Nathan Lyon: ವಿಶ್ವ ದಾಖಲೆಯ ಪಟ್ಟಿಯಲ್ಲಿ 7ನೇ ಸ್ಥಾನಕ್ಕೇರಿದ ನಾಥನ್ ಲಿಯಾನ್
Nathan Lyon Records: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ 7ನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ವೆಸ್ಟ್ ಇಂಡೀಸ್ನ ಮಾಜಿ ವೇಗಿಯ ಸಾಧನೆಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಸೂಪರ್ ಸೆವೆನ್ ಬೌಲರ್ಗಳ ಪಟ್ಟಿ ಇಲ್ಲಿದೆ...
Updated on: Mar 02, 2024 | 10:04 AM

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ (Nathan Lyon) 7ನೇ ಸ್ಥಾನಕ್ಕೇರಿದ್ದಾರೆ. ವೆಲ್ಲಿಂಗ್ಟನ್ನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 6* ವಿಕೆಟ್ ಕಬಳಿಸಿ ಈ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ನ ಕರ್ಟ್ನಿ ವಾಲ್ಷ್ 7ನೇ ಸ್ಥಾನದಲ್ಲಿದ್ದರು. 132 ಟೆಸ್ಟ್ ಪಂದ್ಯಗಳಿಂದ ಒಟ್ಟು 519 ವಿಕೆಟ್ ಕಬಳಿಸಿ ವಿಂಡೀಸ್ನ ಮಾಜಿ ವೇಗಿ ಈ ಸಾಧನೆ ಮಾಡಿದ್ದರು. ಇದೀಗ ನಾಥನ್ ಲಿಯಾನ್ ವಾಲ್ಷ್ ಅವರನ್ನು ಹಿಂದಿಕ್ಕಿದ್ದಾರೆ.

ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ನ ಕರ್ಟ್ನಿ ವಾಲ್ಷ್ 7ನೇ ಸ್ಥಾನದಲ್ಲಿದ್ದರು. 132 ಟೆಸ್ಟ್ ಪಂದ್ಯಗಳಿಂದ ಒಟ್ಟು 519 ವಿಕೆಟ್ ಕಬಳಿಸಿ ವಿಂಡೀಸ್ನ ಮಾಜಿ ವೇಗಿ ಈ ಸಾಧನೆ ಮಾಡಿದ್ದರು. ಇದೀಗ ನಾಥನ್ ಲಿಯಾನ್ ವಾಲ್ಷ್ ಅವರನ್ನು ಹಿಂದಿಕ್ಕಿ 7ನೇ ಸ್ಥಾನ ಅಲಂಕರಿಸಿದ್ದಾರೆ.

128* ಟೆಸ್ಟ್ ಪಂದ್ಯಗಳನ್ನಾಡಿರುವ ನಾಥನ್ ಲಿಯಾನ್ ಇದುವರೆಗೆ 522* ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ 7ನೇ ಬೌಲರ್ ಹಾಗೂ 4ನೇ ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಶ್ರೀಲಂಕಾದ ಮುತ್ತಯ್ಯ ಮುರಳೀಧರನ್. 133 ಟೆಸ್ಟ್ ಪಂದ್ಯಗಳನ್ನಾಡಿರುವ ಸ್ಪಿನ್ ಮಾಂತ್ರಿಕ ಮುರಳೀಧರನ್ ಒಟ್ಟು 800 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವುದು ಆಸ್ಟ್ರೇಲಿಯಾದ ಸ್ಪಿನ್ ಮೋಡಿಗಾರ ಶೇನ್ ವಾರ್ನ್. 145 ಟೆಸ್ಟ್ ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ವಾರ್ನರ್ ಒಟ್ಟು 708 ವಿಕೆಟ್ ಕಬಳಿಸಿದ್ದಾರೆ.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ 600 ವಿಕೆಟ್ ಪಡೆದ ಮೊದಲ ವೇಗಿ ಎಂಬ ದಾಖಲೆ ಇಂಗ್ಲೆಂಡ್ನ ಜೇಮ್ಸ್ ಅ್ಯಂಡರ್ಸನ್ ಹೆಸರಿನಲ್ಲಿದೆ. 186 ಟೆಸ್ಟ್ ಪಂದ್ಯಗಳಿಂದ ಒಟ್ಟು 698 ವಿಕೆಟ್ ಕಬಳಿಸಿ ಅ್ಯಂಡರ್ಸನ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ಹೊಂದಿರುವ ಅನಿಲ್ ಕುಂಬ್ಳೆ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಕುಂಬ್ಳೆ 132 ಟೆಸ್ಟ್ ಪಂದ್ಯಗಳಿಂದ ಒಟ್ಟು 619 ವಿಕೆಟ್ ಉರುಳಿಸಿ ಈ ಸಾಧನೆ ಮಾಡಿದ್ದಾರೆ.

ಇಂಗ್ಲೆಂಡ್ನ ಮಾಜಿ ವೇಗಿ ಸ್ಟುವರ್ಟ್ ಬ್ರಾಡ್ ಇದೀಗ ಈ ಪಟ್ಟಿಯಲ್ಲಿ ಐದನೇ ಸ್ಥಾನ ಅಲಂಕರಿಸಿದ್ದಾರೆ. 167 ಟೆಸ್ಟ್ ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಬ್ರಾಡ್ ಒಟ್ಟು 604 ವಿಕೆಟ್ ಕಬಳಿಸಿ, ಈ ಸಾಧನೆ ಮಾಡಿದ ವಿಶ್ವ 2ನೇ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

ಇನ್ನು ಆಸ್ಟ್ರೇಲಿಯಾದ ಮಾಜಿ ವೇಗಿ ಗ್ಲೆನ್ ಮೆಕ್ಗ್ರಾಥ್ ಈ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದು, 124 ಟೆಸ್ಟ್ ಪಂದ್ಯಗಳಿಂದ ಒಟ್ಟು 563 ವಿಕೆಟ್ಗಳನ್ನು ಕಬಳಿಸಿದ್ದಾರೆ.

ಇದೀಗ 128ನೇ ಟೆಸ್ಟ್ ಪಂದ್ಯದ ಮೂಲಕ ನಾಥನ್ ಲಿಯಾನ್ 522 ವಿಕೆಟ್ ಕಬಳಿಸಿ ಈ ಪಟ್ಟಿಯಲ್ಲಿ 7ನೇ ಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಸೂಪರ್-7 ಬೌಲರ್ಗಳಲ್ಲಿ ಗುರುತಿಸಿಕೊಂಡಿದ್ದಾರೆ.
