34085 ಎಸೆತಗಳಲ್ಲಿ ಹೊಸ ಮೈಲುಗಲ್ಲು ದಾಟಿದ ನಾಥನ್ ಲಿಯಾನ್
Nathan Lyon Record: ಟೆಸ್ಟ್ ಕ್ರಿಕೆಟ್ನಲ್ಲಿ ಈವರೆಗೆ 253 ಇನಿಂಗ್ಸ್ ಆಡಿರುವ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ 34085* ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 24 ಬಾರಿ 5 ವಿಕೆಟ್ ಪಡೆದರೆ, 25 ಬಾರಿ 4 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಒಟ್ಟು 552* ವಿಕೆಟ್ ಉರುಳಿಸಿ ಟೆಸ್ಟ್ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಏಳನೇ ಬೌಲರ್ ಎನಿಸಿಕೊಂಡಿದ್ದಾರೆ.
Updated on: Feb 09, 2025 | 9:04 AM

ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ 6* ವಿಕೆಟ್ ಕಬಳಿಸಿದ್ದಾರೆ. ಗಾಲೆ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಜರುಗುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 3 ವಿಕೆಟ್ ಪಡೆದಿದ್ದ ಲಿಯಾನ್ ಇದೀಗ ದ್ವಿತೀಯ ಇನಿಂಗ್ಸ್ನಲ್ಲೂ ಮೂರು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಆರು ವಿಕೆಟ್ಗಳೊಂದಿಗೆ ಲಿಯಾನ್ ಟೆಸ್ಟ್ ಕ್ರಿಕೆಟ್ನಲ್ಲಿ 550 ವಿಕೆಟ್ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ ಮೂರನೇ ಹಾಗೂ ವಿಶ್ವದ 7ನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಸ್ಟ್ರೇಲಿಯಾ ಪರ ಇದಕ್ಕೂ ಮುನ್ನ ಶೇನ್ ವಾರ್ನ್ ಹಾಗೂ ಗ್ಲೆನ್ ಮೆಕ್ಗ್ರಾಥ್ ಮಾತ್ರ ಈ ಸಾಧನೆ ಮಾಡಿದ್ದರು.

ವಿಶೇಷ ಎಂದರೆ ನಾಥನ್ ಲಿಯಾನ್ ತಮ್ಮ ಟೆಸ್ಟ್ ಕೆರಿಯರ್ನ ಮೊದಲ ವಿಕೆಟ್ ಅನ್ನು ಶ್ರೀಲಂಕಾದ ಗಾಲೆ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲೇ ಪಡೆದಿದ್ದರು. ಇದೀಗ ಇದೇ ಮೈದಾನದಲ್ಲಿ 550ನೇ ವಿಕೆಟ್ ಕಬಳಿಸಿ ವಿಶೇಷ ಮೈಲುಗಲ್ಲನ್ನು ದಾಟಿದ್ದಾರೆ. ಈ ಮೂಲಕ ಟೆಸ್ಟ್ನಲ್ಲಿ 550+ ವಿಕೆಟ್ ಪಡೆದ ವಿಶ್ವದ 4ನೇ ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈವರೆಗೆ 136* ಟೆಸ್ಟ್ ಪಂದ್ಯಗಳನ್ನಾಡಿರುವ ನಾಥನ್ ಲಿಯಾನ್ 253 ಇನಿಂಗ್ಸ್ಗಳಲ್ಲಿ 5680.5 ಓವರ್ಗಳನ್ನು ಎಸೆದಿದ್ದಾರೆ. ಈ ವೇಳೆ ಒಟ್ಟು 552* ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ವಿಕೆಟ್ ಸರದಾರರ ಪಟ್ಟಿಯಲ್ಲಿ ಸದ್ಯ 7ನೇ ಸ್ಥಾನಕ್ಕೇರಿದ್ದಾರೆ.

ಇನ್ನು ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವ ದಾಖಲೆ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. 133 ಟೆಸ್ಟ್ ಪಂದ್ಯಗಳ 230 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ಮುರಳೀಧರನ್ 7339.5 ಓವರ್ಗಳಲ್ಲಿ ಒಟ್ಟು 800 ವಿಕೆಟ್ ಕಬಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
























