
ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ್ತಿ ಸೋಫಿ ಡಿವೈನ್ (Sophie Devine) ಏಕದಿನ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ. ಮಹಿಳಾ ಏಕದಿನ ವಿಶ್ವಕಪ್ 27ನೇ ಪಂದ್ಯದ ಮೂಲಕ ಸೋಫಿ 19 ವರ್ಷಗಳ ಒಡಿಐ ಕ್ರಿಕೆಟ್ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ.

ನ್ಯೂಝಿಲೆಂಡ್ ಪರ 2006 ರಲ್ಲಿ ಪಾದಾರ್ಪಣೆ ಮಾಡಿದ್ದ ಸೋಫಿ ಡಿವೈನ್ ಒಟ್ಟು 159 ಏಕದಿನ ಪಂದ್ಯಗಳನ್ನಾಡಿದ್ದರು. ಈ ವೇಳೆ 144 ಇನಿಂಗ್ಸ್ ಆಡಿರುವ ಅವರು 4279 ರನ್ ಕಲೆಹಾಕಿದ್ದರು. ಈ ವೇಳೆ ಅವರ ಬ್ಯಾಟ್ನಿಂದ 9 ಭರ್ಜರಿ ಶತಕ ಹಾಗೂ 18 ಅರ್ಧಶತಕಗಳು ಮೂಡಿಬಂದಿದ್ದವು.

ಇನ್ನು 133 ಏಕದಿನ ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದ ಸೋಫಿ ಡಿವೈನ್ ಒಟ್ಟು 5262 ಎಸೆತಗಳನ್ನು ಎಸೆದಿದ್ದರು. ಈ ವೇಳೆ 111 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಮೂಲಕ ನ್ಯೂಝಿಲೆಂಡ್ ಪರ ಏಕದಿನ ಕ್ರಿಕೆಟ್ನಲ್ಲಿ 4 ಸಾವಿರ ರನ್ ಹಾಗೂ 100 ವಿಕೆಟ್ ಪಡೆದ ವಿಶೇಷ ಸಾಧನೆ ಮಾಡಿದ್ದರು.

ಇದೀಗ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಸೋಫಿ ಡಿವೈನ್ ಏಕದಿನ ಕ್ರಿಕೆಟ್ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ. ಇದಾಗ್ಯೂ ಅವರು ಫ್ರಾಂಚೈಸಿ ಲೀಗ್ ಕ್ರಿಕೆಟ್ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲೂ ಸೋಫಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಅಂದಹಾಗೆ ಸೋಫಿ ಡಿವೈನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ್ತಿ. ಕಳೆದ ಎರಡು ಸೀಸನ್ಗಳಲ್ಲಿ ಆರ್ಸಿಬಿ ಪರ ಕಣಕ್ಕಿಳಿದಿದ್ದ ಡಿವೈನ್ 2024 ರಲ್ಲಿ ರಾಯಲ್ ಪಡೆ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ವೈಯುಕ್ತಿಕ ಕಾರಣಗಳಿಂದಾಗಿ ಅವರು 2025 ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಏಕದಿನ ಕ್ರಿಕೆಟ್ಗೆ ವಿದಾಯ ಹೇಳಿರುವ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಕಣಕ್ಕಿಳಿಯುವ ಇರಾದೆಯಲ್ಲಿದ್ದಾರೆ.