AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂರನ್ ಸಿಕ್ಸರ್​ಗೆ ಕ್ರಿಸ್ ಗೇಲ್ ವಿಶ್ವ ದಾಖಲೆಯೇ ಉಡೀಸ್..!

Nicholas Pooran - Chris Gayle: ಟಿ20 ಕ್ರಿಕೆಟ್​ನ ಸಿಕ್ಸರ್ ಕಿಂಗ್ ಎನಿಸಿಕೊಂಡಿದ್ದ ಕ್ರಿಸ್ ಗೇಲ್ ಅವರ ಒಂದೊಂದೇ ದಾಖಲೆಗಳನ್ನು ನಿಕೋಲಸ್ ಪೂರನ್ ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಟಿ20 ವಿಶ್ವಕಪ್​ನಲ್ಲಿ ವಿಂಡೀಸ್ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ಗೇಲ್ ದಾಖಲೆಯನ್ನು ಮುರಿದಿದ್ದ ಪೂರನ್ ಈ ಬಾರಿ ಯುನಿವರ್ಸ್ ಬಾಸ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 02, 2024 | 8:53 AM

Share
ಕೆರಿಬಿಯನ್ ಪ್ರೀಮಿಯರ್ ಲೀಗ್​ನ 3ನೇ ಪಂದ್ಯದಲ್ಲಿ ಎಡಗೈ ದಾಂಡಿಗ ನಿಕೋಲಸ್ ಪೂರನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಟ್ರಿನ್​ಬಾಗೊ ನೈಟ್ ರೈಡರ್ಸ್ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪೂರನ್ 43 ಎಸೆತಗಳಲ್ಲಿ 97 ರನ್ ಚಚ್ಚಿದ್ದರು.

1 / 5
ಈ 97 ರನ್​ಗಳಲ್ಲಿ ನಿಕೋಲಸ್ ಪೂರನ್ ಬ್ಯಾಟ್​ನಿಂದ ಮೂಡಿಬಂದ ಸಿಕ್ಸ್​ಗಳ ಸಂಖ್ಯೆ 9. ಈ ಒಂಭತ್ತು ಸಿಕ್ಸ್​ಗಳೊಂದಿಗೆ ವಿಂಡೀಸ್ ದಾಂಡಿಗ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಸಾರ್ವಕಾಲಿಕ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ಅದು ಸಹ ಈ ವರ್ಷ ಸಿಕ್ಸ್​ಗಳ ಸುರಿಮಳೆಗೈಯ್ಯುವ ಮೂಲಕ ಎಂಬುದು ವಿಶೇಷ.

2 / 5
ಅಂದರೆ ವರ್ಷವೊಂದರಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್​ ಸಿಡಿಸಿದ ವಿಶ್ವ ದಾಖಲೆ ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. 2015 ರಲ್ಲಿ ಗೇಲ್ ಒಟ್ಟು 135 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 5
ಇದೀಗ 9 ವರ್ಷಗಳ ಬಳಿಕ ಈ ದಾಖಲೆಯನ್ನು ಉಡೀಸ್ ಮಾಡುವಲ್ಲಿ ನಿಕೋಲಸ್ ಪೂರನ್ ಯಶಸ್ವಿಯಾಗಿದ್ದಾರೆ. 2024 ರಲ್ಲಿ ಪೂರನ್ ಒಟ್ಟು 139 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ವರ್ಷ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

4 / 5
ಸದ್ಯ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯುತ್ತಿರುವ ಪೂರನ್ ಈ ವರ್ಷದೊಳಗೆ ಮತ್ತಷ್ಟು ಟಿ20 ಪಂದ್ಯಗಳನ್ನಾಡಲಿದ್ದಾರೆ. ಹೀಗಾಗಿ ಒಂದೇ ವರ್ಷ 150 ಸಿಕ್ಸ್​ಗಳನ್ನು ಸಿಡಿಸಿದ ವಿಶ್ವದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸುವ ಉತ್ತಮ ಅವಕಾಶ ಪೂರನ್ ಮುಂದಿದೆ. ಅದರಂತೆ ಸಿಕ್ಸ್​ಗಳ ಮೂಲಕವೇ ವಿಂಡೀಸ್ ದಾಂಡಿಗ ಟಿ20 ಕ್ರಿಕೆಟ್​ನಲ್ಲಿ ಹೊಸ ಚರಿತ್ರೆ ಸೃಷ್ಟಿಸಲಿದ್ದಾರಾ ಕಾದು ನೋಡಬೇಕಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!