AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nathan Lyon: ಎಲ್ಲರನ್ನು ಹಿಂದಿಕ್ಕಿ ಐತಿಹಾಸಿಕ ದಾಖಲೆ ಬರೆದ ನಾಥನ್ ಲಿಯಾನ್

Nathan Lyon Records: 1996 ರಿಂದ 2008 ರವರೆಗೆ ಆಸ್ಟ್ರೇಲಿಯಾ ವಿರುದ್ಧ 20 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಈ ವೇಳೆ ಎಸೆದ 1086 ಓವರ್​ಗಳಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಒಟ್ಟು 111 ವಿಕೆಟ್​ಗಳನ್ನು ಕಬಳಿಸಿದ್ದರು.

TV9 Web
| Edited By: |

Updated on:Mar 04, 2023 | 6:09 PM

Share
ಇಂದೋರ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ರುವಾರಿ ಆಸೀಸ್ ಸ್ಪಿನ್ನರ್ ನಾಥನ್ ಲಿಯಾನ್. ಏಕೆಂದರೆ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸಿ ಮಿಂಚಿದ್ದ ಲಿಯಾನ್ ದ್ವಿತೀಯ ಇನಿಂಗ್ಸ್​ನಲ್ಲಿ ಭಾರತ ತಂಡದ 8 ಮಂದಿಯನ್ನು ಪೆವಿಲಿಯನ್​ಗಟ್ಟಿದ್ದರು.

1 / 8
ಈ 11 ವಿಕೆಟ್​ಗಳೊಂದಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅತ್ಯಂತ ಯಶಸ್ವಿ ಬೌಲರ್ ಎಂಬ ದಾಖಲೆಯು ನಾಥನ್ ಲಿಯಾನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಹೆಸರಿನಲ್ಲಿತ್ತು.

2 / 8
ಅನಿಲ್ ಕುಂಬ್ಳೆ 1996 ರಿಂದ 2008 ರವರೆಗೆ ಆಸ್ಟ್ರೇಲಿಯಾ ವಿರುದ್ಧ 20 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಈ ವೇಳೆ ಎಸೆದ 1086 ಓವರ್​ಗಳಲ್ಲಿ ಕುಂಬ್ಳೆ ಒಟ್ಟು 111 ವಿಕೆಟ್​ಗಳನ್ನು ಕಬಳಿಸಿದ್ದರು. ಈ ಮೂಲಕ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ದಾಖಲೆ ನಿರ್ಮಿಸಿದ್ದರು.

3 / 8
ಇದೀಗ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 25 ಪಂದ್ಯಗಳಲ್ಲಿ 1164.4 ಓವರ್​ಗಳನ್ನು ಎಸೆದಿರುವ ನಾಥನ್ ಲಿಯಾನ್ ಒಟ್ಟು 113 ವಿಕೆಟ್​ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಅನಿಲ್ ಕುಂಬ್ಳೆ ಹೆಸರಿನಲ್ಲಿದ್ದ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ್ದಾರೆ.

4 / 8
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ರವಿಚಂದ್ರನ್ ಅಶ್ವಿನ್. ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯಲ್ಲಿ ಒಟ್ಟು 1122.3 ಓವರ್​ಗಳನ್ನು ಎಸೆದಿರುವ ಅಶ್ವಿನ್ 107 ವಿಕೆಟ್ ಉರುಳಿಸಿದ್ದಾರೆ. ಇದೀಗ ಅಗ್ರಸ್ಥಾನದಲ್ಲಿರುವ ಲಿಯಾನ್ ದಾಖಲೆ ಮುರಿಯಲು ಅಶ್ವಿನ್​​ಗೆ ಕೇವಲ 7 ವಿಕೆಟ್​ಗಳ ಅವಶ್ಯಕತೆಯಿದೆ.

5 / 8
ಇಲ್ಲಿ ಮತ್ತೊಂದು ವಿಶೇಷತೆ ಎಂದರೆ ಅನಿಲ್ ಕುಂಬ್ಳೆ, ನಾಥನ್ ಲಿಯಾನ್ ಹಾಗೂ ಅಶ್ವಿನ್ ಅವರನ್ನು ಹೊರತುಪಡಿಸಿದರೆ, ಯಾವುದೇ ಬೌಲರ್ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯಲ್ಲಿ 100 ಅಥವಾ ನೂರಕ್ಕಿಂತ ಹೆಚ್ಚು ವಿಕೆಟ್ ಪಡೆದಿಲ್ಲ. ಇದೀಗ ಟಾಪ್-3 ನಲ್ಲಿರುವ ನಾಥನ್ ಲಿಯಾನ್ ಹಾಗೂ ಅಶ್ವಿನ್ ನಡುವೆ ಅಗ್ರಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿರುವುದು ವಿಶೇಷ.

6 / 8
ಇನ್ನು ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ 4ನೇ ಸ್ಥಾನದಲ್ಲಿದ್ದು, ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 18 ಪಂದ್ಯಗಳಿಂದ ಒಟ್ಟು 95 ವಿಕೆಟ್​ಗಳನ್ನು ಕಬಳಿಸಿದ್ದಾರೆ.

7 / 8
ಹಾಗೆಯೇ ಐದನೇ ಸ್ಥಾನದಲ್ಲಿರುವ ಭಾರತ ತಂಡದ ಆಲ್​ರೌಂಡರ್ ರವೀಂದ್ರ ಜಡೇಜಾ 15 ಪಂದ್ಯಗಳಿಂದ ಒಟ್ಟು 84 ವಿಕೆಟ್​ಗಳನ್ನು ಪಡೆದಿದ್ದಾರೆ.

8 / 8

Published On - 6:09 pm, Sat, 4 March 23

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು