AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ನ್ಯೂಝಿಲೆಂಡ್ ತಂಡದ್ದು ಅಂತಿಂಥ ಗೆಲುವಲ್ಲ..!

India vs New Zealand, 2nd ODI: ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಗೆಲುವು ದಾಖಲಿಸಿ ನ್ಯೂಝಿಲೆಂಡ್ ತಂಡವು ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಂಡಿದೆ. ರಾಜ್​ಕೋಟ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 284 ರನ್​ಗಳಿಸಿದರೆ, ನ್ಯೂಝಿಲೆಂಡ್ ತಂಡವು ಈ ಗುರಿಯನ್ನು 47.3 ಓವರ್​ಗಳಲ್ಲಿ ಚೇಸ್ ಮಾಡಿದೆ.

ಝಾಹಿರ್ ಯೂಸುಫ್
|

Updated on: Jan 15, 2026 | 7:47 AM

Share
ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಕಿವೀಸ್ ಪಡೆ ಭಾರತೀಯ ಪಿಚ್​ನಲ್ಲಿ ಐತಿಹಾಸಿಕ ಸಾಧನೆಯನ್ನು ಸಹ ಮಾಡಿದೆ. ಅಂದರೆ ಇದು ನ್ಯೂಝಿಲೆಂಡ್ ತಂಡದ್ದು ಅಂತಿಂಥ ಗೆಲುವಲ್ಲ.

1 / 5
ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮೈಕೆಲ್ ಬ್ರೇಸ್​ವೆಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (112) ಅಜೇಯ ಶತಕ ಸಿಡಿಸಿದ್ದರು. ಈ ಶತಕದ ನೆರವಿನೊಂದಿಗೆ ಭಾರತ ತಂಡವು 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 284 ರನ್ ಕಲೆಹಾಕಿತು.

2 / 5
285 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ನ್ಯೂಝಿಲೆಂಡ್ ಪರ ಡೇರಿಲ್ ಮಿಚೆಲ್ ಅಜೇಯ 131 ರನ್ ಬಾರಿಸಿದರೆ, ವಿಲ್ ಯಂಗ್ 87 ರನ್​ಗಳಿಸಿದರು. ಈ ಮೂಲಕ ಕಿವೀಸ್ ಪಡೆ 47.3 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 286 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

3 / 5
ವಿಶೇಷ ಎಂದರೆ ಇದು ಭಾರತದಲ್ಲಿ ನ್ಯೂಝಿಲೆಂಡ್ ತಂಡದ ಗರಿಷ್ಠ ರನ್ ಚೇಸ್ ಆಗಿದೆ. ಅಂದರೆ ಇದಕ್ಕೂ ಮುನ್ನ ಕಿವೀಸ್ ಪಡೆ ಭಾರತೀಯ ಪಿಚ್​ನಲ್ಲಿ ಬೆನ್ನತ್ತಿ ಗೆದ್ದ ಗರಿಷ್ಠ ಸ್ಕೋರ್ 283. 2023 ರಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಇಂಗ್ಲೆಂಡ್  ವಿರುದ್ಧ 283 ರನ್​ಗಳನ್ನು ಚೇಸ್ ಮಾಡಿರುವುದೇ ಶ್ರೇಷ್ಠ ಸಾಧನೆಯಾಗಿತ್ತು.

4 / 5
ಇದೀಗ ಭಾರತದಲ್ಲಿ ಬಲಿಷ್ಠ ಭಾರತ ತಂಡಕ್ಕೆ ಸೋಲುಣಿಸುವಲ್ಲಿ ನ್ಯೂಝಿಲೆಂಡ್ ತಂಡ ಯಶಸ್ವಿಯಾಗಿದೆ. ಅದು ಕೂಡ ಬರೋಬ್ಬರಿ 285 ರನ್​ಗಳನ್ನು ಚೇಸ್ ಮಾಡುವ ಮೂಲಕ. ಈ ಚೇಸಿಂಗ್​ನೊಂದಿಗೆ ಭಾರತೀಯ ಪಿಚ್​​ನಲ್ಲಿ ನ್ಯೂಝಿಲೆಂಡ್ ತಂಡವು ತನ್ನ ದಾಖಲೆಯನ್ನು ಪುನರ್​ಸ್ಥಾಪಿಸಿದೆ.

5 / 5
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ

ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ

ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ

ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ

ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ

ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ

ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು

PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ

ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ