AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಕೋಲಸ್ ಪೂರನ್ ಸಿಡಿಲಬ್ಬರಕ್ಕೆ ರಿಝ್ವಾನ್ ವಿಶ್ವ ದಾಖಲೆ ಉಡೀಸ್..!

Nicholas Pooran Records: ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷ ಅತ್ಯಧಿಕ ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದ ನಿಕೋಲಸ್ ಪೂರನ್ ಇದೀಗ ಪಾಕಿಸ್ತಾನ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ ಹೆಸರಿನಲ್ಲಿದ್ದ ವರ್ಲ್ಡ್ ರೆಕಾರ್ಡ್​ ಅನ್ನು ಅಳಿಸಿ ಹಾಕಿದ್ದಾರೆ. ಅದು ಸಹ 2 ಸಾವಿರಕ್ಕೂ ಅಧಿಕ ರನ್ ಕಲೆಹಾಕುವ ಮೂಲಕ ಎಂಬುದೇ ಅಚ್ಚರಿ.

ಝಾಹಿರ್ ಯೂಸುಫ್
|

Updated on: Sep 28, 2024 | 12:54 PM

Share
ಕೆರಿಬಿಯನ್ ಪ್ರೀಮಿಯರ್ ಲೀಗ್​ನ 28ನೇ ಪಂದ್ಯದಲ್ಲಿ ಬಾರ್ಬಡೋಸ್ ರಾಯಲ್ ವಿರುದ್ಧ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡದ ಸ್ಪೋಟಕ ದಾಂಡಿಗ ನಿಕೋಲಸ್ ಪೂರನ್ 15 ಎಸೆತಗಳಲ್ಲಿ 1 ಸಿಕ್ಸ್, 4 ಫೋರ್​ಗಳೊಂದಿಗೆ 27 ರನ್ ಬಾರಿಸಿದ್ದರು. ಈ ಇಪ್ಪತ್ತೇಳು ರನ್​ಗಳೊಂದಿಗೆ ಪೂರನ್ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಪಾಕ್ ಆಟಗಾರ ಮೊಹಮ್ಮದ್ ರಿಝ್ವಾನ್ ಅವರ ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ.

1 / 6
ಅಂದರೆ ಟಿ20 ಕ್ರಿಕೆಟ್​ನಲ್ಲಿ ಒಂದು ಕ್ಯಾಲೆಂಡರ್ ವರ್ಷದೊಳಗೆ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಮೊಹಮ್ಮದ್ ರಿಝ್ವಾನ್ ಹೆಸರಿನಲ್ಲಿತ್ತು. 2021ರಲ್ಲಿ ಪಾಕ್ ದಾಂಡಿಗ 45 ಇನಿಂಗ್ಸ್​ಗಳಲ್ಲಿ ಒಟ್ಟು 2036 ರನ್ ಬಾರಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಪೂರನ್ ಮುರಿದಿದ್ದಾರೆ.

2 / 6
2024 ರಲ್ಲಿ 65 ಟಿ20 ಇನಿಂಗ್ಸ್ ಆಡಿರುವ ನಿಕೋಲಸ್ ಪೂರನ್ ಈವರೆಗೆ 2059 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 6
ಹಾಗೆಯೇ ಕ್ಯಾಲೆಂಡರ್ ವರ್ಷವೊಂದರಲ್ಲಿ ಟಿ20 ಕ್ರಿಕೆಟ್​ನಲ್ಲಿ 2 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ನಿಕೋಲಸ್ ಪೂರನ್ ಪಾತ್ರರಾಗಿದ್ದಾರೆ. ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಮೊಹಮ್ಮದ್ ರಿಝ್ವಾನ್.

4 / 6
ಇನ್ನು ಟಿ20 ಕ್ರಿಕೆಟ್​ನಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್​ನ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. 2016 ರಲ್ಲಿ ಆರ್​ಸಿಬಿ ಮತ್ತು ಟೀಮ್ ಇಂಡಿಯಾ ಪರ ಒಟ್ಟು 29 ಟಿ20 ಇನಿಂಗ್ಸ್ ಆಡಿದ್ದ ಕಿಂಗ್ ಕೊಹ್ಲಿ 1614 ರನ್ ಕಲೆಹಾಕಿ ಈ ದಾಖಲೆ ನಿರ್ಮಿಸಿದ್ದಾರೆ.

5 / 6
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆಯನ್ನೂ ಸಹ ಪೂರನ್ ತಮ್ಮದಾಗಿಸಿಕೊಂಡಿದ್ದಾರೆ. 2024 ರಲ್ಲಿ 65 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಪೂರನ್ ಒಟ್ಟು 152 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ವರ್ಷ 150+ ಸಿಕ್ಸ್ ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 6
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ

‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ