AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣೀರಿನೊಂದಿಗೆ ವಿದಾಯ ಹೇಳಿದ ಸೋಫಿ ಡಿವೈನ್

Sophie Devine retires: ಮಹಿಳಾ ಏಕದಿನ ವಿಶ್ವಕಪ್​ನ 27ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಝಿಲೆಂಡ್ ತಂಡ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಕಿವೀಸ್ ತಂಡದ ನಾಯಕಿ ಸೋಫಿ ಡಿವೈನ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಈ ವೇಳೆ ಭಾವುಕರಾದ ಅವರು ಕಣ್ಣೀರು ಹಾಕಿದರು.

ಝಾಹಿರ್ ಯೂಸುಫ್
|

Updated on: Oct 27, 2025 | 10:54 AM

Share
ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ್ತಿ ಸೋಫಿ ಡಿವೈನ್ (Sophie Devine) ಏಕದಿನ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ. ಮಹಿಳಾ ಏಕದಿನ ವಿಶ್ವಕಪ್​ 27ನೇ ಪಂದ್ಯದ ಮೂಲಕ ಸೋಫಿ 19 ವರ್ಷಗಳ ಒಡಿಐ ಕ್ರಿಕೆಟ್​ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ. 

1 / 5
ನ್ಯೂಝಿಲೆಂಡ್ ಪರ 2006 ರಲ್ಲಿ ಪಾದಾರ್ಪಣೆ ಮಾಡಿದ್ದ ಸೋಫಿ ಡಿವೈನ್ ಒಟ್ಟು 159 ಏಕದಿನ ಪಂದ್ಯಗಳನ್ನಾಡಿದ್ದರು. ಈ ವೇಳೆ 144 ಇನಿಂಗ್ಸ್ ಆಡಿರುವ ಅವರು 4279 ರನ್ ಕಲೆಹಾಕಿದ್ದರು. ಈ ವೇಳೆ ಅವರ ಬ್ಯಾಟ್​ನಿಂದ 9 ಭರ್ಜರಿ ಶತಕ ಹಾಗೂ 18 ಅರ್ಧಶತಕಗಳು ಮೂಡಿಬಂದಿದ್ದವು.

2 / 5
ಇನ್ನು 133 ಏಕದಿನ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದ ಸೋಫಿ ಡಿವೈನ್ ಒಟ್ಟು 5262 ಎಸೆತಗಳನ್ನು ಎಸೆದಿದ್ದರು. ಈ ವೇಳೆ 111 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಮೂಲಕ ನ್ಯೂಝಿಲೆಂಡ್ ಪರ ಏಕದಿನ ಕ್ರಿಕೆಟ್​ನಲ್ಲಿ 4 ಸಾವಿರ ರನ್ ಹಾಗೂ 100 ವಿಕೆಟ್ ಪಡೆದ ವಿಶೇಷ ಸಾಧನೆ ಮಾಡಿದ್ದರು.

3 / 5
​ಇದೀಗ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಸೋಫಿ ಡಿವೈನ್ ಏಕದಿನ ಕ್ರಿಕೆಟ್​ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ. ಇದಾಗ್ಯೂ ಅವರು ಫ್ರಾಂಚೈಸಿ ಲೀಗ್​ ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಸೋಫಿ ಕಣಕ್ಕಿಳಿಯುವ ಸಾಧ್ಯತೆಯಿದೆ.

4 / 5
ಅಂದಹಾಗೆ ಸೋಫಿ ಡಿವೈನ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಸ್ಟಾರ್ ಆಟಗಾರ್ತಿ. ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಡಿವೈನ್ 2024 ರಲ್ಲಿ ರಾಯಲ್ ಪಡೆ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ವೈಯುಕ್ತಿಕ ಕಾರಣಗಳಿಂದಾಗಿ ಅವರು 2025 ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಏಕದಿನ ಕ್ರಿಕೆಟ್​​​ಗೆ ವಿದಾಯ ಹೇಳಿರುವ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯುವ ಇರಾದೆಯಲ್ಲಿದ್ದಾರೆ.

5 / 5
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್

ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ

ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ

ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?