- Kannada News Photo gallery Cricket photos ND vs ENG england spinner tom hartley creat unique record against india
IND vs ENG: ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಐತಿಹಾಸಿಕ ಸಾಧನೆ ಮಾಡಿದ ಟಾಮ್ ಹಾರ್ಟ್ಲಿ
IND vs ENG: ತಂಡದ ಪರ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಿದ ಸ್ಪಿನ್ನರ್ ಟಾಮ್ ಹಾರ್ಟ್ಲಿ ಎರಡನೇ ಇನ್ನಿಂಗ್ಸ್ನಲ್ಲಿ ಬರೋಬ್ಬರಿ 7 ವಿಕೆಟ್ಗಳನ್ನು ಕಬಳಿಸುವ ಮೂಲಕ ಭಾರತ ತಂಡದ ಸೋಲಿಸಿಗೆ ಪ್ರಮುಖ ಕಾರಣಿಕರ್ತರಾದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ದಾಖಲೆಯನ್ನು ನಿರ್ಮಿಸಿದರು.
Updated on: Jan 28, 2024 | 8:47 PM

ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 28 ರನ್ಗಳಿಂದ ಭಾರತವನ್ನು ಸೋಲಿಸಿ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಒಂದೆಡೆ ಟೀಂ ಇಂಡಿಯಾದ ಕಳಪೆ ಬ್ಯಾಟಿಂಗ್ ಕಂಡುಬಂದರೆ, ಮತ್ತೊಂದೆಡೆ ಇಂಗ್ಲೆಂಡ್ನ ಅದ್ಭುತ ಬೌಲಿಂಗ್ ಪ್ರದರ್ಶನ ಕಂಡು ಬಂದಿತು.

ಅದರಲ್ಲೂ ತಂಡದ ಪರ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಿದ ಸ್ಪಿನ್ನರ್ ಟಾಮ್ ಹಾರ್ಟ್ಲಿ ಎರಡನೇ ಇನ್ನಿಂಗ್ಸ್ನಲ್ಲಿ ಬರೋಬ್ಬರಿ 7 ವಿಕೆಟ್ಗಳನ್ನು ಕಬಳಿಸುವ ಮೂಲಕ ಭಾರತ ತಂಡದ ಸೋಲಿಸಿಗೆ ಪ್ರಮುಖ ಕಾರಣಿಕರ್ತರಾದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ದಾಖಲೆಯನ್ನು ನಿರ್ಮಿಸಿದರು.

ಭಾರತ ವಿರುದ್ಧದ ಎರಡನೇ ಇನ್ನಿಂಗ್ಸ್ನಲ್ಲಿ 7 ವಿಕೆಟ್ ಪಡೆದ ಟಾಮ್ ಹಾರ್ಟ್ಲಿ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಇನ್ನಿಂಗ್ಸ್ವೊಂದರಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಎರಡನೇ ಇಂಗ್ಲೆಂಡ್ ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

1945 ರ ನಂತರ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಈ ಸಾಧನೆ ಮಾಡಿದ ಇಂಗ್ಲೆಂಡ್ ತಂಡದ ಎರಡನೇ ಸ್ಪಿನ್ನರ್ ಆಗಿದ್ದು, ಚೊಚ್ಚಲ ಟೆಸ್ಟ್ನಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಇಂಗ್ಲೆಂಡ್ನ ಐದನೇ ಬೌಲರ್ ಎನಿಸಿಕೊಂಡಿದ್ದಾರೆ.

ಟಾಮ್ ಹಾರ್ಟ್ಲಿ ಎರಡನೇ ಇನಿಂಗ್ಸ್ನಲ್ಲಿ 26.2 ಓವರ್ ಬೌಲ್ ಮಾಡಿ 62 ರನ್ ನೀಡಿ 7 ವಿಕೆಟ್ ಪಡೆದರು. ಹಾರ್ಟ್ಲಿ ಮ್ಯಾಜಿಕ್ಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಅಕ್ಷರ್ ಪಟೇಲ್, ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್ ಮತ್ತು ಮೊಹಮ್ಮದ್ ಸಿರಾಜ್ ಬಲಿಯಾದರು.

ಟಾಮ್ ಹಾರ್ಟ್ಲಿಗೂ ಮೊದಲು, ಇಂಗ್ಲೆಂಡ್ ತಂಡದ ಸ್ಪಿನ್ನರ್ ರಾಬರ್ಟ್ ಬೆರ್ರಿ 1950 ರಲ್ಲಿ ಮ್ಯಾಂಚೆಸ್ಟರ್ ಟೆಸ್ಟ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 116 ರನ್ ನೀಡಿ 9 ವಿಕೆಟ್ ಪಡೆದಿದ್ದು, ಇದುವರೆಗಿನ ದಾಖಲೆಯಾಗಿದೆ.

ಮೊದಲ ಇನಿಂಗ್ಸ್ನಲ್ಲಿ ಹಾರ್ಟ್ಲಿ ಒಟ್ಟು 25 ಓವರ್ ಬೌಲ್ ಮಾಡಿ ಬರೋಬ್ಬರಿ 131 ರನ್ ಬಿಟ್ಟುಕೊಟ್ಟು 2 ವಿಕೆಟ್ ಪಡೆದರು. ಈ ಮೂಲಕ ಅವರು ತಮ್ಮ ಚೊಚ್ಚಲ ಟೆಸ್ಟ್ನಲ್ಲಿ ಒಟ್ಟು 9 ವಿಕೆಟ್ಗಳನ್ನು ಪಡೆದರು. ಈ ಮೂಲಕ ತಮ್ಮ ಚೊಚ್ಚಲ ಟೆಸ್ಟ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ವಿಶ್ವದ 19ನೇ ಬೌಲರ್ ಎನಿಸಿಕೊಂಡಿದ್ದಾರೆ.




