ಕೆರಿಬಿಯನ್ ಪ್ರೀಮಿಯರ್ ಲೀಗ್ನ 28ನೇ ಪಂದ್ಯದಲ್ಲಿ ಬಾರ್ಬಡೋಸ್ ರಾಯಲ್ ವಿರುದ್ಧ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡದ ಸ್ಪೋಟಕ ದಾಂಡಿಗ ನಿಕೋಲಸ್ ಪೂರನ್ 15 ಎಸೆತಗಳಲ್ಲಿ 1 ಸಿಕ್ಸ್, 4 ಫೋರ್ಗಳೊಂದಿಗೆ 27 ರನ್ ಬಾರಿಸಿದ್ದರು. ಈ ಇಪ್ಪತ್ತೇಳು ರನ್ಗಳೊಂದಿಗೆ ಪೂರನ್ ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಪಾಕ್ ಆಟಗಾರ ಮೊಹಮ್ಮದ್ ರಿಝ್ವಾನ್ ಅವರ ವರ್ಲ್ಡ್ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ.