Team India: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

Team India: ಇದೀಗ ಶ್ರೀಲಂಕಾ ವಿರುದ್ಧ 317 ರನ್​ಗಳ ಅಮೋಘ ಗೆಲುವು ದಾಖಲಿಸಿ, ಟೀಮ್ ಇಂಡಿಯಾ ಈ ಎಲ್ಲಾ ದಾಖಲೆಗಳನ್ನು ಅಳಿಸಿ ಹಾಕಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Jan 15, 2023 | 9:33 PM

ತಿರುವನಂತಪುರದ ಗ್ರೀನ್ ಫೀಲ್ಡ್​ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 317 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ರನ್​ಗಳ ಅಂತರದಿಂದ ಗೆದ್ದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ.

1 / 6
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ನ್ಯೂಜಿಲೆಂಡ್ ತಂಡದ ಹೆಸರಿನಲ್ಲಿತ್ತು. 2008 ರಲ್ಲಿ ನ್ಯೂಜಿಲೆಂಡ್ ತಂಡವು ಐರ್ಲೆಂಡ್ ವಿರುದ್ಧ 290 ರನ್​ಗಳಿಂದ ಭರ್ಜರಿ ಜಯ ಸಾಧಿಸಿ ವಿಶ್ವ ದಾಖಲೆ ನಿರ್ಮಿಸಿತ್ತು. ಇದಾದ ಬಳಿಕ 2015 ರಲ್ಲಿ ಆಸ್ಟ್ರೇಲಿಯಾ ತಂಡವು ಅಫ್ಘಾನಿಸ್ತಾನ್ ವಿರುದ್ಧ 275 ರನ್​ಗಳ ಅಮೋಘ ಗೆಲುವು ದಾಖಲಿಸಿತ್ತು.

2 / 6
ಇದಾದ ಬಳಿಕ 2015 ರಲ್ಲಿ ಆಸ್ಟ್ರೇಲಿಯಾ ತಂಡವು ಅಫ್ಘಾನಿಸ್ತಾನ್ ವಿರುದ್ಧ 275 ರನ್​ಗಳ ಅಮೋಘ ಗೆಲುವು ದಾಖಲಿಸಿತ್ತು.

3 / 6
ಇನ್ನು 2010 ರಲ್ಲಿ ಜಿಂಬಾಬ್ವೆ ವಿರುದ್ಧ 272 ರನ್​ಗಳ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡ ಕೂಡ ಭಾರೀ ಅಂತರದ ಗೆಲುವಿನ ದಾಖಲೆ ಪಟ್ಟಿಯಲ್ಲಿದೆ.

4 / 6
ಇನ್ನು 2007 ರಲ್ಲಿ ಟೀಮ್ ಇಂಡಿಯಾ ಬರ್ಮುಡಾ ತಂಡವನ್ನು 257 ರನ್​ಗಳಿಂದ ಸೋಲಿಸಿದ್ದು ಇದುವರೆಗಿನ ಶ್ರೇಷ್ಠ ಏಕದಿನ ಗೆಲುವಾಗಿತ್ತು.

5 / 6
ಇದೀಗ ಶ್ರೀಲಂಕಾ ವಿರುದ್ಧ 317 ರನ್​ಗಳ ಅಮೋಘ ಗೆಲುವು ದಾಖಲಿಸಿ, ಟೀಮ್ ಇಂಡಿಯಾ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಅಳಿಸಿ ಹಾಕಿದೆ. ಈ ಮೂಲಕ ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ 300 ಕ್ಕೂ ಅಧಿಕ ರನ್​ಗಳ ಅಂತರದಿಂದ ಗೆದ್ದ ಮೊದಲ ತಂಡವೆಂಬ ಐತಿಹಾಸಿಕ ದಾಖಲೆ ಬರೆದಿದೆ.

6 / 6

Published On - 9:23 pm, Sun, 15 January 23

Follow us