾರ ನ್ಯೂಜಿಲೆಂಡ್ ಪ್ರವಾಸಕ್ಕೆ ತೆರಳಲಿದೆ. ಈ ಸರಣಿಯಲ್ಲಿ ಬಾಂಗ್ಲಾದೇಶ ಮೂರನೇ ತಂಡವಾಗಿದೆ.