AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಚೇಸಿಂಗ್… ವಿಶ್ವಕಪ್​​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ನೇಪಾಳ

England vs Nepal: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​​ನ 5ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 184 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ನೇಪಾಳ ತಂಡವು 20 ಓವರ್​​ಗಳಲ್ಲಿ 180 ರನ್​​ಗಳಿಸಿ ವಿರೋಚಿತವಾಗಿ ಸೋಲೊಪ್ಪಿಕೊಂಡಿದೆ.ಈ ವಿರೋಚಿತ ಸೋಲಿನೊಂದಿಗೆ ನೇಪಾಳ ಪಡೆ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: Feb 09, 2026 | 7:55 AM

Share
ಟಿ20 ವಿಶ್ವಕಪ್​​ನಲ್ಲಿ ನೇಪಾಳ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಇಂಗ್ಲೆಂಡ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​​ನ 5ನೇ ಮ್ಯಾಚ್​​ನಲ್ಲಿ ನೇಪಾಳ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡದ ಪರ ಜೇಕಬ್ ಬೆಥೆಲ್ (55) ಹಾಗೂ ಹ್ಯಾರಿ ಬ್ರೂಕ್ (53) ಅರ್ಧಶತಕ ಬಾರಿಸಿದ್ದರು. ಈ ಹಾಫ್ ಸೆಂಚುರಿಗಳ ನೆರವಿನೊಂದಿಗೆ ಇಂಗ್ಲೆಂಡ್ ತಂಡ 20 ಓವರ್​​​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 184 ರನ್​​ಗಳು.

2 / 5
ಈ ಗುರಿಯನ್ನು ಬೆನ್ನತ್ತಿದ ನೇಪಾಳ ತಂಡವು ಭರ್ಒರಿ ಬ್ಯಾಟಿಂಗ್ ಪ್ರದರ್ಶಿಸಿತು. ಮೊದಲ 10 ಓವರ್​​​ಗಳಲ್ಲಿ 85 ರನ್ ಬಾರಿಸಿದ್ದ ನೇಪಾಳ ತಂಡವು ದ್ವಿತೀಯಾರ್ಧದಲ್ಲಿ ಬರೋಬ್ಬರಿ 95 ರನ್​ ಕಲೆಹಾಕಿದ್ದರು. ಈ ಮೂಲಕ 20 ಓವರ್​​​ಗಳಲ್ಲಿ 180 ರನ್​ಗಳಿಸಿ 4 ರನ್​​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು.

3 / 5
ಈ ಸೋಲಿನ ಹೊರತಾಗಿಯೂ ನೇಪಾಳ ತಂಡದ ಹೆಸರಿಗೆ ಹೊಸ ವಿಶ್ವ ದಾಖಲೆಯೊಂದು ಸೇರ್ಪಡೆಯಾಗಿದೆ. ಅದೇನೆಂದರೆ ಐಸಿಸಿ ಪೂರ್ಣ ಸದಸ್ಯ ರಾಷ್ಟ್ರದ ವಿರುದ್ಧ ಟಿ20 ವಿಶ್ವಕಪ್​​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಅಸೋಸಿಯೇಟ್ ತಂಡವೆಂಬ ಹೆಗ್ಗಳಿಕೆಯನ್ನು ನೇಪಾಳ ತಂಡ ತಮ್ಮದಾಗಿಸಿಕೊಂಡಿದೆ.

4 / 5
ಇದಕ್ಕೂ ಮುನ್ನ ಇಂತಹದೊಂದು ಸಾಧನೆ ಮಾಡಿದ್ದು ಸ್ಕಾಟ್ಲೆಂಡ್. 2024ರ ಟಿ20 ವಿಶ್ವಕಪ್​​​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 20 ಓವರ್​ಗಳಲ್ಲಿ 180 ರನ್ ಕಲೆಹಾಕಿದ್ದರು. ಇದೀಗ ನೇಪಾಳ ತಂಡವು ಇಂಗ್ಲೆಂಡ್ ವಿರುದ್ಧ ಚೇಸಿಂಗ್​ ವೇಳೆ 180 ರನ್​ಗಳಿಸಿ ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಟಿ20 ಕ್ರಿಕೆಟ್​​ನಲ್ಲಿ ಐಸಿಸಿ ಪೂರ್ಣ ಸದಸ್ಯ ತಂಡದ ವಿರುದ್ಧ ಚೇಸಿಂಗ್ ವೇಳೆ ಅತೀ ಹೆಚ್ಚು ರನ್ ಬಾರಿಸಿದ ತಂಡ ಎಂಬ ವಿಶ್ವ ದಾಖಲೆಯನ್ನು ನೇಪಾಳ ತಂಡ ತಮ್ಮದಾಗಿಸಿಕೊಂಡಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?

ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು

ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ

ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ

ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ

ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ