6,6,6,6,6,6,6,6: ಪೂರನ್ ಪವರ್ಫುಲ್ ಶತಕ
Major League Cricket 2025: ಸಿಯಾಟಲ್ ಓರ್ಕಾಸ್ ವಿರುದ್ಧದ ಪಂದ್ಯದಲ್ಲಿ ಎಂಐ ನ್ಯೂಯಾರ್ಕ್ ತಂಡದ ನಾಯಕ ನಿಕೋಲಸ್ ಪೂರನ್ ಸ್ಪೋಟಕ ಸೆಂಚುರಿ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಎಂಐ ನ್ಯೂಯಾರ್ಕ್ ತಂಡವು 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 238 ರನ್ ಕಲೆಹಾಕಿದೆ.
Updated on: Jun 28, 2025 | 7:53 AM

ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ (MLC 2025) ಟೂರ್ನಿಯ 18ನೇ ಪಂದ್ಯದಲ್ಲಿ ನಿಕೋಲಸ್ ಪೂರನ್ ಭರ್ಜರಿ ಶತಕ ಸಿಡಿಸಿದ್ದಾರೆ. ಎಂಐ ನ್ಯೂಯಾರ್ಕ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಯಾಟಲ್ ಓರ್ಕಾಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಎಂಐ ನ್ಯೂಯಾರ್ಕ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗರಾದ ಕ್ವಿಂಟನ್ ಡಿಕಾಕ್ 1 ರನ್ ಗಳಿಸಿ ಔಟಾದರೆ, ಮೊನಾಂಕ್ ಪಟೇಲ್ 20 ರನ್ ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದ್ದರು.

ಈ ಹಂತದಲ್ಲಿ ಕಣಕ್ಕಿಳಿದ ಎಂಐ ನ್ಯೂಯಾರ್ಕ್ ತಂಡದ ನಾಯಕ ನಿಕೋಲಸ್ ಪೂರನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 10 ಓವರ್‌ಗಳ ಮುಕ್ತಾಯದ ವೇಳೆಗೆ ನ್ಯೂಯಾರ್ಕ್ ತಂಡದ ಸ್ಕೋರ್ 100 ರನ್ಗಳಿಗೆ ಬಂದು ನಿಂತಿತು.

ಇದಾದ ಬಳಿಕ ಕೂಡ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಪೂರನ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್ - ಫೋರ್ಗಳ ಸುರಿಮಳೆಗೈದರು. ಪರಿಣಾಮ ಪೂರನ್ ಬ್ಯಾಟ್ ನಿಂದ 55 ಎಸೆತಗಳಲ್ಲಿ ಸ್ಫೋಟಕ ಸೆಂಚುರಿ ಮೂಡಿಬಂತು. ವಿಶೇಷ ಎಂದರೆ ಇದು ಎಂಎಲ್ಸಿ ಲೀಗ್ನಲ್ಲಿ ಪೂರನ್ ಅವರ ಎರಡನೇ ಶತಕವಾಗಿದೆ.

ಇನ್ನು ಈ ಪಂದ್ಯದಲ್ಲಿ ಅಜೇಯರಾಗಿ ಉಳಿದ ನಿಕೋಲಸ್ ಪರೂನ್ 60 ಎಸೆತಗಳನ್ನು ಎದುರಿಸಿದ ನಿಕೋಲಸ್ ಪೂರನ್ 8 ಭರ್ಜರಿ ಸಿಕ್ಸ್ ಹಾಗೂ 8 ಫೋರ್ ಗಳೊಂದಿಗೆ ಅಜೇಯ 108 ರನ್ ಬಾರಿಸಿದರು. ಈ ಮೂಲಕ ಎಂಐ ನ್ಯೂಯಾರ್ಕ್ ತಂಡವು 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 238 ರನ್ ಕಲೆಹಾಕಿದೆ.









