AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವಿಶ್ವ ದಾಖಲೆ… ಒಂದೇ ದಿನ 6 ಭರ್ಜರಿ ಸೆಂಚುರೀಸ್!

ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಾಣದ ಹೊಸ ದಾಖಲೆಯೊಂದು ನಿರ್ಮಾಣವಾಗಿದೆ. ಮೂರು ಬೇರೆ ಬೇರೆ ಖಂಡಗಳಲ್ಲಿ ನಡೆದ ಪಂದ್ಯಗಳಲ್ಲಿ ಬ್ಯಾಟರ್‌ಗಳು ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ್ದು, ಒಂದೇ ದಿನ ಬರೋಬ್ಬರಿ ಆರು ಭರ್ಜರಿ ಶತಕಗಳು ಮೂಡಿಬಂದಿವೆ. ಈ ಮೂಲಕ ಆರು ಬ್ಯಾಟರ್​ಗಳು ಜೊತೆಗೂಡಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 28, 2026 | 2:54 PM

Share
ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಹೊಚ್ಚ ಹೊಸ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ಬರೆದಿರುವುದು ಆರು ಬ್ಯಾಟರ್​ಗಳು. ಅದು ಸಹ ಒಂದೇ ದಿನ ಸೆಂಚುರಿ ಸಿಡಿಸುವ ಮೂಲಕ. ಅಂದರೆ ಏಕದಿನ ಕ್ರಿಕೆಟ್‌ನ ಸುದೀರ್ಘ ಇತಿಹಾಸದಲ್ಲಿ ಒಂದೇ ದಿನ ಇಷ್ಟು ದೊಡ್ಡ ಸಂಖ್ಯೆಯ ಶತಕಗಳು ಎಂದಿಗೂ ಮೂಡಿಬಂದಿರಲಿಲ್ಲ. ಇದೀಗ ಭಾರತ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ತಂಡದ ದಾಂಡಿಗರು ಸೆಂಚುರಿ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹೀಗೆ ಸೆಪ್ಟೆಂಬರ್ 27 ರಂದು ಶತಕ ಸಿಡಿಸಿ ಹೊಸ ದಾಖಲೆ ಬರೆದ ಆರು ಬ್ಯಾಟರ್‌ಗಳ ವಿವರ ಇಲ್ಲಿದೆ...  (PC: Getty Images)

Miller Tom Virat

1 / 7
ವಿರಾಟ್ ಕೊಹ್ಲಿ (ಭಾರತ): ತಿರುವನಂತಪುರದ ಗ್ರೀನ್​ ಫೀಲ್ಡ್​ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 139 ರನ್ ಬಾರಿಸಿದ್ದಾರೆ. ಈ ಭರ್ಜರಿ ಇನ್ನಿಂಗ್ಸ್ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ 15,000 ರನ್ ಪೂರೈಸಿದ ದಾಖಲೆಯನ್ನು ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. (PC: Getty Images)

2 / 7
ಡೇವಿಡ್ ಮಿಲ್ಲರ್ (ಸೌತ್ ಆಫ್ರಿಕಾ): ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಸ್ಡೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೇವಲ 76 ಎಸೆತಗಳಲ್ಲಿ ಡೇವಿಡ್​ ಮಿಲ್ಲರ್ 142 ರನ್ ಚಚ್ಚಿ ಅಬ್ಬರಿಸಿದ್ದಾರೆ. ಈ ಮೂಲಕ ಸೌತ್ ಆಫ್ರಿಕಾ ತಂಡದ ಗೆಲುವಿನಲ್ಲಿ ಮಿಲ್ಲರ್ ಪ್ರಮುಖ ಪಾತ್ರವಹಿಸಿದ್ದಾರೆ. (PC: Getty Images)

3 / 7
ಟಾಮ್ ಬ್ಯಾಂಟನ್ (ಇಂಗ್ಲೆಂಡ್): ಶ್ರೀಲಂಕಾ ವಿರುದ್ಧ ಲಂಡನ್‌ನ ದಿ ಓವಲ್ ಮೈದಾನದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ದಾಂಡಿಗ ಟಾಮ್ ಬ್ಯಾಂಟನ್ 126 ರನ್ ಬಾರಿಸಿದ್ದಾರೆ. ಇದು ಬ್ಯಾಂಟನ್ ಅವರ ಚೊಚ್ಚಲ ಏಕದಿನ ಶತಕ ಎಂಬುದು ವಿಶೇಷ. (PC: Getty Images)

4 / 7
ಶುಭ್​​ಮನ್ ಗಿಲ್ (ಭಾರತ): ತಿರುವನಂತಪುರದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ 110 ರನ್​ಗಳ ಅಮೋಘ ಇನಿಂಗ್ಸ್ ಆಡಿದ್ದಾರೆ. (PC: Getty Images)

5 / 7
ತೆಂಬಾ ಬವುಮಾ (ಸೌತ್ ಆಫ್ರಿಕಾ): ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಸೌತ್ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ 103 ರನ್​ಗಳನ್ನು ಬಾರಿಸಿ ಮಿಂಚಿದ್ದಾರೆ. (PC: Getty Images)

6 / 7
ಜಸ್ಟಿನ್ ಗ್ರೀವ್ಸ್ (ವೆಸ್ಟ್ ಇಂಡೀಸ್): ತಿರುವನಂತಪುರದಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಜಸ್ಟಿನ್ ಗ್ರೀವ್ಸ್ 101 ರನ್​ಗಳ ಭರ್ಜರಿ ಸೆಂಚುರಿ ಬಾರಿಸಿದ್ದಾರೆ.  ಗ್ರೀವ್ಸ್ ಅವರ ಈ ಶತಕದ ನೆರವಿನಿಂದ ವಿಂಡೀಸ್ ತಂಡವು ಈ ಪಂದ್ಯದಲ್ಲಿ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ಸಾಧ್ಯವಾಯಿತು. (PC: Getty Images)

7 / 7
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ

‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ

ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ

ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ

ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!

'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ

ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ

ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!

ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ