NZ vs ENG: ಕಿವೀಸ್ ನಾಯಕ ಟಿಮ್ ಸೌಥಿ ಅಬ್ಬರಕ್ಕೆ ಧೋನಿ ದಾಖಲೆ ಉಡೀಸ್!

| Updated By: ಪೃಥ್ವಿಶಂಕರ

Updated on: Feb 26, 2023 | 5:46 PM

NZ vs ENG: ಟೆಸ್ಟ್ ಕ್ರಿಕೆಟ್‌ನಲ್ಲಿ ಎಂಎಸ್ ಧೋನಿ 144 ಇನ್ನಿಂಗ್ಸ್‌ಗಳಲ್ಲಿ 78 ಸಿಕ್ಸರ್‌ಗಳನ್ನು ಬಾರಿಸಿದರೆ, ಟಿಮ್ ಸೌಥಿ 82 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದರೊಂದಿಗೆ ಸಿಕ್ಸರ್​ಗಳ ವಿಚಾರದಲ್ಲಿ ಧೋನಿಯನ್ನು ಹಿಂದಿಕ್ಕಿದ್ದಾರೆ.

1 / 5
ಪ್ರಸ್ತುತ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ನಾಯಕ ಟಿಮ್ ಸೌಥಿ ತಮ್ಮ ಇನ್ನಿಂಗ್ಸ್‌ನಲ್ಲಿ ಕೇವಲ 49 ಎಸೆತಗಳಲ್ಲಿ 5 ಬೌಂಡರಿ ಮತ್ತು 6 ಸಿಕ್ಸರ್‌ಗಳ ಸಹಾಯದಿಂದ 73 ರನ್ ಬಾರಿಸಿದ್ದಾರೆ. ಇದರೊಂದಿಗೆ ಹಲವು ದಾಖಲೆಗಳನ್ನು ಬರೆದಿದ್ದಾರೆ.

2 / 5
ಈ ಪಂದ್ಯದಲ್ಲಿ ಸಿಕ್ಸರ್​ಗಳ ಸುರಿಮಳೆಗೈದ ಸೌಥಿ, ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (ಎಂಎಸ್ ಧೋನಿ) ಅವರ ದಾಖಲೆಯನ್ನು ಪುಡಿಗಟ್ಟಿದ್ದಾರೆ. ಹಾಗೆಯೇ ಧೋನಿ ಜೊತೆಗೆ ಇಂಗ್ಲೆಂಡ್‌ನ ಕೆವಿನ್ ಪೀಟರ್ಸನ್ ಮತ್ತು ಪಾಕಿಸ್ತಾನದ ಮಾಜಿ ನಾಯಕ ಮಿಸ್ಬಾ-ಉಲ್-ಹಕ್ ದಾಖಲೆಯನ್ನು ಮುರಿದಿದ್ದಾರೆ.

3 / 5
ಈ ಪಂದ್ಯದಲ್ಲಿ ಬರೋಬ್ಬರಿ 6 ಸಿಕ್ಸರ್‌ ಬಾರಿಸಿದ ಸೌಥಿ, ಟೆಸ್ಟ್ ಕ್ರಿಕೆಟ್‌ನಲ್ಲಿ ಸಿಕ್ಸರ್ ಬಾರಿಸುವ ವಿಷಯದಲ್ಲಿ ಅವರು ಧೋನಿ, ಇಂಗ್ಲೆಂಡ್‌ನ ಕೆವಿನ್ ಪೀಟರ್ಸನ್ ಮತ್ತು ಪಾಕಿಸ್ತಾನದ ಮಾಜಿ ನಾಯಕ ಮಿಸ್ಬಾ-ಉಲ್-ಹಕ್ ಅವರನ್ನು ಹಿಂದಿಕ್ಕಿದ್ದಾರೆ. ಇದರ ಜೊತೆಗೆ ಮ್ಯಾಥ್ಯೂ ಹೇಡನ್ ಮತ್ತು ಆಂಡ್ರ್ಯೂ ಫ್ಲಿಂಟಾಫ್ ದಾಖಲೆಯನ್ನೂ ಸರಿಗಟ್ಟಿದ್ದಾರೆ.

4 / 5
ಟೆಸ್ಟ್ ಕ್ರಿಕೆಟ್‌ನಲ್ಲಿ ಎಂಎಸ್ ಧೋನಿ 144 ಇನ್ನಿಂಗ್ಸ್‌ಗಳಲ್ಲಿ 78 ಸಿಕ್ಸರ್‌ಗಳನ್ನು ಬಾರಿಸಿದರೆ, ಟಿಮ್ ಸೌಥಿ 82 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದರೊಂದಿಗೆ ಸಿಕ್ಸರ್​ಗಳ ವಿಚಾರದಲ್ಲಿ ಧೋನಿಯನ್ನು ಹಿಂದಿಕ್ಕಿದ್ದಾರೆ.

5 / 5
ಹಾಗೆಯೇ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಟಿಮ್ ಸೌಥಿ 11ನೇ ಸ್ಥಾನಕ್ಕೆ ತಲುಪಿದ್ದಾರೆ. ಆದರೆ, ಈ ಇನ್ನಿಂಗ್ಸ್‌ಗೂ ಮುನ್ನ 15ನೇ ಸ್ಥಾನದಲ್ಲಿದ್ದ ಸೌಥಿ, ಈ ಪಂದ್ಯದಲ್ಲಿ 6 ಸಿಕ್ಸರ್ ಬಾರಿಸುವ ಮೂಲಕ 11ನೇ ಸ್ಥಾನಕ್ಕೆ ತಲುಪಿದ್ದಾರೆ.

Published On - 5:45 pm, Sun, 26 February 23