Nathan Lyon: ಸ್ಪಿನ್ ದಿಗ್ಗಜರ ವಿಶ್ವ ದಾಖಲೆ ಸರಿಗಟ್ಟಿದ ನಾಥನ್ ಲಿಯಾನ್

| Updated By: ಝಾಹಿರ್ ಯೂಸುಫ್

Updated on: Mar 04, 2024 | 9:30 AM

Nathan Lyon Records: ಟೆಸ್ಟ್ ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಲೆಜೆಂಡ್ ಸ್ಪಿನ್ನರ್​ಗಳಾದ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹಾಗೂ ಆಸ್ಟ್ರೇಲಿಯಾದ ಶೇನ್ ವಾರ್ನ್ ಅವರ ವಿಶ್ವ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

1 / 6
ವೆಲ್ಲಿಂಗ್ಟನ್​ನಲ್ಲಿ ನಡೆದ ಆತಿಥೇಯ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ (Nathan Lyon) ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದ್ದ ಲಿಯಾನ್, ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಉರುಳಿಸಿದ್ದರು. ಈ ಮೂಲಕ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡರು.

2 / 6
ಈ ದಾಖಲೆಗಳ ಮೂಲಕ ಸ್ಪಿನ್ ದಿಗ್ಗಜರಾದ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹಾಗೂ ಆಸ್ಟ್ರೇಲಿಯಾದ ಶೇನ್ ವಾರ್ನ್ ಅವರ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಕೂಡ ಸರಿಗಟ್ಟಿದರು. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

3 / 6
ಟೆಸ್ಟ್ ಕ್ರಿಕೆಟ್​ ಆಡುವ 9 ದೇಶಗಳಲ್ಲಿ 5 ವಿಕೆಟ್ ಕಬಳಿಸಿದ ವಿಶೇಷ ವಿಶ್ವ ದಾಕಲೆಯನ್ನು ನಾಥನ್ ಲಿಯಾನ್ ನಿರ್ಮಿಸಿದ್ದಾರೆ. ಲಿಯಾನ್ ಆಸ್ಟ್ರೇಲಿಯಾ, ಭಾರತ, ಶ್ರೀಲಂಕಾ, ಇಂಗ್ಲೆಂಡ್, ಬಾಂಗ್ಲಾದೇಶ್, ಪಾಕಿಸ್ತಾನ್, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ನ್ಯೂಝಿಲೆಂಡ್​ನಲ್ಲಿ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

4 / 6
ಇದಕ್ಕೂ ಮುನ್ನ ಟೆಸ್ಟ್ ಕ್ರಿಕೆಟ್​ನಲ್ಲಿ ಇಂತಹದೊಂದು ಸಾಧನೆ ಮಾಡಿದ್ದು ಸ್ಪಿನ್ ದಿಗ್ಗಜರಾದ ಶೇನ್ ವಾರ್ನ್ ಹಾಗೂ ಮುತ್ತಯ್ಯ ಮುರಳೀಧರನ್. ಈ ಇಬ್ಬರು ಸ್ಪಿನ್ ಮಾಂತ್ರಿಕರು ಆಸ್ಟ್ರೇಲಿಯಾ, ಭಾರತ, ಶ್ರೀಲಂಕಾ, ಇಂಗ್ಲೆಂಡ್, ಬಾಂಗ್ಲಾದೇಶ್, ಪಾಕಿಸ್ತಾನ್, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ನ್ಯೂಝಿಲೆಂಡ್​ನಲ್ಲಿ 5 ವಿಕೆಟ್​ಗಳ ಸಾಧನೆ ಮಾಡಿ ವಿಶ್ವ ದಾಖಲೆ ಬರೆದಿದ್ದರು.

5 / 6
ಇದೀಗ ನ್ಯೂಝಿಲೆಂಡ್ ವಿರುದ್ಧ ವೆಲ್ಲಿಂಗ್ಟನ್​ನಲ್ಲಿ 6 ವಿಕೆಟ್ ಕಬಳಿಸುವ ಮೂಲಕ ನಾಥನ್ ಲಿಯಾನ್ ಈ ಸಾಧನೆ ಮಾಡಿದ ವಿಶ್ವದ 3ನೇ ಬೌಲರ್ ಎನಿಸಿಕೊಂಡಿದ್ದಾರೆ. ಈ ಮೂಲಕ ಸ್ಪಿನ್ ದಿಗ್ಗಜರ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

6 / 6
ಇದಲ್ಲದೆ ಈ ಪಂದ್ಯದಲ್ಲಿ 10 ವಿಕೆಟ್ ಪಡೆಯುವುದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ನಾಥನ್ ಲಿಯಾನ್ 7ನೇ ಸ್ಥಾನಕ್ಕೇರಿದ್ದಾರೆ. 128 ಟೆಸ್ಟ್ ಪಂದ್ಯಗಳನ್ನಾಡಿರುವ ಲಿಯಾನ್ ಇದುವರೆಗೆ 527 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

Published On - 9:29 am, Mon, 4 March 24