NZ vs AUS: ನ್ಯೂಝಿಲೆಂಡ್​ನ ಬಗ್ಗು ಬಡಿದು ವಿಶ್ವ ದಾಖಲೆ ಬರೆದ ಆಸ್ಟ್ರೇಲಿಯಾ

| Updated By: ಝಾಹಿರ್ ಯೂಸುಫ್

Updated on: Feb 25, 2024 | 12:59 PM

New Zealand vs Australia, 3rd T20I: ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಸ್ಟ್ರೇಲಿಯಾ ತಂಡ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 100 ಗೆಲುವು ದಾಖಲಿಸಿದ ವಿಶೇಷ ದಾಖಲೆಯನ್ನು ಆಸ್ಟ್ರೇಲಿಯಾ ತಂಡ ಬರೆದಿದೆ. ಅಲ್ಲದೆ ಈ ಸಾಧನೆ ಮಾಡಿದ 4ನೇ ತಂಡ ಎನಿಸಿಕೊಂಡಿದೆ.

1 / 6
ಆಕ್ಲೆಂಡ್​ನ ಈಡನ್ ಪಾರ್ಕ್ ಮೈದಾನದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಮಳೆಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 10.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 118 ರನ್​ ಕಲೆಹಾಕಿತು.

2 / 6
ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಇದಾದ ಬಳಿಕ ಡಕ್​ವರ್ಥ್ ಲೂಯಿಸ್ ನಿಯಮದ ಪ್ರಕಾರ ನ್ಯೂಝಿಲೆಂಡ್ ತಂಡಕ್ಕೆ 10 ಓವರ್​ಗಳಲ್ಲಿ 126 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ 3 ವಿಕೆಟ್ ಕಳೆದುಕೊಂಡು 98 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆಸ್ಟ್ರೇಲಿಯಾ ತಂಡವು 27 ರನ್​ಗಳ ಜಯ ಸಾಧಿಸಿದೆ.

3 / 6
ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್​ನಲ್ಲಿ 100 ಪಂದ್ಯಗಳನ್ನು ಗೆದ್ದ ವಿಶೇಷ ದಾಖಲೆಯನ್ನು ಆಸ್ಟ್ರೇಲಿಯಾ ತಂಡ ಬರೆದಿದೆ. ಇದಕ್ಕೂ ಮುನ್ನ ಟಿ20 ಕ್ರಿಕೆಟ್​ನಲ್ಲಿ ಕೇವಲ 3 ತಂಡಗಳು ಮಾತ್ರ ನೂರಕ್ಕಿಂತ ಹೆಚ್ಚಿನ ಪಂದ್ಯಗಳಲ್ಲಿ ಜಯ ಸಾಧಿಸಿದೆ.

4 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾ. 219 ಟಿ20 ಪಂದ್ಯಗಳನ್ನಾಡಿರುವ ಭಾರತ ತಂಡವು ಒಟ್ಟು 140 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ.

5 / 6
ಹಾಗೆಯೇ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಪಾಕಿಸ್ತಾನ್ ತಂಡ 231 ಪಂದ್ಯಗಳಲ್ಲಿ 136 ರಲ್ಲಿ ಜಯ ಸಾಧಿಸಿದೆ. ಮೂರನೇ ಸ್ಥಾನದಲ್ಲಿ ನ್ಯೂಝಿಲೆಂಡ್ ತಂಡವಿದ್ದು, ಕಿವೀಸ್ ಪಡೆ 211 ಪಂದ್ಯಗಳಲ್ಲಿ 107 ಮ್ಯಾಚ್​ಗಳಲ್ಲಿ ಗೆಲುವು ಸಾಧಿಸಿದೆ.

6 / 6
ಇದೀಗ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯನ್ನು 3-0 ಅಂತರದಿಂದ ಗೆಲ್ಲುವ ಮೂಲಕ ಆಸ್ಟ್ರೇಲಿಯಾ ತಂಡ 100ನೇ ಗೆಲುವು ದಾಖಲಿಸಿದೆ. ಇದುವರೆಗೆ 188 ಟಿ20 ಪಂದ್ಯಗಳನ್ನಾಡಿರುವ ಆಸೀಸ್ ಪಡೆ, ಇದೀಗ ನೂರನೇ ಗೆಲುವು ದಾಖಲಿಸಿ ಟಿ20 ಕ್ರಿಕೆಟ್​ನಲ್ಲಿ 100 ಪಂದ್ಯಗಳಲ್ಲಿ ಜಯ ಸಾಧಿಸಿದ ವಿಶ್ವದ 4ನೇ ತಂಡವಾಗಿ ಹೊರಹೊಮ್ಮಿದೆ.