- Kannada News Photo gallery Cricket photos New zealand captain tim southee breaks ms dhoni record to hit most sixes in test cricket
NZ vs ENG: ಕಿವೀಸ್ ನಾಯಕ ಟಿಮ್ ಸೌಥಿ ಅಬ್ಬರಕ್ಕೆ ಧೋನಿ ದಾಖಲೆ ಉಡೀಸ್!
NZ vs ENG: ಟೆಸ್ಟ್ ಕ್ರಿಕೆಟ್‌ನಲ್ಲಿ ಎಂಎಸ್ ಧೋನಿ 144 ಇನ್ನಿಂಗ್ಸ್‌ಗಳಲ್ಲಿ 78 ಸಿಕ್ಸರ್‌ಗಳನ್ನು ಬಾರಿಸಿದರೆ, ಟಿಮ್ ಸೌಥಿ 82 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದರೊಂದಿಗೆ ಸಿಕ್ಸರ್‌ಗಳ ವಿಚಾರದಲ್ಲಿ ಧೋನಿಯನ್ನು ಹಿಂದಿಕ್ಕಿದ್ದಾರೆ.
Updated on:Feb 26, 2023 | 5:46 PM

ಪ್ರಸ್ತುತ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ನಾಯಕ ಟಿಮ್ ಸೌಥಿ ತಮ್ಮ ಇನ್ನಿಂಗ್ಸ್‌ನಲ್ಲಿ ಕೇವಲ 49 ಎಸೆತಗಳಲ್ಲಿ 5 ಬೌಂಡರಿ ಮತ್ತು 6 ಸಿಕ್ಸರ್‌ಗಳ ಸಹಾಯದಿಂದ 73 ರನ್ ಬಾರಿಸಿದ್ದಾರೆ. ಇದರೊಂದಿಗೆ ಹಲವು ದಾಖಲೆಗಳನ್ನು ಬರೆದಿದ್ದಾರೆ.

ಈ ಪಂದ್ಯದಲ್ಲಿ ಸಿಕ್ಸರ್‌ಗಳ ಸುರಿಮಳೆಗೈದ ಸೌಥಿ, ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (ಎಂಎಸ್ ಧೋನಿ) ಅವರ ದಾಖಲೆಯನ್ನು ಪುಡಿಗಟ್ಟಿದ್ದಾರೆ. ಹಾಗೆಯೇ ಧೋನಿ ಜೊತೆಗೆ ಇಂಗ್ಲೆಂಡ್‌ನ ಕೆವಿನ್ ಪೀಟರ್ಸನ್ ಮತ್ತು ಪಾಕಿಸ್ತಾನದ ಮಾಜಿ ನಾಯಕ ಮಿಸ್ಬಾ-ಉಲ್-ಹಕ್ ದಾಖಲೆಯನ್ನು ಮುರಿದಿದ್ದಾರೆ.

ಈ ಪಂದ್ಯದಲ್ಲಿ ಬರೋಬ್ಬರಿ 6 ಸಿಕ್ಸರ್ ಬಾರಿಸಿದ ಸೌಥಿ, ಟೆಸ್ಟ್ ಕ್ರಿಕೆಟ್‌ನಲ್ಲಿ ಸಿಕ್ಸರ್ ಬಾರಿಸುವ ವಿಷಯದಲ್ಲಿ ಅವರು ಧೋನಿ, ಇಂಗ್ಲೆಂಡ್‌ನ ಕೆವಿನ್ ಪೀಟರ್ಸನ್ ಮತ್ತು ಪಾಕಿಸ್ತಾನದ ಮಾಜಿ ನಾಯಕ ಮಿಸ್ಬಾ-ಉಲ್-ಹಕ್ ಅವರನ್ನು ಹಿಂದಿಕ್ಕಿದ್ದಾರೆ. ಇದರ ಜೊತೆಗೆ ಮ್ಯಾಥ್ಯೂ ಹೇಡನ್ ಮತ್ತು ಆಂಡ್ರ್ಯೂ ಫ್ಲಿಂಟಾಫ್ ದಾಖಲೆಯನ್ನೂ ಸರಿಗಟ್ಟಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಎಂಎಸ್ ಧೋನಿ 144 ಇನ್ನಿಂಗ್ಸ್‌ಗಳಲ್ಲಿ 78 ಸಿಕ್ಸರ್‌ಗಳನ್ನು ಬಾರಿಸಿದರೆ, ಟಿಮ್ ಸೌಥಿ 82 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದರೊಂದಿಗೆ ಸಿಕ್ಸರ್‌ಗಳ ವಿಚಾರದಲ್ಲಿ ಧೋನಿಯನ್ನು ಹಿಂದಿಕ್ಕಿದ್ದಾರೆ.

ಹಾಗೆಯೇ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಟಿಮ್ ಸೌಥಿ 11ನೇ ಸ್ಥಾನಕ್ಕೆ ತಲುಪಿದ್ದಾರೆ. ಆದರೆ, ಈ ಇನ್ನಿಂಗ್ಸ್‌ಗೂ ಮುನ್ನ 15ನೇ ಸ್ಥಾನದಲ್ಲಿದ್ದ ಸೌಥಿ, ಈ ಪಂದ್ಯದಲ್ಲಿ 6 ಸಿಕ್ಸರ್ ಬಾರಿಸುವ ಮೂಲಕ 11ನೇ ಸ್ಥಾನಕ್ಕೆ ತಲುಪಿದ್ದಾರೆ.
Published On - 5:45 pm, Sun, 26 February 23




