IND vs NZ: 15 ದಿನಗಳ ಅಂತರದಲ್ಲಿ ಕಿವೀಸ್ ವಿರುದ್ಧ ಟೀಂ ಇಂಡಿಯಾಗೆ 2ನೇ ಸೋಲು

|

Updated on: Oct 20, 2024 | 6:01 PM

IND vs NZ: ನ್ಯೂಜಿಲೆಂಡ್ ವಿರುದ್ಧದ ಈ ಎರಡು ಸೋಲುಗಳಲ್ಲಿ ಮೊದಲ ಸೋಲು ಟೀಂ ಇಂಡಿಯಾವನ್ನು ಟಿ20 ವಿಶ್ವಕಪ್​ನಿಂದಲೇ ಹೊರಹಾಕಿದರೆ, ಎರಡನೇ ಸೋಲು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ ರೇಸ್​ನಲ್ಲಿರುವ ಟೀಂ ಇಂಡಿಯಾವನ್ನು ಸಂಕಷ್ಟಕ್ಕೆ ತಳ್ಳಿದೆ.

1 / 7
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್ ಎಂಟು ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿದೆ. ಈ ಗೆಲುವಿನೊಂದಿಗೆ ಕಿವೀಸ್ ತಂಡ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದರೆ, ಕೇವಲ 15 ದಿನಗಳ ಅಂತರದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಟೀಂ ಇಂಡಿಯಾ ಎರಡನೇ ಬಾರಿಗೆ ಸೋಲಿನ ಶಾಕ್​ಗೆ ಒಳಗಾಗಿದೆ.

2 / 7
ಈ ಎರಡು ಸೋಲುಗಳಲ್ಲಿ ಮೊದಲ ಸೋಲು ಟೀಂ ಇಂಡಿಯಾವನ್ನು ಟಿ20 ವಿಶ್ವಕಪ್​ನಿಂದಲೇ ಹೊರಹಾಕಿದರೆ, ಎರಡನೇ ಸೋಲು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ ರೇಸ್​ನಲ್ಲಿರುವ ಟೀಂ ಇಂಡಿಯಾವನ್ನು ಸಂಕಷ್ಟಕ್ಕೆ ತಳ್ಳಿದೆ. ಈ ಎರಡು ಪಂದ್ಯಗಳ ಸೋಲುಗಳು ಟೀಂ ಇಂಡಿಯಾಕ್ಕೆ ಎಷ್ಟು ದುಬಾರಿಯಾದವು ಎಂಬುದನ್ನು ನೋಡುವುದಾದರೆ..

3 / 7
ವಾಸ್ತವವಾಗಿ ಈ ತಿಂಗಳ ಆರಂಭದಲ್ಲಿ ಅಂದರೆ ಅಕ್ಟೋಬರ್ 4 ರಂದು ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ಮಹಿಳಾ ತಂಡ, ಟೀಂ ಇಂಡಿಯಾವನ್ನು ಸೋಲಿಸಿತ್ತು. ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ ಪಡೆಯನ್ನು 58 ರನ್​ಗಳಿಂದ ಮಣಿಸಿದ್ದ ಕಿವೀಸ್ ಪಡೆ ಇದೀಗ ಫೈನಲ್ ಪ್ರವೇಶಿಸಿದ್ದರೆ, ತನ್ನ ಮೊದಲ ಪಂದ್ಯದ ಸೋಲಿಗೆ ಪ್ರತಿಫಲವಾಗಿ ಟೀಂ ಇಂಡಿಯಾ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸಿತ್ತು.

4 / 7
ಉಭಯ ತಂಡಗಳ ನಡುವೆ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 160 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 102 ರನ್ ಗಳಿಸಲಷ್ಟೇ ಶಕ್ತವಾಗಿ 58 ರನ್ ಗಳಿಂದ ಸೋಲನುಭವಿಸಬೇಕಾಯಿತು. ಈ ಸೋಲಿನಿಂದಾಗಿ ಭಾರತದ ಮಹಿಳಾ ತಂಡ ತನ್ನ ಗುಂಪಿನ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆಯುವ ಮೂಲಕ ಸೆಮಿಫೈನಲ್‌ ರೇಸ್​ನಿಂದ ಹೊರಬಿದ್ದಿತ್ತು.

5 / 7
ಇದೀಗ ನ್ಯೂಜಿಲೆಂಡ್ ಪುರುಷರ ತಂಡ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಸೋಲಿಸಿದೆ. ಕಳೆದ 36 ವರ್ಷಗಳಲ್ಲಿ ಭಾರತದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾದ ಮೊದಲ ಸೋಲು ಇದಾಗಿದೆ. ಅದೇ ಸಮಯದಲ್ಲಿ, ಕಳೆದ 19 ವರ್ಷಗಳಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಸೋಲಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ನ್ಯೂಜಿಲೆಂಡ್ ಪಾತ್ರವಾಗಿದೆ.

6 / 7
ಇನ್ನು ಟೆಸ್ಟ್ ಕ್ರಿಕೆಟ್​ನಲ್ಲಿ ಉಭಯ ತಂಡಗಳ ನಡುವಿನ ಮುಖಾಮುಖಿ ವರದಿಯನ್ನು ನೋಡುವುದಾದರೆ.. ಇದುವರೆಗೆ ಎರಡು ತಂಡಗಳ ನಡುವೆ ಒಟ್ಟು 63 ಟೆಸ್ಟ್ ಪಂದ್ಯಗಳು ನಡೆದಿವೆ. ಇದರಲ್ಲಿ ಟೀಂ ಇಂಡಿಯಾ 22 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ ತಂಡ 14 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಉಳಿದಂತೆ 27 ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ.

7 / 7
ಹಾಗೆಯೇ ಭಾರತದಲ್ಲಿ ಇದುವರೆಗೆ ಉಭಯ ತಂಡಗಳ ನಡುವೆ ಒಟ್ಟು 37 ಟೆಸ್ಟ್ ಪಂದ್ಯಗಳು ನಡೆದಿದ್ದು, ಇದರಲ್ಲಿ ಟೀಂ ಇಂಡಿಯಾ 17 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ ತಂಡವು ಭಾರತ ತಂಡವನ್ನು ಕೇವಲ 3 ಬಾರಿ ಸೋಲಿಸಲು ಶಕ್ತವಾಗಿದೆ. ಉಳಿದ 17 ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ. ಆದರೆ ಕಳೆದ 6 ಪಂದ್ಯಗಳಲ್ಲಿ ಟೀಂ ಇಂಡಿಯಾ 4 ಬಾರಿ ಸೋಲನುಭವಿಸಿದ್ದು, ಕೇವಲ ಒಂದು ಬಾರಿ ಮಾತ್ರ ನ್ಯೂಜಿಲೆಂಡ್ ತಂಡವನ್ನು ಸೋಲಿಸಲು ಶಕ್ತವಾಗಿದೆ. ಇದಲ್ಲದೇ ಒಂದು ಪಂದ್ಯ ಡ್ರಾ ಆಗಿದೆ.