AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nathan Lyon: ಬ್ಯಾಟಿಂಗ್​ನಲ್ಲಿ ವಿಶ್ವ ದಾಖಲೆ ಬರೆದ ನಾಥನ್ ಲಿಯಾನ್

Nathan Lyon: ನ್ಯೂಝಿಲೆಂಡ್ ವಿರುದ್ಧದ ಪಂದ್ಯದ ಮೂಲಕ ಆಸ್ಟ್ರೇಲಿಯಾ ಆಟಗಾರ ನಾಥನ್ ಲಿಯಾನ್ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ 46 ರನ್ ಬಾರಿಸುವ ಮೂಲಕ ಲಿಯಾನ್ ಟೆಸ್ಟ್ ಕ್ರಿಕೆಟ್​ನಲ್ಲಿ 1500 ರನ್ ಪೂರೈಸಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಯಾರೂ ಬರೆಯದ ಹೊಸ ವಿಶ್ವ ದಾಖಲೆ ನಾಥನ್ ಲಿಯಾನ್ ಪಾಲಾಯಿತು.

TV9 Web
| Edited By: |

Updated on: Mar 03, 2024 | 12:53 PM

Share
ವೆಲ್ಲಿಂಗ್ಟನ್​ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದ ಮೂಲಕ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ (Nathan Lyon) ವಿಶೇಷ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಬ್ಯಾಟಿಂಗ್ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಲಿಯಾನ್ ಒಟ್ಟು 46 ರನ್ ಬಾರಿಸಿ ಮಿಂಚಿದ್ದರು.

1 / 5
ಈ 46 ರನ್​ಗಳೊಂದಿಗೆ ನಾಥನ್ ಲಿಯಾನ್ ಟೆಸ್ಟ್ ಕ್ರಿಕೆಟ್​ನಲ್ಲಿ 1501 ರನ್ ಕಲೆಹಾಕಿದ್ದಾರೆ. ಇದರೊಂದಿಗೆ ಟೆಸ್ಟ್ ಇತಿಹಾಸದಲ್ಲೇ ಅರ್ಧಶತಕ ಬಾರಿಸದೇ 1500+ ರನ್ ಕಲೆಹಾಕಿದ ವಿಶ್ವದ ಮೊದಲ ಆಟಗಾರ ಎಂಬ ವಿಶ್ವ ದಾಖಲೆ ಲಿಯಾನ್ ಪಾಲಾಗಿದೆ.

2 / 5
ಆಸ್ಟ್ರೇಲಿಯಾ ಪರ 162 ಟೆಸ್ಟ್ ಇನಿಂಗ್ಸ್ ಆಡಿರುವ ನಾಥನ್ ಲಿಯಾನ್ ಒಂದೇ ಒಂದು ಅರ್ಧಶತಕ ಬಾರಿಸಿಲ್ಲ. ಇನಿಂಗ್ಸ್​ವೊಂದರಲ್ಲಿ 47 ರನ್ ಬಾರಿಸಿದ್ದು ಅವರ ಗರಿಸ್ಠ ಟೆಸ್ಟ್ ಸ್ಕೋರ್. ಇದಾಗ್ಯೂ ಅವರು 1501 ರನ್ ಕಲೆಹಾಕಿದ್ದಾರೆ. ಇದೀಗ ಇದುವೇ ವಿಶ್ವ ದಾಖಲೆಯಾಗಿರುವುದು ವಿಶೇಷ.

3 / 5
ಟೆಸ್ಟ್ ಕ್ರಿಕೆಟ್​ನಲ್ಲಿ ನಾಥನ್ ಲಿಯಾನ್ ಅಲ್ಲದೆ, ವೆಸ್ಟ್ ಇಂಡೀಸ್​ನ ಕೆಮರ್ ರೋಚ್ (1174) ಮತ್ತು ಪಾಕಿಸ್ತಾನದ ವಾಖರ್ ಯೂನಿಸ್ (1010) ಮಾತ್ರ ಟೆಸ್ಟ್ ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸದೇ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ.

4 / 5
ಈಗಾಗಲೇ ತಮ್ಮ ಸ್ಪಿನ್ ಬೌಲಿಂಗ್ ಮೂಲಕ ಹಲವು ದಾಖಲೆ ಬರೆದಿರುವ ಲಿಯಾನ್ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವದ 7ನೇ ಬೌಲರ್ ಎನಿಸಿಕೊಂಡಿದ್ದಾರೆ. ಇದೀಗ ಅರ್ಧಶತಕವಿಲ್ಲದೇ 1500 ರನ್ ಕಲೆಹಾಕುವ ಮೂಲಕ ನಾಥನ್ ಲಿಯಾನ್ ಬ್ಯಾಟಿಂಗ್​ನಲ್ಲೂ ವಿಶ್ವ ದಾಖಲೆ ನಿರ್ಮಿಸಿರುವುದು ವಿಶೇಷ.

5 / 5
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ

3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ

ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?

ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು

ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್

ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,

ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?

ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?

ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ