
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಏಕದಿನ ಸರಣಿ ಆರಂಭಕ್ಕೇ ಒಂದು ದಿನವಷ್ಟೇ ಬಾಕಿಯಿದೆ. ನವೆಂಬರ್ 25 ಶುಕ್ರವಾರದಂದು ಆಕ್ಲೆಂಡ್ನ ಈಡನ್ ಪಾರ್ಕ್ನಲ್ಲಿ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ 1-0 ಅಂತರದಿಂದ ಸರಣಿ ವಶಪಡಿಸಿಕೊಂಡ ಭಾರತ ಇದೀಗ ಏಕದಿನ ಸರಣಿ ಮೇಲೂ ಕಣ್ಣಿಟ್ಟಿದೆ. ಟೀಮ್ ಇಂಡಿಯಾವನ್ನು ನಾಯಕನಾಗಿ ಶಿಖರ್ ಧವನ್ ಮುನ್ನಡೆಸುತ್ತಿದ್ದಾರೆ. ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಸೇರಿದಂತೆ ಕೆಲ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ಈಗಾಗಲೇ ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಹಾಗೂ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಏಕದಿನ ಸರಣಿಯ ಟ್ರೋಫಿಯನ್ನು ಅನಾವರಣ ಮಾಡಿದ್ದಾರೆ.

ಅಭ್ಯಾಸದಲ್ಲಿ ನಿರತರಾಗಿರುವ ಟೀಮ್ ಇಂಡಿಯಾ ಅಟಗಾರರು.

ಟಿ20 ಸರಣಿಯಲ್ಲಿ ಅವಕಾಶ ಸಿಗದ ಸಂಜು ಸ್ಯಾಮ್ಸನ್ಗೆ ಏಕದಿನ ಸರಣಿಯಲ್ಲಿ ಕಣಕ್ಕಿಳಿಸುತ್ತಾರ ಎಂಬುದು ಕುತೂಹಲ ಕೆರಳಿಸಿದೆ.

ಕುಲ್ದೀಪ್ ಯಾದವ್ ಕೂಡ ಅವಕಾಶದ ನಿರೀಕ್ಷೆಯಲ್ಲಿದ್ದಾರೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಏಕದಿನ ಪಂದ್ಯ ನವೆಂಬರ್ 25 ಶುಕ್ರವಾರದಂದು ಆಕ್ಲೆಂಡ್ನ ಈಡನ್ ಪಾರ್ಕ್ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯ ಬೆಳಗ್ಗೆ 7 ಗಂಟೆಗೆ ಶುರುವಾಗಲಿದೆ. ಟಾಸ್ ಪ್ರಕ್ರಿಯೆ 6:30ಕ್ಕೆ ನಡೆಯಲಿದೆ. ನೇರಪ್ರಸಾರ ಡಿಡಿ ಸ್ಪೋರ್ಟ್ಸ್ ಮತ್ತು ಅಮೆಜಾನ್ ಪ್ರೈಮ್ನಲ್ಲಿ ಇರಲಿದೆ.

ಭಾರತ: ಶಿಖರ್ ಧವನ್ (ನಾಯಕ), ರಿಷಬ್ ಪಂತ್ (ಉಪ ನಾಯಕ & ವಿಕೆಟ್ ಕೀಪರ್), ಶುಬ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಶಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ದೀಪಕ್ ಚಹಾರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.